Wednesday, March 6, 2024

5th, 8th, 9th and 11th class board exam cancelled, high court order.

  Wisdom News       Wednesday, March 6, 2024
Hedding ; 5th, 8th, 9th and 11th class board exam cancelled, high court order...


ಪಬ್ಲಿಕ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್ ಆದೇಶ
ರಾಜ್ಯ ಸರ್ಕಾರ 5,8,9 ಮತ್ತು 11ನೇ ತರಗತಿಗಳಿಗೆ ರಾಜ್ಯ ಸರ್ಕಾರ ನಡೆಸಲು ಉದ್ದೇಶಿಸಿರುವ ಪಬ್ಲಿಕ್‌ ಪರೀಕ್ಷೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.



ಅತ್ಯಂತ ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ 5,8,9 ಮತ್ತು 11ನೇ ತರಗತಿಗಳಿಗೆ ರಾಜ್ಯ ಸರ್ಕಾರ ನಡೆಸಲು ಉದ್ದೇಶಿಸಿರುವ ಪಬ್ಲಿಕ್‌ ಪರೀಕ್ಷೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಬೋರ್ಡ್‌ ಎಕ್ಸಾಂ ಸುತ್ತೋಲೆಯನ್ನು ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ. ಹೀಗಾಗಿ ಈ ಬಾರಿ ಈ ತರಗತಿಗಳಿಗೆ ಬೋರ್ಡ್‌ ಎಕ್ಸಾಂ ಇರುವುದಿಲ್ಲ.

ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9 ಹಾಗೂ 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಈ ಹಿಂದೆ ಸುತ್ತೋಲೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ನ್ಯಾಯಪೀಠ ತೀರ್ಪು ಪ್ರಕಟಿಸಿದೆ.

9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಪಬ್ಲಿಕ್‌ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳ ಕಲಿಕೆಯಲ್ಲಿ ಗಂಭೀರತೆ ಕಾಣಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ಅವರ ವಾದವಾಗಿತ್ತು.


ಹೈಕೋರ್ಟ್‌ನ ಈ ಆದೇಶದಿಂದ ಇದೇ ಮಾರ್ಚ್ 11 ರಿಂದ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾದಂತಾಗಿದೆ. ರಾಜ್ಯ ಶಿಕ್ಷಣ ಇಲಾಖೆ ಶಿಕ್ಷಣ ಕಾಯಿದೆಯಡಿ 2023ರ ಅಕ್ಟೋಬರ್ 6 ಮತ್ತು 9ರಂದು ಎರಡು ಸುತ್ತೋಲೆಗಳನ್ನು ಹೊರಡಿಸಿ, ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನಿಸಿತ್ತು.

ಇದನ್ನು ಪ್ರಶ್ನಿಸಿದ್ದ ಅರ್ಜಿದಾರರ‌ ಸಂಘ, ಶಿಕ್ಷಣ ಇಲಾಖೆ ಸುತ್ತೋಲೆ ಕೇವಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ. ಇದು ಪಠ್ಯಕ್ರಮದ ಭಾಗವಲ್ಲ. ಆದರೆ, ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಸಿದ್ಧಪಡಿಸಿರುವುದಾಗಿ ಸರ್ಕಾರ ಹೇಳುತ್ತಿದೆ. ಖಾಸಗಿ ಶಾಲೆಗಳ ಪಠ್ಯಕ್ರಮ ಹಾಗೂ ಸರ್ಕಾರಿ ಶಾಲೆಗಳ ಪಠ್ಯಕ್ರಮ ವಿಭಿನ್ನವಾಗಿವೆ. ಕಲಿಕಾ ಚೇತರಿಕೆ ಪಠ್ಯಕ್ರಮದ ಪ್ರಶ್ನೆಗಳಿಗೆ ಖಾಸಗಿ ಶಾಲಾ ಮಕ್ಕಳು ಉತ್ತರಿಸಲು ಕಷ್ಟ. ಹಾಗಾಗಿ, ಎಲ್ಲ ಮಕ್ಕಳಿಗೂ ಅನ್ವಯವಾಗುವಂತೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ಅವಕಾಶ ನೀಡಬಾರದು ಎಂದು ಕೋರಿದರು.

