Monday, November 6, 2023

Ordered to extend the period of 7th Pay Commission till 15-03-2024...

  Wisdom News       Monday, November 6, 2023
Subject ; Ordered to extend the period of 7th Pay Commission till 15-03-2024...

7ನೇ ವೇತನ ಆಯೋಗದ ಜತೆ ಸಿ.ಎಂ ಚರ್ಚೆ...



ಬೆಂಗಳೂರು: ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತು ಏಳನೇ ವೇತನ ಆಯೋಗದ ಅಧ್ಯಕ್ಷರು, ಸದಸ್ಯರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಚರ್ಚೆ ನಡೆಸಿದರು.

ಮಾಜಿ ಮುಖ್ಯ ಕಾರ್ಯದರ್ಶಿ ಕೆ.ಸುಧಾಕರ್‌ ರಾವ್‌ ನೇತೃತ್ವದ 7ನೇ ವೇತನ ಆಯೋಗವನ್ನು ನವೆಂಬರ್‌ನಲ್ಲಿ ರಚಿಸಲಾಗಿತ್ತು. ಅಂದು ಸರ್ಕಾರ ಹೊರಡಿಸಿದ್ದ ಆದೇಶದಂತೆ 6 ತಿಂಗಳ ಒಳಗೆ ಆಯೋಗ ತನ್ನ ವರದಿ ನೀಡಬೇಕಿತ್ತು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಆಯೋಗದ ಅವಧಿಯನ್ನು ಮತ್ತೆ 6 ತಿಂಗಳು ವಿಸ್ತರಿಸಿತ್ತು.

ವರದಿ ಸಲ್ಲಿಕೆಗೆ ಒಂದು ತಿಂಗಳಷ್ಟೆ ಬಾಕಿ ಇದ್ದು, ಆಯೋಗ ತನ್ನ ಕಾರ್ಯವನ್ನೂ ಬಹುತೇಕ ಪೂರ್ಣಗೊಳಿಸಿದೆ. ಶಿಫಾರಸಿಗೂ ಮೊದಲು ಮುಖ್ಯಮಂತ್ರಿ ಹಾಗೂ ಆರ್ಥಿಕ ಇಲಾಖೆಯ ಅಧಿಕಾರಿಗಳು ಆಯೋಗದ ಜತೆ ಸಮಾಲೋಚನೆ ನಡೆಸಿದ್ದಾರೆ.

ಗ್ಯಾರಂಟಿ ಯೋಜನೆಗಳಿಗೆ ಹಣಕಾಸು ಹೊಂದಾಣಿಕೆ ಮಾಡುವ ಸವಾಲು ಎದುರಿಸುತ್ತಿರುವ ಸರ್ಕಾರ, ತಕ್ಷಣಕ್ಕೆ ತನ್ನ ನೌಕರರ ವೇತನ ಪರಿಷ್ಕರಣೆ ಮಾಡಿದರೆ ಆಗಬಹುದಾದ ಆರ್ಥಿಕ ಹೊರೆಯನ್ನು ನಿಭಾಯಿಸುವ ಮಾರ್ಗಗಳನ್ನು ಚರ್ಚಿಸಲಾಯಿತು. ಮಧ್ಯಮಾವಧಿ ವಿತ್ತೀಯ ಯೋಜನೆ ಪ್ರಕಾರ ವೇತನ ಪರಿಷ್ಕರಣೆಗೆ ವಾರ್ಷಿಕ ₹ 12 ಸಾವಿರ ಕೋಟಿಯಿಂದ ₹ 18 ಸಾವಿರ ಕೋಟಿ ಅಗತ್ಯವಿದೆ. ಸದ್ಯದ ಪರಿಸ್ಥಿತಿಯಲ್ಲಿ ಹಣ ಹೊಂದಾಣಿಕೆ ಸಾಧ್ಯವಾಗದಿದ್ದರೆ ಮತ್ತೆ ಆರು ತಿಂಗಳು ಆಯೋಗದ ಅವಧಿ ವಿಸ್ತರಿಸುವ ಕುರಿತೂ ಚಿಂತನೆ ನಡೆದವು ಎಂದು ಮೂಲಗಳು ತಿಳಿಸಿವೆ.  

ಆಯೋಗದ ಸದಸ್ಯ ನಿವೃತ್ತ ಐಎಎಸ್ ಅಧಿಕಾರಿ ಪಿ.ಬಿ.ರಾಮಮೂರ್ತಿ, ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಮಾಜಿ ಪ್ರಧಾನ ನಿರ್ದೇಶಕ ಶ್ರೀಕಾಂತ್‌ ಬಿ. ವನಹಳ್ಳಿ, ಸದಸ್ಯ ಕಾರ್ಯದರ್ಶಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌, ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್‌, ಕಾರ್ಯದರ್ಶಿಗಳಾದ ಪಿ.ಸಿ.ಜಾಫರ್, ಎಂ.ಟಿ. ರೇಜು ಉಪಸ್ಥಿತರಿದ್ದರು.


Subject : Order 



Subject Language : Kannada



Which Department : all



Place : Karnataka



Announcement Date:6/11/2023



Subject Format : PDF/JPJ



Subject Size : 56kb


Pages :3



Scanned Copy : Yes



Editable Text : NO



Password Protected :  



Download Link : Yes



Copy Text : NO



Print Enable : Yes



Quality : High



Subject Size Reduced :NO



Password : NO



Cost : Free



For Personal Use Only


logoblog

Thanks for reading Ordered to extend the period of 7th Pay Commission till 15-03-2024...

Previous
« Prev Post

No comments:

Post a Comment