Wednesday, December 6, 2023

School Education Department Primary and Higher Primary Schools Sanctioned, Filled and Vacant Vacancies Details

  Wisdom News       Wednesday, December 6, 2023
Hedding ; School Education Department Primary and Higher Primary Schools Sanctioned, Filled and Vacant Vacancies Details...

ಬೆಳಗಾವಿ ಅಧಿವೇಶನದಲ್ಲಿ ಸದನದಲ್ಲಿ ಚರ್ಚೆಯಾದ ರಾಜ್ಯದ ಪ್ರಾಥಮಿಕ, ಪ್ರೌಢ ಶಾಲೆಗಳ ಖಾಲಿ ಇರುವ , ಭರ್ತಿಯಾದ ಮತ್ತು ಮಂಜೂರಾದ ಹುದ್ದೆಗಳ ಕುರಿತು ಮಾನ್ಯ ಶ್ರೀಮತಿ ಹೇಮಲತಾ ನಾಯಕ ಅವರು ಕೇಳಿದ ಪ್ರಶ್ನೆಗೆ ಮಾನ್ಯ ಶಾಲಾ ಶಿಕ್ಷಣ ಶಿಕ್ಷಣ ಸಚಿವರು ನೀಡಿರುವ ಅಧಿಕೃತ ಮಾಹಿತಿ ಇಲ್ಲಿದೆ.


ವಿಧಾನ ಪರಿಷತ್: ಸರ್ಕಾರದ ಅನುದಾನಕ್ಕೆ ಒಳಪಟ್ಟಿರುವ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ 2023ರವರೆಗೂ ಖಾಲಿ ಇರುವ ಎಲ್ಲ ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.

ಬಿಜೆಪಿಯ ಶಶೀಲ್‌ ನಮೋಶಿ ಅವರ ಗಮನಸೆಳೆಯುವ ಸೂಚನೆಗೆ ಉತ್ತರಿಸಿದ ಅವರು, 2015ರ ಪೂರ್ವದಲ್ಲಿ ಖಾಲಿ ಇದ್ದ ಬೋಧಕ, ಬೋಧಕೇತರ ಹುದ್ದೆಗಳ ಭರ್ತಿಗೆ ಈಗಾಗಲೇ ಅನುಮೋದನೆ ನೀಡಲಾಗಿದೆ

ಒಂದು ಶಾಲೆ-ಕಾಲೇಜಿಗೆ ಕಟ್ಟಡಕ್ಕಿಂತ ಶಿಕ್ಷಕ ಸಂಪನ್ಮೂಲ ಮುಖ್ಯ ಎನ್ನುವ ಅರಿವು ಇದೆ. ಹಾಗಾಗಿ, 2016ರಿಂದ 2020ರವರೆಗೆ ಖಾಲಿ ಇದ್ದ ಪ್ರೌಢಶಾಲೆಗಳ 4,521 ಬೋಧಕ, ಪಿಯು ಕಾಲೇಜುಗಳ 267 ಉಪನ್ಯಾಸಕರ ಹುದ್ದೆ ಭರ್ತಿಗೆ ಅನುಮೋದನೆ ಕೋರಿ ಈಗಾಗಲೇ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಪ್ರಸ್ತುತ ಶೈಕ್ಷಣಿಕ ವರ್ಷವನ್ನೂ ಪರಿಗಣಿಸಿ, ಖಾಲಿ ಇರುವ ಎಲ್ಲ ಹುದ್ದೆಗಳ ಭರ್ತಿಗೆ ಕ್ರಮಕೈಗೊಳ್ಳಲಾಗುವುದು ಎಂದರು.

ನೇಮಕಾತಿಯ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಳ್ಳುವವರೆಗೂ ಕಾರ್ಯಭಾರದ ಒತ್ತಡ ಕಡಿಮೆ ಇರುವ ಉಪನ್ಯಾಸಕರನ್ನು ನಿಯೋಜನೆ ಮಾಡಲಾಗುವುದು ಎಂದು ಹೇಳಿದರು.

ಸರ್ಕಾರದ ಗಮನ ಸೆಳೆದ ಶಶೀಲ್‌ ನಮೋಶಿ, ಅನುದಾನಿತ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡದೇ ಇದ್ದರೆ ಬಾಗಿಲು ಮುಚ್ಚುವ ಸ್ಥಿತಿ ಎದುರಾಗಲಿದೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಕೋರಿದರು.