ಸರ್ಕಾರ ಪರ ವಕೀಲರು, ಕಲಿಕಾ ಚೇತರಿಕೆ ಕೂಡಾ ಪಠ್ಯಕ್ರಮದ ಭಾಗವೇ ಆಗಿದೆ. ಸಾಮಾನ್ಯ ಪಠ್ಯಕ್ರಮದಿಂದಲೇ ಕಲಿಕಾ ಚೇತರಿಕೆ ಪಠ್ಯಕ್ರಮ ಸಿದ್ಧಪಡಿಸಲಾಗಿದೆ. ಮಕ್ಕಳ ಬುದ್ಧಿಮತ್ತೆಯನ್ನು ಸಕಾರಾತ್ಮಕವಾಗಿ ವೃದ್ಧಿಸುವ ನಿಟ್ಟಿನಲ್ಲಿ ಇದನ್ನು ರೂಪಿಸಲಾಗಿದೆ.


ಸಾಕಷ್ಟು ವಿರೋಧಗಳ ಮಧ್ಯೆಯೇ 5, 8,9 ಮತ್ತು 11 ನೇ ತರಗತಿಗೆ ಬೋರ್ಡ್ ಎಕ್ಸಾಂ ಮಾಡಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಸುತ್ತೋಲೆ ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ. ನ್ಯಾ.ರವಿ ಹೊಸಮನಜ ಅವರಿಂದ ಆದೇಶ ಹೊರಬಿದ್ದಿದ್ದು, ರಾಜ್ಯ ಸರ್ಕಾರಕ್ಕೆ ಹಿನ್ನೆಡೆಯಾಗಿದೆ. ಡಿಸೆಂಬರ್ 2023ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಸಂಘಟನೆ ಕೋರ್ಟ್ ಮೆಟ್ಟಲೇರಿತ್ತು. ವಾದ ಆಲಿಸಿದ ಹೈಕೋರ್ಟ್ ಸರ್ಕಾರ ಸುತ್ತೋಲೆ ರದ್ದುಗೊಳಿಸಿ ಆದೇಶಿಸಿದೆ. ಅರ್ಜಿದಾರರ ಪರ ವಕೀಲ ಸುದರ್ಶನ್ ವಾದ ಮಂಡಿಸಿದ್ದರು. 



ಪ್ರಶ್ನೆಪತ್ರಿಕೆಯಲ್ಲಿ ಪಠ್ಯಕ್ರಮದಿಂದ ಹೊರತಾದ ಪ್ರಶ್ನೆಗಳಿಲ್ಲ. ಹಾಗಾಗಿ, ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಪಡೆದುಕೊಂಡಿರುವುದು ಸರಿಯಿದೆ. ಅದರಂತೆ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಸಮರ್ಥಿಸಿಕೊಂಡರು.



ರಾಜ್ಯ ಪಠ್ಯಕ್ರಮ ಶಾಲೆಗಳ 5, 8, 9 ಮತ್ತು 11ನೇ ತರಗತಿ ಪಬ್ಲಿಕ್‌ ಪರೀಕ್ಷೆ(ಬೋರ್ಡ್‌ ಪರೀಕ್ಷೆ)ಯನ್ನು ರದ್ದುಪಡಿಸಿ ರಾಜ್ಯ ಹೈಕೋರ್ಟ್‌ ಮಹತ್ವದ ಆದೇಶ ಹೊರಡಿಸಿದೆ.

ರಾಜ್ಯ ಪಠ್ಯಕ್ರಮ ಶಾಲೆಗಳ 5, 8, 9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ಇತ್ತೀಚೆಗೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಇದೀಗ ಆ ಸುತ್ತೋಲೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.




ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9 ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಬೋರ್ಡ್ ಪರೀಕ್ಷೆ ವಿಚಾರವಾಗಿ ಸುತ್ತೋಲೆಯೊಂದನ್ನು ಹೊರಡಿಸಿತ್ತು.

ಆ ಸುತ್ತೋಲೆ ಪ್ರಕಾರ 5,8,9 ಹಾಗೂ 11ನೇ ತರಗತಿ ಮಕ್ಕಳಿಗೆ ಬೋರ್ಡ್‌ ಪರೀಕ್ಷೆ ನಡೆಸಬೇಕು ಎಂದು ಹೇಳಲಾಗಿತ್ತು. ಇದಕ್ಕೆ ಪೋಷಕರು ಹಾಗೂ ಶಿಕ್ಷಣ ತಜ್ಞರು ವಿರೋಧ ವ್ಯಕ್ತಪಡಿಸಿದ್ದರು.

