SSLC Exam 2023 : SSLC ಪೂರ್ವ ಸಿದ್ಧತಾ ಪರೀಕ್ಷೆ ಯಾವಾಗ? ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.
SSLC Preparatory Exam 2023 : 2022-23ನೇ ಸಾಲಿನ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗಳಿಗೆ ಕೇವಲ ಎಂಟು ದಿನಗಳು ಮಾತ್ರ ಬಾಕಿ ಉಳಿದಿದ್ದು, ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಿ ಈಗಿನಿಂದಲೇ ಆರಂಭಿಸಿಕೊಳ್ಳಿ. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ತಪ್ಪಿಸದೆ ಪೂರ್ವ ಸಿದ್ಧತಾ ಪರೀಕ್ಷೆಗಳಿಗೆ ಹಾಜರಾಗಿ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಈಗಾಗಲೇ 2022-23ನೇ ಸಾಲಿನ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ವೇಳಾಪಟ್ಟಿಯಂತೆ ಪರೀಕ್ಷೆಗಳನ್ನು ನಡೆಸಲು ಮಂಡಲಿ ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ.
ಮಂಡಲಿ ಬಿಡುಗಡೆ ಮಾಡಿರುವ ವೇಳಾಪಟ್ಟಿಯ ಪ್ರಕಾರ 2022-23ನೇ ಸಾಲಿನ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಫೆಬ್ರುವರಿ 22,2023 ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ಮಾರ್ಚ್ 01, 2023ಕ್ಕೆ ಪರೀಕ್ಷೆಗಳು ಮುಕ್ತಾಯವಾಗಲಿದೆ.
ಇನ್ನು 2022-23ನೇ ಸಾಲಿನ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗಳಿಗೆ ಕೇವಲ ಎಂಟು ದಿನಗಳು ಮಾತ್ರ ಬಾಕಿ ಉಳಿದಿದ್ದು, ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಿ ಈಗಿನಿಂದಲೇ ಆರಂಭಿಸಿಕೊಳ್ಳಿ. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ತಪ್ಪಿಸದೆ ಪೂರ್ವ ಸಿದ್ಧತಾ ಪರೀಕ್ಷೆಗಳಿಗೆ ಹಾಜರಾಗಿ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಬಿಡುಗಡೆ ಮಾಡಿರುವ 2022-23ನೇ ಸಾಲಿನ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ..
ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ ದಿನಾಂಕ - 23-02-2023.
ದ್ವಿತೀಯ ಭಾಷೆ -ಇಂಗ್ಲಿಷ್, ಕನ್ನಡ ದಿನಾಂಕ- 24-02-2023.
ತೃತೀಯ ಭಾಷೆ- ಹಿಂದಿ, ಕನ್ನಡ, ಇಂಗ್ಲಿಷ್, ತುಳು, ಕೊಂಕಣಿ, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ ದಿನಾಂಕ - 25-02-2023.
26-02-2023 - ಭಾನುವಾರ ರಜಾ ದಿನ.
ಗಣಿತ ದಿನಾಂಕ - 27-02-2023.
ವಿಜ್ಞಾನ ದಿನಾಂಕ - 28-02-2023.
ಸಮಾಜ ದಿನಾಂಕ - 01-02-2023.
ಈಗಾಗಲೇ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಪಠ್ಯ ಮುಗಿದ ಕಾರಣ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ವಿದ್ಯಾರ್ಥಿಗಳು ಯಾವ ಕಾರಣಕ್ಕೂ ಈ ಪರೀಕ್ಷೆಗಳನ್ನು ತಪ್ಪಿಸಿಕೊಳ್ಳಬೇಡಿ. ಮುಖ್ಯ ಪರೀಕ್ಷೆಗೆ ನಡೆಸುವ ತಾಲಿಮು ಇದು. ಇಲ್ಲಿ ನೀವು ನಿಮ್ಮ ತಪ್ಪುಗಳನ್ನು ಸುಧಾರಿಸಿಕೊಳ್ಳಲು ಅನುಕೂಲವಾಗುತ್ತದೆ.
