Monday, November 13, 2023

2023-24 General Transfer Guidelines for Govt Employees Transferring...

  Wisdom News       Monday, November 13, 2023
Hedding ; 2023-24 General Transfer Guidelines for Govt Employees Transferring...


2023-24 ಸಾಲಿನ ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ...

2023-24 ಸಾಲಿನಲ್ಲಿ ಸಾರ್ವತ್ರಿಕ ವರ್ಗಾವಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. 2023-24ನೇ ಸಾಲಿಗೆ ಗ್ರೂಪ್ ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ, ನೌಕರರಿಗೆ ಅನ್ವಯವಾಗುವಂತೆ ವರ್ಗಾವಣೆ ಮಾರ್ಗಸೂಚಿ ಹೊರಡಿಸಲಾಗಿದೆ.

ಸರ್ಕಾರಿ ನೌಕರರ ವರ್ಗಾವಣೆ ಕುರಿತಂತೆ ವಿಸ್ಕೃತವಾದ ಮಾರ್ಗಸೂಚಿಗಳನ್ನು ನೀಡಲಾಗಿದ್ದು, ಈ ಮಾರ್ಗಸೂಚಿಗಳ ಪುಕಾರ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳುಗಳಲ್ಲಿ ಮಾತ್ರ ಸದರಿ ಮಾರ್ಗಸೂಚಿಗಳಲ್ಲಿರುವ ಷರತ್ತುಗಳಿಗೊಳಪಟ್ಟು ಮಾಡಬಹುದಾಗಿದೆ. ಒಂದು ಜೇಷ್ಟತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ರನ್ನು ಮೀರದಂತೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಲಾಗಿದೆ.

ಜೂ.1 ರಿಂದ ಜೂ.15 ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಸಾರ್ವತ್ರಿಕ ವರ್ಗಾವಣೆ ಮಾಡಲಾಗುತ್ತಿದೆ. ವರ್ಗಾವಣೆಗೆ ಕುರಿತು ಕೂಡ ಆಯಾಯ ಇಲಾಖಾ ಸಚಿವರುಗಳಿಗೆ ಅಧಿಕಾರ ನೀಡಲಾಗಿದೆ.

ಶೇ.4ರಷ್ಟು ತುಟ್ಟಿ ಭತ್ಯೆ ಹೆಚ್ಚಳ :ರಾಜ್ಯ ಸರಕಾರಿ ನೌಕರರಿಗೆ ಶೇಕಡಾ ನಾಲ್ಕರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರಕಾರ ಆದೇಶ ಮಾಡಿದೆ. ಮೂಲ ವೇತನದ ಡಿಎ ಯನ್ನು ಶೇಕಡ 31 ರಿಂದ 35 ಕ್ಕೆ ಹೆಚ್ಚಳ ಮಾಡಿ ಹಣಕಾಸು ಇಲಾಖೆ ಇಂದೇ ಆದೇಶ ಹೊರಡಿಸಿದ್ದು, ಹೊಸದಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಸರ್ಕಾರಿ ನೌಕರರು ಹಲವು ದಿನಗಳ ಬೇಡಿಕೆಯನ್ನು ಈಡೇರಿಸಿದ್ದು, ಇದೀಗ 2023 ಜನವರಿ 1 ರಿಂದ ಜಾರಿಗೆ ಬರುವಂತೆ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.





logoblog

Thanks for reading 2023-24 General Transfer Guidelines for Govt Employees Transferring...

Previous
« Prev Post

No comments:

Post a Comment