Saturday, October 21, 2023

Dasara bumper gift from government to state government employees: 3.75% increase in DA

  Wisdom News       Saturday, October 21, 2023
Hedding : Dasara bumper gift from government to state government employees: 3.75% increase in DA

ರಾಜ್ಯ ಸರ್ಕಾರ ಡಿಎ ಹೆಚ್ಚಳ ಮಾಡಿ ಆದೇಶಿಸಿದೆ. ರಾಜ್ಯ ಸರ್ಕಾರಿ ನೌಕರರ ಸಂಘ ಡಿಎ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು. ಈ ಮನವಿ ಪುರಸ್ಕರಿಸಿ ದಸರಾ ಗಿಫ್ಟ್ ಕೊಟ್ಟಿದೆ.

ಬೆಂಗಳೂರು: ದಸರಾ ಹಬ್ಬದ ಪ್ರಯುಕ್ತ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ.

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ. 3.75ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.38.75ಗೆ ಏರಿಕೆಯಾಗಿದೆ. UGC/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ನು ಶೇ.4 ರಷ್ಟು ಹೆಚ್ಚಿಸಿ (ಶೇ.46 ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ.

ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು 4 ಶೇ. ದಷ್ಟು ಹೆಚ್ಚಿಸಿ ಸಿಹಿ ಸುದ್ದಿ ನೀಡಿತ್ತು. ಅ. 18ರಂದು ಕೇಂದ್ರ ಸರ್ಕಾರ ಈ ಘೋಷಣೆ ಮಾಡಿತ್ತು. ಇದೀಗ ರಾಜ್ಯ ಸರ್ಕಾರ ತನ್ನ ನೌಕರರ ಡಿಎಯನ್ನು 3.75 ಶೇ. ಹೆಚ್ಚಿಸಿ ಹಬ್ಬಕ್ಕೆ ಗುಡ್ ನ್ಯೂಸ್ ನೀಡಿದೆ. ಕೇಂದ್ರ ಸರ್ಕಾರ ಡಿಎ ಹೆಚ್ಚಿಸಿದ ಹಿನ್ನೆಲೆ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರಿ ನೌಕರರ ಡಿಎ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು.

ಇದೀಗ ರಾಜ್ಯ ಸರ್ಕಾರ ರಾಜ್ಯದ ಸರ್ಕಾರಿ ನೌಕರರಿಗೆ ಹಬ್ಬದ ಸಿಹಿ ಸುದ್ದಿ ನೀಡಿದೆ. ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.3.75ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (ಸಿಸಿಇಎ) ಸಭೆಯಲ್ಲಿ ಡಿಎ ಏರಿಕೆಗೆ ತೀರ್ಮಾನ ಮಾಡಲಾಗಿದೆ.

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ನೌಕರರ ತುಟ್ಟಿಭತ್ಯೆ (ಡಿಎ)ಯನ್ನು ಶೇ.4ರಷ್ಟು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ.

ಇದರಿಂದ 50 ಲಕ್ಷಕ್ಕೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಮತ್ತು 62 ಲಕ್ಷ ಪಿಂಚಣಿದಾರರು ಇದರ ಲಾಭ ಪಡೆಯಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (ಸಿಸಿಇಎ) ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ. ಇಂದಿನ ಶೇ.4ರಷ್ಟು ಡಿಎ ಹೆಚ್ಚಳದಿಂದ ಸರ್ಕಾರಿ ನೌಕರರಿಗೆ ನೀಡಲಾಗುವ ಒಟ್ಟು ಡಿಎ ಶೇ.34ರಿಂದ ಶೇ.38ಕ್ಕೆ ಏರಿಕೆಗೊಂಡಂತೆ ಆಗಿದೆ. ಡಿಎ ಮೂಲ ವೇತನದ ಮೇಲೆ ನಿರ್ಧರಿಸಲಾಗುತ್ತದೆ ಮತ್ತು ಇದನ್ನು ಮೂಲ ವೇತನಕ್ಕೆ ಸೇರಿಸಲಾಗುತ್ತದೆ.

ಸರ್ಕಾರವು ಸಾಮಾನ್ಯವಾಗಿ ವರ್ಷದಲ್ಲಿ ಜನವರಿ ಮತ್ತು ಜುಲೈ ತಿಂಗಳಲ್ಲಿ ಎರಡು ಬಾರಿ ಡಿಎ ಪರಿಷ್ಕರಿಸುತ್ತದೆ. ಈಗ ಜುಲೈ ತಿಂಗಳಿಂದ ಪೂರ್ವನ್ವಯವಾಗುವಂತೆ ಡಿಎ ಘೋಷಿಸಲಾಗಿದೆ. ರಾಜ್ಯ ಸರ್ಕಾರಗಳೂ ಇದನ್ನು ಅನುಸರಿಸುವ ಸಾಧ್ಯತೆ ಇದೆ.

ಇದಲ್ಲದೇ, ಕೇಂದ್ರ ಸಚಿವ ಸಂಪುಟವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಇನ್ನೂ 3 ತಿಂಗಳವರೆಗೆ ಡಿಸೆಂಬರ್‌ವರೆಗೆ ವಿಸ್ತರಿಸಲು ಮುಂದಾಗಿದೆ.



logoblog

Thanks for reading Dasara bumper gift from government to state government employees: 3.75% increase in DA

Previous
« Prev Post

No comments:

Post a Comment