ವರ್ಷವಿಡಿ ಅಧ್ಯಯನ ಮಾಡಿ ಒಂದು ಹಂತಕ್ಕೆ ಬಂದಿರುವ ಸಮಯವಿದು. ಈ ಸಮಯ ನಿಮ್ಮ ಜೀವನವನ್ನು ರೂಪಿಸಿಕೊಳ್ಳಲು ಉತ್ತಮವಾದ ಆಯ್ಕೆಯಾಗಿದೆ. ಎಷ್ಟೋ ಜನರು ಈ ಅವಧಿಯನ್ನು ಚೆನ್ನಾಗಿ ಬಳಕೆ ಮಾಡಿಕೊಂಡು ಪರೀಕ್ಷೆಯಲ್ಲಿ ಗೆದ್ದವರು ತುಂಬಾ ಜನ ಇದ್ದಾರೆ. ಹಾಗಾಗಿ ಬೇರೆ ಯಾವುದೇ ವಿಚಾರಕ್ಕೆ ಸಮಯ ವ್ಯರ್ಥ ಮಾಡದೇ ಕೇವಲ ಪರೀಕ್ಷೆ ದೃಷ್ಟಿಯಿಂದ ಅಧ್ಯಯನ ಮಾಡಿ ಸಮಯವನ್ನು ಬಳಸಿಕೊಳ್ಳಿ. ಪರೀಕ್ಷೆಗೆ ಕಡಿಮೆ ಸಮಯ ಉಳಿದಿರುವ ಕಾರಣ, ಈ ಸಮಯದ ಪ್ರಾಮಾಣಿಕ ಅಧ್ಯಯನ ಮಾಡಿ ಪರೀಕ್ಷೆಗೆ ತಯಾರಾಗಿ.
Preparatory Exam: SSLC ವಿದ್ಯಾರ್ಥಿಗಳಿಗೆ ಪೂರ್ವ ಸಿದ್ಧತಾ ಪರೀಕ್ಷೆ ದಿನಾಂಕ ಪ್ರಕಟ; ಇಲ್ಲಿದೆ ಮಹತ್ವದ ಮಾಹಿತಿ
ರಾಜ್ಯದ ಎಲ್ಲ ಪ್ರೌಢ ಶಾಲೆಗಳಲ್ಲೂ ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಗಳನ್ನು ಫೆ.23ರಿಂದ ಮಾರ್ಚ್ 1ರವರೆಗೆ ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಬಿಡುಗಡೆ ಮಾಡಿದೆ.
ಈಗಾಗಲೇ ಹತ್ತನೇ ತರಗತಿ ವಿದ್ಯಾರ್ಥಿಗಳ ಫೈನಲ್ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆಗೊಂಡಿದೆ. ವಿದ್ಯಾರ್ಥಿಗಳೆಲ್ಲಾ ಪರೀಕ್ಷಾ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದಾರೆ. ಇದರ ನಡುವೆಯೇ ಮತ್ತೊಂದು ಮಹತ್ತರ ಮಾಹಿತಿ ಇದೆ ಗಮನಿಸಿ.
ಪ್ರತೀ ವರ್ಷ ವಿದ್ಯಾರ್ಥಿಗಳಿಗೆ ಸಹಾಯವಾಗಲಿ ಎಂದು ಪೂರ್ವ ಸಿದ್ಧತಾ ಪರೀಕ್ಷೆಯನ್ನು ನಡೆಸಲಾಗುತ್ತದೆ. ಅದೇ ರೀತಿ ಈ ವರ್ಷವೂ ಕೂಡಾ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲಾಗುತ್ತಿದೆ. ಪೂರ್ವ ಸಿದ್ಧತಾ ಪರೀಕ್ಷೆಯ ದಿನಾಂಕ ಪ್ರಕಟವಾಗಿದೆ ಗಮನಿಸಿ.
ಈ ಬಾರಿ ಇದೇ ತಿಂಗಳು ಅಂದರೆ ಫೆಬ್ರವರಿ 23 ರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಲಾಗಿದೆ. ಈ ಪರೀಕ್ಷೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ.
