ಪದವೀಧರ, ಶಿಕ್ಷಕರ ಕ್ಷೇತ್ರಗಳ ಮತದಾರರ ಕರಡು ಪಟ್ಟಿ ಪ್ರಕಟಿಸಿದ ಚುನಾವಣೆ ಆಯೋಗ
ಮೂರು ಪದವೀಧರ ಕ್ಷೇತ್ರ ಹಾಗೂ ನಾಲ್ಕು ಶಿಕ್ಷಕರ ಕ್ಷೇತ್ರಗಳ ಮತದಾರರ ಕರಡು ಪಟ್ಟಿಯನ್ನು ರಾಜ್ಯ ಚುನಾವಣೆ ಆಯೋಗ ಗುರುವಾರ ಪ್ರಕಟಿಸಿದೆ.
ಕೇಂದ್ರ ಚುನಾವಣೆ ಆಯೋಗದ ವೇಳಾಪಟ್ಟಿಯಂತೆ ಹೊಸದಾಗಿ (ಡಿ–ನೊವೊ) ಮತದಾರರ ಪಟ್ಟಿಯನ್ನು ಸಿದ್ಧಗೊಳಿಸಬೇಕಿದ್ದು, ಡಿ.30ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ರಾಜ್ಯದ ಮುಖ್ಯ ಚುನಾವಣೆ ಅಧಿಕಾರಿ ಮನೋಜ್‌ಕುಮಾರ್ ಮೀನಾ ತಿಳಿಸಿದ್ದಾರೆ.
ಅರ್ಜಿ 18 ಅಥವಾ 19 ಅನ್ನು ನ.6ರವರೆಗೆ ಸ್ವೀಕರಿಸಲಾಗಿದ್ದು, ಅದರಂತೆ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದೆ. ಡಿ.9ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದವರು ಪಟ್ಟಿಯಲ್ಲಿ ಹೆಸರಿರುವುದರ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ಅರ್ಹ ಶಿಕ್ಷಕರು ಹಾಗೂ ಪದವೀಧರರು ಡಿ.9ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ಮಾಹಿತಿ ನೀಡಿದ್ದಾರೆ.
ಈಶಾನ್ಯ, ನೈರುತ್ಯ, ಬೆಂಗಳೂರು ಪದವೀಧರರ ಕ್ಷೇತ್ರ ಹಾಗೂ ಆಗ್ನೇಯ, ನೈರುತ್ಯ ಶಿಕ್ಷಕರ ಕ್ಷೇತ್ರಗಳ ಸದಸ್ಯರ ಅವಧಿ 2024ರ ಜೂನ್ 6ರಂದು ಮುಗಿಯಲಿದೆ. ನೈರುತ್ಯ ಪದವೀಧರರ ಕ್ಷೇತ್ರದ ಸದಸ್ಯ ಆಯನೂರು ಮಂಜುನಾಥ ಅವರು ರಾಜೀನಾಮೆ ನೀಡಿರುವುದರಿಂದ ಸ್ಥಾನ ಏ.19ರಿಂದ ಖಾಲಿ ಉಳಿದಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದ ಸದಸ್ಯ ಪುಟ್ಟಣ್ಣ ಅವರು ರಾಜೀನಾಮೆ ನೀಡಿದ್ದರಿಂದ ಮಾರ್ಚ್ 16ರಿಂದ ಖಾಲಿ ಉಳಿದಿದೆ. ಈ ಎರಡೂ ಕ್ಷೇತ್ರಗಳಿಗೆ ಡಿ–ನೊವೊ ಪ್ರಕ್ರಿಯೆ ನಡೆಯುತ್ತಿದ್ದರಿಂದ ಮತದಾರರ ಪಟ್ಟಿ ಸಿದ್ಧವಾಗದ ಕಾರಣ ಮರು ಚುನಾವಣೆ ನಡೆದಿರಲಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಕ್ಷಕರು ಮತ್ತು ಪದವೀಧರರು ಮತದಾನ ಮಾಡಬಹುದಾದ ಚುನಾವಣೆಯ ಅಂತಿಮ ಮತದಾರರ ಪಟ್ಟಿಯನ್ನು ಡಿಸೆಂಬರ್ 30 ರಂದು ಪ್ರಕಟಿಸಲು ಪ್ರಾಧಿಕಾರ ಯೋಜಿಸಿದೆ. ಕಳೆದ ಎರಡು ತಿಂಗಳಿಂದ ಪದವೀಧರ ಕ್ಷೇತ್ರದ ಚುನಾವಣೆಗೆ 39,858 ಮತದಾರರು ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗೆ 6,343 ಮತದಾರರು ನೋಂದಾಯಿಸಿಕೊಂಡಿದ್ದಾರೆ. ..
