Sunday, November 5, 2023

Petition for promotion of high school teachers to the post of lecturer

  Wisdom News       Sunday, November 5, 2023
Hedding  ; Petition for promotion of high school teachers to the post of lecturer

ಉಪನ್ಯಾಸಕ ಹುದ್ದೆಗೆ ಬಡ್ತಿ: ಪ್ರೌಢಶಾಲಾ ಶಿಕ್ಷಕರ ಆಗ್ರಹ


ಬೀದರ್:ಜು.24: ಅರ್ಹ ಪ್ರೌಢಶಾಲಾ ಶಿಕ್ಷಕರಿಗೆ ಪದವಿಪೂರ್ವ ಕಾಲೇಜು ಉಪನ್ಯಾಸಕ ಹುದ್ದೆಗೆ ಬಡ್ತಿ ನೀಡಬೇಕು ಎಂದು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಆಗ್ರಹಿಸಿದೆ.
ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದಲ್ಲಿ ನಿಯೋಗದಲ್ಲಿ ಅರಣ್ಯ, ಪರಿಸರ, ಜೈವಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಪತ್ರ ಸಲ್ಲಿಸಿದರು.


ಬಡ್ತಿ ಹೊಂದಿರುವ ಪ್ರೌಢಶಾಲಾ ಸಹ ಶಿಕ್ಷಕರಿಗೆ 10, 15, 20 ವರ್ಷಗಳ ಕಾಲ ಮಿತಿ/ಸ್ವಯಂ ಚಾಲಿತ ವೇತನ ಬಡ್ತಿ ಕೊಡಬೇಕು. ಅನುದಾನಿತ ಪ್ರೌಢಶಾಲೆಗಳ ಶಿಕ್ಷಕರ ಖಾಲಿ ಹುದ್ದೆ ಕೂಡಲೇ ಭರ್ತಿ ಮಾಡಬೇಕು. ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡಗಳನ್ನು ನೆಲಸಮಗೊಳಿಸಿ, ಹೊಸ ಕಟ್ಟಡಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.


ಪ್ರೌಢಶಾಲಾ ಶಿಕ್ಷಕರ ಸಂಘಕ್ಕೆ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ನಿವೇಶನ ಒದಗಿಸಿ, ಕಟ್ಟಡ ನಿರ್ಮಿಸಿಕೊಡಬೇಕು. ಕಟ್ಟಡ ನಿರ್ಮಿಸುವವರೆಗೆ ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಸರ್ಕಾರಿ ಕಟ್ಟಡದಲ್ಲಿ ಸಂಘದ ತಾತ್ಕಾಲಿಕ ಕಚೇರಿ ಆರಂಭಿಸಲು ಅವಕಾಶ ಕಲ್ಪಿಸಬೇಕು ಎಂದು ಬೇಡಿಕೆ ಮಂಡಿಸಿದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶೇಕ್ ಮಹೆಬೂಬ್ ಪಟೇಲ್, ಪ್ರಧಾನ ಕಾರ್ಯದರ್ಶಿ ಜೀತೇಂದ್ರ ಹಾಲಹಿಪ್ಪರ್ಗಾ, ಶಂಕರ ಬಾಪುರೆ, ಸಿದ್ದಮ್ಮ, ಸಂತೋಷಕುಮಾರ ಚಲುವಾ, ಸುಧಾರಾಣಿ, ಪುಷ್ಪಾವತಿ, ಮಿಲಿಂದ್ ಇದ್ದರು.


ರಾಜ್ಯದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ (1-5ನೇ ತರಗತಿ) ಸುಮಾರು 75 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹಿಂದಿನ ಸೇವಾ ಜೇಷ್ಠತೆಯನ್ನು ಪರಿಗಣಿಸಿ ಪರೀಕ್ಷೇ ನಡೆಸದೇ 6-8ನೇ ತರಗತಿ ಶಾಲೆಗಳಿಗೆ ಮೇಲ್ದರ್ಜೆಗೇರಿಸಲು/ ವೀಲಿನಗೊಳಿಸಲು ಕಾರ್ಯಕಾರಿ ಆದೇಶ ಹೊರಡಿಸುವ ಮೂಲಕ 75 ಸಾವಿರ ಪದವೀಧರ ಶಿಕ್ಷಕರುಗಳು ಹಲವಾರು ವರ್ಷಗಳ ಸಮಸ್ಯೆಯನ್ನು ಬಗೆಹರಿಸುವುದು.

• 1998-1999ರಲ್ಲಿ ಸೇವೆಗೆ ಸೇರ್ಪಡೆಗೊಂಡು, ಮಾನ್ಯ ಭಾರತ ಸರ್ವೋಚ್ಚ ನ್ಯಾಯಾಲಯಲದ ಆದೇಶದ ಹಿನ್ನೆಲೆಯಲ್ಲಿ ಸೇವೆಯಿಂದ ವಜಾಗೊಂಡ ಸುಮಾರು 4000 ಪ್ರಾಥಮಿಕ/ಪ್ರೌಡಶಾಲಾ ಶಿಕ್ಷಕರು 2003ರಲ್ಲಿ ಮರು ನೇಮಕಾತಿ ಹೊಂದಿದ್ದು, ಮರುನೇಮಕಾತಿ ಹೊಂದುವ ಪೂರ್ವದಲ್ಲಿ ಸಲ್ಲಿಸಿರುವ 4-5 ವರ್ಷಗಳ ಸೇವೆಯನ್ನು ಪರಿಗಣಿಸಿ ಕಾಲ್ಪನಿಕವಾಗಿ ವೇತನ ನಿಗದಿಗೊಳಿಸುವುದು.