ರಾಜ್ಯದ ಎಲ್ಲ ಪ್ರೌಢ ಶಾಲೆಗಳಲ್ಲೂ ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಗಳನ್ನು ಫೆ.23ರಿಂದ ಮಾರ್ಚ್ 1ರವರೆಗೆ ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಬಿಡುಗಡೆ ಮಾಡಿದೆ.
ಫೆ.23ರಂದು ಪ್ರಥಮ ಭಾಷಾ ವಿಷಯಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ ಎಲ್ಲವೂ 100 ಅಂಕಗಳು), 24ರಂದು ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ (80 ಅಂಕಗಳು), 25ರಂದು ತೃತೀಯ ಭಾಷಾ ವಿಷಯಗಳು (80 ಅಂಕಗಳು),
27ರಂದು ಗಣಿತ, 28ರಂದು ವಿಜ್ಞಾನ, ಮಾರ್ಚ್ 1ರಂದು ಸಮಾಜ ವಿಜ್ಞಾನ ತಲಾ 80 ಅಂಕಗಳ ಪರೀಕ್ಷೆಗಳು ನಡೆಯಲಿವೆ. ಎಲ್ಲ ಪರೀಕ್ಷೆಗಳನ್ನೂ ಪ್ರತಿದಿನ ಬೆಳಿಗ್ಗೆ 10.30ರಿಂದ 1.30ರವರೆಗೆ ನಡೆಸಬೇಕು ಎಂದು ಸೂಚನೆ ಬಿಡುಗಡೆ ಮಾಡಲಾಗಿದೆ.
ಜೆಟಿಎಸ್ ಸೇರಿದಂತೆ ಪರ್ಯಾಯ ವಿಷಯಗಳಿಗೆ ಶಾಲಾ ಹಂತದದಲ್ಲೇ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿಕೊಂಡು ಪರೀಕ್ಷೆಗಳನ್ನು ನಡೆಸಲು ಮುಖ್ಯ ಶಿಕ್ಷಕರು ಕ್ರಮ ಕೈಗೊಳ್ಳಬೇಕು ಎಂದು ಮಂಡಳಿ ನಿರ್ದೇಶಕರು ಸೂಚಿಸಿದ್ದಾರೆ.
ಎಸ್‌ಎಸ್‌ಎಲ್‌ಸಿಯ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು (SSLC Exam 2023) ನಡೆಸಲು ಶಾಲೆಗಳು ಸಿದ್ಧತೆ ನಡೆಸಿರುವಾಗಲೇ ಸಾರ್ವಜನಿಕ ಶಿಕ್ಷಣ ಇಲಾಖೆಯು ಪರೀಕ್ಷೆಯಲ್ಲಿ ಕೆಲ ಬದಲಾವಣೆಗಳನ್ನು ಮಾಡಿದ್ದು, ಮುಖ್ಯವಾಗಿ ರಾಜ್ಯ ಮಟ್ಟದಲ್ಲಿ ಈ ಬಾರಿ ಪ್ರಶ್ನೆ ಪತ್ರಿಕೆ ಸಿದ್ಧವಾಗಲಿದೆ. ಅಲ್ಲದೆ, ಪರೀಕ್ಷಾ ಶುಲ್ಕವನ್ನು 10 ರೂ. ಇಳಿಸಲಾಗಿದೆ.
ಈ ಪರೀಕ್ಷೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವುದಕ್ಕೆ ಬದಲಾಗಿ ಈ ಬಾರಿ ಮುಖ್ಯ ಪರೀಕ್ಷೆಯ ಮಾದರಿಯಲ್ಲಿಯೇ ರಾಜ್ಯಮಟ್ಟದಲ್ಲಿಯೇ ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸುವುದಾಗಿಯೂ ಇಲಾಖೆ ತಿಳಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (kseeb) ಪೂರ್ವ ಸಿದ್ಧತಾ ಪರೀಕ್ಷೆಗೂ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್‌ಗೆ ಕಳುಹಿಸಲಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಇದನ್ನು ಮುದ್ರಿಸಿ, ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲು ಶಾಲೆಗಳಿಗೆ ತಲುಪಿಸಲಿದ್ದಾರೆ.
