ವಸತಿ ಶಾಲಾ-ಕಾಲೇಜುಗಳ 808 ಹುದ್ದೆ ಭರ್ತಿಗೆ ಒಪ್ಪಿಗೆ
ಬೆಂಗಳೂರು: ಮೊರಾರ್ಜಿ ದೇಸಾಯಿ ವಸತಿ ಶಾಲೆ ಉನ್ನತೀಕರಣ, ವಿದ್ಯಾರ್ಥಿಗಳ ದಾಖಲಾತಿ ದ್ವಿಗುಣ, ಹೊಸದಾಗಿ 10 ವಸತಿ ಶಾಲೆ ಆರಂಭ ತೀರ್ಮಾನ
ಹಿನ್ನೆಲೆಯಲ್ಲಿ 708 ಹುದ್ದೆ ಹೊರಗುತ್ತಿಗೆ, 100 ಕಾಯಂ ಸೇರಿ 808 ಹುದ್ದೆಗಳ ಭರ್ತಿಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್‌ಖಾನ್ ತಿಳಿಸಿದ್ದಾರೆ. 808 ಹುದ್ದೆಗಳ ಪೈಕಿ 10 ಪ್ರಿನ್ಸಿಪಾಲ್, 248 ಉಪನ್ಯಾಸಕರು, 60 ಶಿಕ್ಷಕರು ಸೇರಿದ್ದಾರೆ. 10 ಹೊಸ ಮೊರಾರ್ಜಿ ದೇಸಾಯಿ ಶಾಲೆಗೆ 100 ಹುದ್ದೆ ಕೆಪಿಎಸ್‌ಸಿ ಮೂಲಕ ನೇಮಕಕ್ಕೂ ಹಣಕಾಸು ಇಲಾಖೆ ಅನುಮತಿ ನೀಡಿದೆ. ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಮೀರ್ ಅಹಮದ್ ಖಾನ್, ಪ್ರಿನ್ಸಿಪಾಲ್, ಉಪನ್ಯಾಸಕರು, ಶಿಕ್ಷಕರು, ಇತರ ಸಿಬ್ಬಂದಿ ಅಗತ್ಯತೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದರು.
No comments:
Post a Comment