Tuesday, February 27, 2024

7th Pay Commission: General meeting of state government employees today: 7th pay commission announcement?

  Wisdom News       Tuesday, February 27, 2024
Hedding ; 7th Pay Commission: General meeting of state government employees today: 7th pay commission announcement?...


7th Pay Commission: ಇಂದು ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ: ಇಲ್ಲೇ 7ನೇ ವೇತನ ಆಯೋಗ ಘೋಷಣೆ?



ಬೆಂಗಳೂರು, ಫೆಬ್ರವರಿ 27: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳ ವತಿಯಿಂದ ಇಂದು ( ಫೆಬ್ರವರಿ 27) ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಹಾಗೂ ಪ್ರಜಾಸ್ನೇಹಿ ಕಾರ್ಯಾಗಾರವನ್ನು ನಗರದ ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ಆಯೋಜಿಸಲಾಗಿದೆ.


ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಆಶಯ ನುಡಿಗಳನ್ನಾಡಲಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.


ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿ ಭಾಗವಹಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 7ನೇ ವೇತನ ಆಯೋಗದ ಜಾರಿ, ಉಚಿತ ಆರೋಗ್ಯ ಯೋಜನೆ ಘೋಷಣೆ ಮಾಡುವ ಎಲ್ಲಾ ವಿಶ್ವಾಸವಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ‌ ಅವರು ವಿಶ್ವಾಸ ವ್ಯಕ್ತಪಸಿದ್ರು. ಇನ್ನೂ ಈ ಕಾರ್ಯಕ್ರಮಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲೇ 7 ನೇ ವೇತನ ಆಯೋಗ ಘೋಷಣೆ ಮಾಡುವ ಸಾಧ್ಯತೆ ಇದೆ.

ರಾಜ್ಯ ಸರ್ಕಾರಿ ನೌಕರರ ಸಮ್ಮೇಳನ ಮುಖ್ಯ ಅತಿಥಿಗಳು
ಇನ್ನೂ ರಾಜ್ಯ ಸರ್ಕಾರಿ ನೌಕರರ ಸಮ್ಮೇಳನ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸಚಿವರಾದ ಡಾ. ಜಿ. ಪರಮೇಶ್ವರ, ಎಂ.ಬಿ. ಪಾಟೀಲ, ಎಚ್.ಕೆ. ಪಾಟೀಲ, ದಿನೇಶ್ ಗುಂಡೂರಾವ್, ಸತೀಶ್‌ ಜಾರಕಿಹೊಳಿ, ಡಾ. ಎಚ್.ಸಿ. ಮಹದೇವಪ್ಪ, ಕೃಷ್ಣ ಬೈರೇಗೌಡ, ಕೆ.ಎನ್. ರಾಜಣ್ಣ, ಪ್ರಿಯಾಂಕ್ ಖರ್ಗೆ, ಕೆ.ಎಚ್. ಮುನಿಯಪ್ಪ, ಎಸ್. ಮಧುಬಂಗಾರಪ್ಪ, ಬೈರತಿ ಸುರೇಶ್‌, ರಾಮಲಿಂಗಾ ರೆಡ್ಡಿ, ಕೆ.ಜೆ.ಜಾರ್ಜ್‌, ಈಶ್ವರ್‌ ಖಂಡ್ರೆ, ಶಿವಾನಂದ ಎಸ್. ಪಾಟೀಲ, ಬಿ. ನಾಗೇಂದ್ರ, ಡಾ. ಎಂ.ಸಿ. ಸುಧಾಕರ್, ಶರಣಬಸಪ್ಪ ದರ್ಶನಾಪುರ, ಎನ್. ಚಲುವರಾಯಸ್ವಾಮಿ, ಶಿವರಾಜ ಎಸ್. ತಂಗಡಗಿ, ಲಕ್ಷ್ಮೀ ಆರ್. ಹೆಬ್ಬಾಳಕರ್, ರಹೀಂ ಖಾನ್, ಡಾ. ಶರಣಪ್ರಕಾಶ ಆ‌ರ್. ಪಾಟೀಲ, ಆರ್.ಬಿ. ತಿಮ್ಮಾಪೂರ, ಎನ್.ಎಸ್. ಭೋಸರಾಜು, ಎಸ್.ಎಸ್. ಮಲ್ಲಿಕಾರ್ಜುನ್, ಕೆ. ವೆಂಕಟೇಶ್, ಡಿ. ಸುಧಾಕರ್, ಸಂತೋಷ್ ಎಸ್. ಲಾಡ್, ಬಿ.ಝಡ್. ಜಮೀರ್ ಅಹ್ಮದ್ ಖಾನ್, ಮಂಕಾಳ ಎಸ್. ವೈದ್ಯ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಭಾಗವಹಿಸಲಿದ್ದಾರೆ.



ಹಳೇ ಪಿಂಚಣಿ ಯೋಜನೆ (ಒಪಿಎಸ್‌) ಮರು ಜಾರಿ, 7ನೇ ವೇತನ ಆಯೋಗದ ವರದಿಯ ಅನುಷ್ಠಾನ ಹಾಗೂ ಆರೋಗ್ಯ ಸಂಜೀವಿನಿ ಯೋಜನೆ ಲೋಕಾರ್ಪಣೆ ಮಾಡುವುದು ರಾಜ್ಯ ಸರ್ಕಾರಿ ನೌಕರರ ಸಂಘದ ಬೇಡಿಕೆಗಳಾಗಿವೆ. ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ತಿಮ್ಮೇಗೌಡ, ರಾಜ್ಯ ಖಜಾಂಜಿ ಡಾ. ಎಸ್. ಸಿದ್ದರಾಮಣ್ಣ, ಕಾರ್ಯಾಧ್ಯಕ್ಷ ಬಿ. ಮಲ್ಲಿಕಾರ್ಜುನ ಬಿ., ಗೌರವಾಧ್ಯಕ್ಷ ಬಿ.ಎಚ್.ವೆಂಕಟೇಶಯ್ಯ ಹಿರಿಯ ಉಪಾಧ್ಯಕ್ಷ ಎಂ.ವಿ. ರುದ್ರಪ್ಪ, ಹಿರಿಯ ಉಪಾಧ್ಯಕ್ಷ ಎಸ್. ಬಸವರಾಜು, ರಾಜ್ಯ ಕಾರ್ಯದರ್ಶಿ ನೆಲ್ಕುದ್ರಿ ಸದಾನಂದಪ್ಪ ಸೇರಿ ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು ಘಟಕಗಳ ಪದಾಧಿಕಾರಿಗಳು ಹಾಗೂ ಬೆಂಗಳೂರು ನಗರದ ರಾಜ್ಯ ಪರಿಷತ್ ಸದಸ್ಯರು, ರಾಜ್ಯದ ಎಲ್ಲಾ ಇಲಾಖೆಯ ವೃಂದ ಸಂಘಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ.


logoblog

Thanks for reading 7th Pay Commission: General meeting of state government employees today: 7th pay commission announcement?

Previous
« Prev Post

No comments:

Post a Comment