ಈ ಹಿಂದೆಯೇ ಮಂಡಳಿಯೇ ಪೂರ್ವ ಸಿದ್ಧತಾ ಪರೀಕ್ಷೆಯನ್ನು ನಡೆಸುವ ಪ್ರಸ್ತಾಪ ಇತ್ತಾದರೂ, ಪ್ರಶ್ನೆ ಪತ್ರಿಕೆಯನ್ನು ಶಾಲೆಗಳಿಗೆ ತಲುಪಿಸುವುದು ಕಷ್ಟ ಎಂಬ ಕಾರಣಕ್ಕೆ ಮಂಡಳಿಯು ಈ ನಿರ್ಧಾರದಿಂದ ಹಿಂದೆ ಸರಿದಿತ್ತು. ಆದರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಒದಗಿಸುವ ಪ್ಲಾನ್ ಅನ್ನು ಈಗ ಮಂಡಳಿ ಮಾಡಿದೆ. ರಾಜ್ಯ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘ ಈ ಮೊದಲು ಇದೇ ರೀತಿಯಾಗಿ ರಾಜ್ಯಮಟ್ಟದಲ್ಲಿ ಪೂರ್ವಸಿದ್ಧತಾ ಪರೀಕ್ಷೆ ನಡೆಸುವ ಪ್ರಯತ್ನ ನಡೆಸಿತ್ತು. ಆದರೆ ಅದಕ್ಕೆ ಇಲಾಖೆ ಅನುಮತಿ ನೀಡಿರಲಿಲ್ಲ.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವುದಕ್ಕೆ ಆಗುತ್ತಿದ್ದ ಮಾನವ ಸಂಪನ್ಮೂಲದ ವಿನಿಯೋಗ ಇದರಿಂದ ತಪ್ಪಲಿದೆ. ಈ ಬಾರಿ ರಾಜ್ಯದ ಎಲ್ಲ ಶಾಲೆಗಳಲ್ಲಿಯೂ ಒಂದೇ ರೀತಿಯಲ್ಲಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಇರಲಿದ್ದು, ಮುಖ್ಯ ಪರೀಕ್ಷೆಯ ಸಿದ್ಧತೆಗೆ ಅನುಕೂಲವಾಗಲಿದೆ.
ಪೂರ್ವಸಿದ್ಧತಾ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ನೋಡಲು ಇಲ್ಲಿ ಕ್ಲಿಕ್ (Click Here) ಮಾಡಿ.
ಪೂರ್ವಸಿದ್ಧತಾ ಪರೀಕ್ಷೆಗೆ 60 ರೂ. ಶುಲ್ಕ ವಿಧಿಸುವಂತೆ ಶಿಕ್ಷಣ ಇಲಾಖೆಯು ಈ ಹಿಂದೆ ಸೂಚಿಸಿತ್ತು. ಈಗ ಇದನ್ನು 50 ರೂ.ಗಳಿಗೆ ಇಳಿಸಲಾಗಿದೆ. ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಸೂಚನೆ ಮೇರೆಗೆ ಪೂರ್ವಸಿದ್ಧತಾ ಪರೀಕ್ಷೆಯ ಶುಲ್ಕವನ್ನು ಕಡಿಮೆ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆ ಹೇಳಿದೆ.
ಎಸ್‌ಎಸ್‌ಎಲ್‌ಸಿಯ ಪೂರ್ವ ಸಿದ್ಧತಾ ಪರೀಕ್ಷೆಯನ್ನು ಫೆಬ್ರವರಿ 23 ರಿಂದ ಮಾರ್ಚ್ 1ರ ವರೆಗೆ ನಡೆಸಲಾಗುತ್ತದೆ. ಈಗಾಗಲೇ ಮಂಡಳಿಯು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
No comments:
Post a Comment