ಬಿಜೆಪಿಯ ತೇಜಸ್ವಿನಿ ಗೌಡ, ವೈ.ಎ.ನಾರಾಯಣ ಸ್ವಾಮಿ, ಕಾಂಗ್ರೆಸ್‌ನ ಅಬ್ದುಲ್‌ ಜಬ್ಬಾರ್,ಎಸ್.ವಿ. ಸಂಕನೂರ ಮತ್ತಿತರರು ನಮೋಶಿ ಮಾತಿಗೆ ಧ್ವನಿಗೂಡಿಸಿದರು.

ಸತತ 15 ವರ್ಷದಿಂದ ನೇಮಕಾತಿಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕರಿಗೆ (Recruitment of Physical Education Teachers) ಈ ಸರ್ಕಾರದ ಅವಧಿಯಲ್ಲಿ ಗುಡ್‌ ನ್ಯೂಸ್‌ ಸಿಗಲಿದೆಯೇ? ಹೌದು ಎನ್ನುತ್ತದೆ ಶಿಕ್ಷಣ ಸಚಿವರ ಉತ್ತರ! ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಪ್ರಸ್ತುತ ಖಾಲಿ ಇರುವ ಪೈಕಿ 2120 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು (Teachers Recruitment) ಭರ್ತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಿದ್ದು, ಆ ಇಲಾಖೆಯ ಸಮಾಲೋಚನೆಯಲ್ಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Education Minister Madhu Bangarappa) ಹೇಳಿದ್ದಾರೆ. ಅಲ್ಲದೆ, ಪ್ರೌಢಶಾಲೆಯಲ್ಲಿ ನೇಮಕ ಮಾಡಿಕೊಳ್ಳಲು ಅವಶ್ಯಕ ಇರುವ ಹುದ್ದೆಗಳ ಬಗ್ಗೆಯೂ ಸದನದಲ್ಲಿ ಉತ್ತರಿಸಲಾಗಿದೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಪದವೀಧರ ಕ್ಷೇತ್ರದ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಅವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಕೇಳಲಾದ ಚುಕ್ಕೆ ಗುರುತಿನ ಪ್ರಶ್ನೆಗೆ ಶಿಕ್ಷಣ ಸಚಿವರು ಈ ಉತ್ತರ ನೀಡಿದ್ದಾರೆ.

ರಾಜ್ಯದಲ್ಲಿ ಸುಮಾರು 17 ವರ್ಷಗಳಿಂದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕಾತಿ ಮಾಡಿಲ್ಲ ಎಂದು ದೈಹಿಕ ಶಿಕ್ಷಣ ಶಿಕ್ಷಕರ ಸಂಘಟನೆಯವರು ಆರೋಪ ಮಾಡುತ್ತಿದ್ದಾರೆ. ಇದು ನಿಜವೇ ಎಂದು ಎಸ್‌.ವಿ. ಸಂಕನೂರ ಪ್ರಶ್ನೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ದ ಸರ್ಕಾರಿ ಪ್ರಾಥಮಿಕ ಶಾಲೆಗೆ ಸಂಬಂಧಿಸಿದಂತೆ 2008ನೇ ಸಾಲಿನಲ್ಲಿ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಪ್ರೌಢಶಾಲಾ ವಿಭಾಗಕ್ಕೆ ಸಂಬಂಧಿಸಿದಂತೆ 2014-15ನೇ ಸಾಲಿಗೆ 148 ಹುದ್ದೆಗಳಿಗೆ ನೇಮಿಸಿಕೊಳ್ಳಲಾಗಿದೆ ಎಂದು ಉತ್ತರಿಸಿದ್ದಾರೆ.

ರಾಜ್ಯದಲ್ಲಿ ಒಟ್ಟು 41913 ಪ್ರಾಥಮಿಕ ಶಾಲೆಗಳಿದ್ದು, ಅವುಗಳಲ್ಲಿ ಮಂಜೂರಾದ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು 6772 ಆಗಿದೆ. ಆದರೆ, ಕಾರ್ಯನಿರತ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು 4127 ಆಗಿದೆ. ಹೀಗಾಗಿ ಇದರಲ್ಲಿ 2120 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಿದ್ದು, ಆ ಇಲಾಖೆಯ ಸಮಾಲೋಚನೆಯಲ್ಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಪ್ರೌಢಶಾಲೆಯಲ್ಲಿ ನೇಮಕಕ್ಕೆ ಸಚಿವರು ಹೇಳಿದ್ದೇನು?
ಇನ್ನು ಪ್ರೌಢಶಾಲಾ ವಿಭಾಗಕ್ಕೆ ಸಂಬಂಧಪಟ್ಟಂತೆ ರಾಜ್ಯದಲ್ಲಿ 4844 ಸರ್ಕಾರಿ ಪ್ರೌಢ ಶಾಲೆಗಳು ಇವೆ. ಇದರಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಮಂಜೂರಾದ ಹುದ್ದೆ 5210 ಆಗಿದೆ. ರಾಜ್ಯ ಸರ್ಕಾರಿ ಪ್ರೌಢಶಾಲೆಗಳಲ್ಲಿರುವ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್‌ 1 ಶಿಕ್ಷಕರ ಕಾರ್ಯನಿರತ ಹುದ್ದೆಗಳ ಸಂಖ್ಯೆ 3589 ಆಗಿದೆ.

ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿಯಿರುವ ವಿವಿಧ ವೃಂದದ ದೈಹಿಕ ಶಿಕ್ಷಣ ಶಿಕ್ಷಕರ 200 ಹುದ್ದೆಗಳು ಸೇರಿ ಒಟ್ಟು 2500 ಶಿಕ್ಷಕರುಗಳ ಹುದ್ದೆಗಳನ್ನು 15000 ಪದವೀಧರ ಪ್ರಾಥಮಿಕ ಶಾಲಾ ನೇಮಕಾತಿಯಲ್ಲಿ ಭರ್ತಿಯಾಗದೇ ಖಾಲಿ ಉಳಿದ ಹುದ್ದೆಗಳಿಗೆ ಹೊಂದಾಣಿಕೆ ಮಾಡಿಕೊಳ್ಳುವ ಷರತ್ತಿಗೆ ಒಳಪಟ್ಟು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರವು ಅನುಮತಿ ನೀಡಿರುತ್ತದೆ.

ಆದರೆ, ಸದರಿ 15000 ಹುದ್ದೆಗಳಲ್ಲಿ ಪ್ರೌಢಶಾಲಾ ಶಿಕ್ಷಕರುಗಳ ನೇಮಕಾತಿಗೆ 1648 ಹುದ್ದೆಗಳು ಮಾತ್ರ ಉಳಿದಿರುವ ಪ್ರಯುಕ್ತ ಪ್ರಸ್ತುತ ಸಾಲಿನಲ್ಲಿ 200 ದೈಹಿಕ ಶಿಕ್ಷಕರ ಹುದ್ದೆಯು ಸೇರಿದ್ದು ಒಟ್ಟು 2500 ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವ ಪ್ರಸ್ತಾವನೆಯ ಬಗ್ಗೆ ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ನಿವೃತ್ತಿಯಿಂದ ತೆರವಾಗಿರುವ ದೈಹಿಕ ಶಿಕ್ಷಣ ಉಪನ್ಯಾಸಕರನ್ನು ಮಾಡಿಕೊಳ್ಳದಂತೆ ನೇಮಕಾತಿ ಆರ್ಥಿಕ ಇಲಾಖೆಯಿಂದ ಟಿಪ್ಪಣಿ ರೂಪದಲ್ಲಿ ಆದೇಶ ಬಂದಿದೆಯೇ? ಹಾಗಿದ್ದಲ್ಲಿ, ಈ ಕುರಿತು ಸರ್ಕಾರ ಕೈಗೊಂಡ ಕ್ರಮವೇನು? ಎಂದು ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಪ್ರಶ್ನೆ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ದೈಹಿಕ ಶಿಕ್ಷಣ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳದಂತೆ ಆರ್ಥಿಕ ಇಲಾಖೆಯು ಯಾವುದೇ ನಿರ್ಬಂಧವನ್ನು ವಿಧಿಸಿರುವುದಿಲ್ಲ. ಆದರೆ, ಆರ್ಥಿಕ ಇಲಾಖೆಯು ದಿನಾಂಕ:14/06/2023ರಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರ ಹುದ್ದೆಗೆ ಪ್ರಸ್ತುತ ಇರುವ 120 ವಿದ್ಯಾರ್ಥಿಗಳ ಕಾರ್ಯಭಾರದ ಮಾನದಂಡವನ್ನು 500 ವಿದ್ಯಾರ್ಥಿಗಳಿಗೆ ಹೆಚ್ಚಿಸಲು ನಿರ್ಣಯಿಸುವಂತೆ ಆರ್ಥಿಕ ಇಲಾಖೆಯು ಸಲಹೆ ನೀಡಿದ್ದು, ಈ ಬಗ್ಗೆ ಸರ್ಕಾರದಲ್ಲಿ ಪರಿಶೀಲನೆಯಲ್ಲಿರುತ್ತದೆ ಎಂದು ಹೇಳಿದ್ದಾರೆ.


logoblog

Thanks for reading School Education Department Primary and Higher Primary Schools Sanctioned, Filled and Vacant Vacancies Details

Previous
« Prev Post

No comments:

Post a Comment