ಶಿಕ್ಷಕರ, ಪದವೀಧರ ಕ್ಷೇತ್ರದ ಕರಡು ಮತಪಟ್ಟಿ ಪ್ರಕಟ.ಆಕ್ಷೇಪಣೆ ಆಹ್ವಾನ, ಡಿ.30ರ ಬಳಿಕ ಅಂತಿಮ ಪಟ್ಟಿ.ಮುಂದಿನ ವರ್ಷ ವಿಧಾನಪರಿಷತ್‌ಗೆ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದಿಂದ ನಡೆಯುವ ಚುನಾವಣೆಗೆ ಸಕಲ ಸಿದ್ಧತೆಯಲ್ಲಿ ತೊಡಗಿರುವ ಚುನಾವಣಾ ಆಯೋಗವು ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ.ರಾಜ್ಯದ ನಾಲ್ಕು ಶಿಕ್ಷಕರ ಕ್ಷೇತ್ರದಲ್ಲಿ 61,643 ಮತದಾರರಿದ್ದು, ಮೂರು ಪದವೀಧರ ಕ್ಷೇತ್ರದಲ್ಲಿ 2,73,776 ಮತದಾರರಿದ್ದಾರೆ. ಒಟ್ಟು 3,35,419 ಮತದಾರರು ನೋಂದಣಿಯಾಗಿದ್ದಾರೆ. ಡಿ.12ರವರೆಗೆ ಮತದಾರರು ತಮ್ಮ ಹೆಸರು ನೋಂದಣಿಗೆ ಅವಕಾಶ ಮತ್ತು ಹೆಸರು, ವಿಳಾಸ ಸೇರಿದಂತೆ ಯಾವುದೇ ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಡಿ.9ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿ.25ರಂದು ಆಕ್ಷೇಪಣೆಗಳ ವಿಲೇವಾರಿ ನಡೆಯಲಿದೆ. ಡಿ.30ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ..
ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಗುರುವಾರ ಪ್ರಕಟಿಸಲಾಗಿದ್ದು, ಪಟ್ಟಿಯಲ್ಲಿ 2.73 ಲಕ್ಷ ಹೊಸ ಮತದಾರರ ಸೇರ್ಪಡೆಗೊಂಡಿದ್ದಾರೆ.
7 ಕ್ಷೇತ್ರಗಳಲ್ಲಿ ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ 1,40,423 ಪದವೀಧರರು ನೋಂದಾಯಿಸಿಕೊಂಡಿದ್ದಾರೆ. ಬೆಂಗಳೂರು ಪದವೀಧರರ ಕ್ಷೇತ್ರ 67,787, ಕರ್ನಾಟಕ ನೈಋತ್ಯ ಪದವೀಧರರ ಕ್ಷೇತ್ರ 65,566, ಶಿಕ್ಷಕರ ಕ್ಷೇತ್ರಗಳ ಪೈಕಿ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 20,465, ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರ 16,950, ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ 14,206 ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ 10,022 ಶಿಕ್ಷಕರು ಮತದಾನ ಮಾಡಲು ಅರ್ಹರಾಗಿದ್ದಾರೆ.
ಬಿಬಿಎಂಪಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್.ರಾಮಚಂದ್ರನ್ ಮಾತನಾಡಿ, ಚುನಾವಣಾ ಆಯೋಗದ ನಿರ್ದೇಶನದಂತೆ ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಮೇಲ್ಮನೆ ಚುನಾವಣೆಗೆ ಮತದಾರ ಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ನ.6ರವರೆಗೆ ಸಲ್ಲಿಕೆ ಆಗಿರುವ ಅರ್ಜಿಗಳನ್ನು ಪರಿಶೀಲನೆ ಮಾಡಿ ಇದೀಗ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ.
ಒಟ್ಟು 39,858 ಪದವೀಧರ ಕ್ಷೇತ್ರದ ಮತದಾರರಿದ್ದು, ಈ ಪೈಕಿ 17,717 ಪುರುಷರು, 22,135 ಮಹಿಳಾ ಮತದಾರರು ಹಾಗೂ 6 ಮಂದಿ ಲೈಂಗಿಕ ಅಲ್ಪಸಂಖ್ಯಾತ ಮತದಾರರಿದ್ದಾರೆ. ಇನ್ನು ಒಟ್ಟು 6,343 ಶಿಕ್ಷಕರ ಕ್ಷೇತ್ರದ ಮತದಾರರಿದ್ದು, ಈ ಪೈಕಿ 1,909 ಪುರುಷರು, 4,433 ಮಹಿಳೆಯರು ಹಾಗೂ ಓರ್ವ ಲೈಂಗಿಕ ಅಲ್ಪಸಂಖ್ಯಾತ ಮತದಾರರಿದ್ದಾರೆಂದು ಮಾಹಿತಿ ನೀಡಿದರು.
ಕರಡು ಮತದಾರರ ಪಟ್ಟಿನ ಅಕ್ಷೇಪಣೆಗಳನ್ನು ನಗರದ 28 ವಿಧಾನಸಭಾ ಕ್ಷೇತ್ರದ ಸಹಾಯಕ ಮತದಾನ ನೋದಣಿ ಅಧಿಕಾರಿಗಳಿಗೆ ಸಲ್ಲಿಸಬಹುದು. ಡಿ.9 ಆಕ್ಷೇಪಣೆ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆಕ್ಷೇಪಣೆಗಳನ್ನು ಪರಿಶೀಲಿಸಿ ಡಿ.30ರಂದು ಅಂತಿಮ ಮತದಾರ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ವಿವರಿಸಿದರು.
No comments:
Post a Comment