ಸರ್ಕಾರದ ಸುತ್ತೋಲೆ ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಸಂಘಟನೆ ಕೋರ್ಟ್ ಮೆಟ್ಟಲೇರಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ನ್ಯಾಯಪೀಠ ತೀರ್ಪು ಪ್ರಕಟಿಸಿದೆ. ಅರ್ಜಿದಾರರ ಪರ ವಕೀಲ ಸುದರ್ಶನ್ ವಾದ ಮಂಡಿಸಿದ್ದರು.

ಇದು ಆರ್‌ಟಿಇ ಕಾಯಿದೆಯ ಉಲ್ಲಂಘನೆಯಾಗುತ್ತದೆ ಎನ್ನುವ ಉದ್ದೇಶದಿಂದ ಹೈಕೋರ್ಟ್ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಆದೇಶದಿಂದ ಸರ್ಕಾರದ ನಿರ್ಧಾರಕ್ಕೆ ಹಿನ್ನಡೆಯಾಗಿದೆ. ತಕ್ಷಣಕ್ಕೆ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ. ಪರೀಕ್ಷೆ ನಡೆಸುವ ಸಾಧ್ಯತೆ ಕಡಿಮೆ ಇದೆ. ರಾಜ್ಯ ಶಿಕ್ಷಣ ಇಲಾಖೆ ಶಿಕ್ಷಣ ಕಾಯಿದೆಯಡಿ 2023ರ ಅಕ್ಟೋಬರ್ 6 ಮತ್ತು 9ರಂದು ಎರಡು ಸುತ್ತೋಲೆಗಳನ್ನು ಹೊರಡಿಸಿ, ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನಿಸಿತ್ತು.

ಈ ವೇಳೆ ಸರ್ಕಾರ ಪರ ವಕೀಲರು, ಕಲಿಕಾ ಚೇತರಿಕೆ ಕೂಡಾ ಪಠ್ಯಕ್ರಮದ ಭಾಗವೇ ಆಗಿದೆ. ಸಾಮಾನ್ಯ ಪಠ್ಯಕ್ರಮದಿಂದಲೇ ಕಲಿಕಾ ಚೇತರಿಕೆಗೆ ಪಠ್ಯಕ್ರಮ ಸಿದ್ಧಪಡಿಸಲಾಗಿದೆ. 



ಮಕ್ಕಳ ಬುದ್ಧಿಮತ್ತೆಯನ್ನು ಸಕಾರಾತ್ಮಕವಾಗಿ ವೃದ್ಧಿಸುವ ನಿಟ್ಟಿನಲ್ಲಿ ಇದನ್ನು ರೂಪಿಸಲಾಗಿದೆ. ಪ್ರಶ್ನೆಪತ್ರಿಕೆಯಲ್ಲಿ ಪಠ್ಯಕ್ರಮದಿಂದ ಹೊರತಾದ ಪ್ರಶ್ನೆಗಳಿಲ್ಲ. ಹಾಗಾಗಿ, ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಪಡೆದುಕೊಂಡಿರುವುದು ಸರಿಯಿದೆ. ಅದರಂತೆ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಸಮರ್ಥಿಸಿಕೊಂಡರು. ಆದರೆ ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ಸರ್ಕಾರದ ಆದೇಶ ರದ್ದುಗೊಳಿಸಿ ಮಹತ್ವದ ಆದೇಶ ನೀಡಿದೆ.


9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಪಬ್ಲಿಕ್‌ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳ ಕಲಿಕೆಯಲ್ಲಿ ಗಂಭೀರತೆ ಕಾಣಬಹುದು ಎಂದು ಹಾಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ಈ ಹಿಂದೆ ಹೇಳಿದ್ದರು. ಪ್ರಸ್ತುತ 9ನೇ ತರಗತಿವರೆಗೆ ವಿದ್ಯಾರ್ಥಿಗಳನ್ನು ಅನುತ್ತೀರ್ಣ ಮಾಡುವ ಹಾಗಿಲ್ಲ. ಸದ್ಯ ಕರ್ನಾಟಕದಲ್ಲಿ 10ನೇ ತರಗತಿ ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಎಕ್ಸಾಮ್‌ ನಡೆಸಲಾಗುತ್ತಿದೆ.



logoblog

Thanks for reading 5th, 8th, 9th and 11th class board exam cancelled, high court order.

Previous
« Prev Post

No comments:

Post a Comment