• ಗ್ರಾಮೀಣ ಕೃಪಾಂಕ ರಹಿತ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳಿಗೆ ತಿಳಿಸಲಾಯಿತು.

• ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು, ಬಡ್ತಿ ಪ್ರೌಢಶಾಲಾ ಸಹ ಶಿಕ್ಷಕರು ಹಾಗೂ ಬಡ್ತಿ ಉಪನ್ಯಾಸಕರು ಪದೋನ್ನತಿ ಹೊಂದಿದ ಕಾರಣ 10,15,20,25 ಮತ್ತು 30 ವರ್ಷಗಳ ಕಾಲಮಿತಿ ಬಡ್ತಿ ಸೌಲಭ್ಯದಿಂದ ವಂಚಿತರಾಗಿರುತ್ತಾರೆ. ಇದರಿಂದಾಗಿ ಬಡ್ತಿ ಪಡೆಯದೆ ಇರುವವರಿಗಿಂತ 2-3 ವಾರ್ಷಿಕ ಕಡಿಮೆ ವೇತನ ಬಡ್ತಿಗಳನ್ನು ವೇತನ ಪಡೆಯುತ್ತಿರುವುದು ಸಾಮಾಜಿಕ ನ್ಯಾಯ ತತ್ವಕ್ಕೆ ವಿರುದ್ದವಾಗಿದೆ. ಈ ವೇತನ ತಾರತಮ್ಯವನ್ನು ಸರಿಪಡಿಸುವುದು.

ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಪರಸ್ಪರ ವರ್ಗಾವಣೆಯ ನೀತಿಯನ್ನು ಜಾರಿಗೆ ತರುವುದು. ಹಾಗೂ ಅಂತರ ಜಿಲ್ಲಾ ವರ್ಗಾವಣೆ ಹೊಂದಲು ‘ಒಂದು ಬಾರಿಗೆ’(O.T.S.) ವರ್ಗಾವಣೆ ಅವಕಾಶ ಕಲ್ಪಿಸುವುದು.

• ಬಿಡುವಿನ ಅವಧಿಯಲ್ಲಿ ಕರ್ತವ್ಯ ನಿರ್ವಹಿಸುವ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಿಗೆ ಗಳಿಕೆ ರಜೆ ಮಂಜೂರು ಮಾಡುವುದು ಹಾಗೂ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ವೃಂದದಿAದ ಶಿಕ್ಷಣ ಸಂಯೋಜಕರ ಹುದ್ದೆಗೆ ನೇಮಿಸುವಾಗ ಸೇವಾ ಹಿರಿತವನ್ನು ಪರಿಗಣಿಸಿ ಜೇಷ್ಠತೆ ಆಧಾರದ ಮೇಲೆ ಈ ಹಿಂದಿನAತೆ ಪರೀಕ್ಷೆ ಇಲ್ಲದೆ ನೇಮಿಸುವುದು.

• ಸುಮಾರು 40 ವರ್ಷಗಳಿಂದ ಪರಿಷ್ಕರಣೆಯಾಗದೆ ಬಾಕಿ ಇರುವ ಶಿಕ್ಷಣ ಇಲಾಖೆಯ ಎಲ್ಲಾ ವೃಂದಗಳನ್ನೊಳಗೊAಡAತೆ ಸಮಗ್ರ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಕಾಲಮಿತಿಯೊಳಗೆ ರೂಪಿಸುವುದು.

• ದಿನಾಂಕ: 01-08-2008ರ ನಂತರ ನೇಮಕವಾದ 2008, 2010 ಮತ್ತು 2013ರ ಬ್ಯಾಚ್‌ನ ಪ್ರೌಢಶಾಲಾ ಶಿಕ್ಷಕರುಗಳಿಗೆ ಒಂದು ವಾರ್ಷಿಕ ವೇತನ ಬಡ್ತಿ ನೀಡಿ ವೇತನ ತಾರತಮ್ಯ ನಿವಾರಿಸುವುದು.

• ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಕಾಯ್ದೆಯನ್ನು ಜಾರಿಗೆ ತರುವುದು.

• ಪ್ರೌಢಶಾಲಾ ಶಿಕ್ಷಕರಿಗೆ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವೃಂದಕ್ಕೆ ಪದೋನ್ನತಿ ನೀಡುವ ಪ್ರಕ್ರಿಯೆ ಸುಮಾರು 10 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು, ಈಗಾಗಲೇ ಅಂತಿಮಗೊಳಿಸಿರುವ ಅರ್ಹ ಪ್ರೌಢಶಾಲಾ ಸಹ ಶಿಕ್ಷಕರ ಜ್ಯೇಷ್ಠತಾ ಪಟ್ಟಿಗೆ ಅನುಗುಣವಾಗಿ ಮುಂಬಡ್ತಿಗೆ ಕ್ರಮವಹಿಸುವುದು.

• 2022ನೇ ಜನವರಿಯಲ್ಲಿ ನಡೆಯಲಿರುವ 2ನೇ ಹಂತದ ಅವಧಿ ಮುಗಿದ ಸಿ.ಆರ್.ಪಿ. / ಬಿ.ಆರ್.ಪಿ.ಗಳನ್ನು ಆಯಾ ತಾಲ್ಲೂಕಿನಲ್ಲಿ ಕ್ರಮೇಣ ಖಾಲಿಯಾಗಲಿರುವ ಕೌನ್ಸಲಿಂಗ್ ಮೂಲಕ ಸ್ಥಳಾವಕಾಶ ಕಲ್ಪಿಸುವುದು.



logoblog

Thanks for reading Petition for promotion of high school teachers to the post of lecturer

Previous
« Prev Post

No comments:

Post a Comment