Friday, March 15, 2024

Karnataka PDO Recruitment 2024

  Wisdom News       Friday, March 15, 2024
Hedding ; Karnataka PDO Recruitment 2024...



ಉಳಿಕೆ ಮೂಲ ವೃಂದದ 150 ಹಾಗೂ HK ವೃಂದದ 97 PDO ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ.

⚫ Qualification: Any Degree

⚫ ಅರ್ಜಿ ಸಲ್ಲಿಸುವ ಅವಧಿ:
2024 ಏಪ್ರಿಲ್-15 ರಿಂದ ಮೇ-15

ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯಡಿ ಖಾಲಿ ಇರುವ ಗ್ರೂಪ್‌ ಸಿ ವೃಂದದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ - ಪಿಡಿಒ ಹುದ್ದೆಗಳ ಭರ್ತಿಗೆ ಇದೀಗ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಉಳಿಕೆ ಮೂಲ ವೃಂದ ಹಾಗೂ ಹೈದ್ರಾಬಾದ್ ಕರ್ನಾಟಕ ವೃಂದಕ್ಕೆ ಪ್ರತ್ಯೇಕ ನೋಟಿಫಿಕೇಶನ್‌ ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿಯನ್ನು ಏಪ್ರಿಲ್ 15 ರಿಂದ ಸಲ್ಲಿಸಬಹುದು.

ಕರ್ನಾಟಕ ಪಿಡಿಒ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ಹೇಗಿರುತ್ತದೆ?
ಕರ್ನಾಟಕ ಪಿಡಿಒ ಹುದ್ದೆಗೆ ಒಟ್ಟು 400 ಅಂಕಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಈ ಕೆಳಗಿನ ಮಾದರಿಯಲ್ಲಿ ನಡೆಸಲಾಗುತ್ತದೆ.
ಪತ್ರಿಕೆ-1
ಸಾಮಾನ್ಯ ಜ್ಞಾನ, ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್ ಕುರಿತ 100 ಅಂಕಗಳು ಇರಲಿದ್ದು, ಒಟ್ಟು 200 ಅಂಕಗಳಿಗೆ ಪರೀಕ್ಷೆ ಇರುತ್ತದೆ. ಒಟ್ಟು ಪರೀಕ್ಷೆ ಅವಧಿ 2 ಗಂಟೆ. ವಸ್ತುನಿಷ್ಠ ಬಹು ಆಯ್ಕೆ ಪ್ರಶ್ನೆಗಳು ಇರುತ್ತವೆ.

ಪತ್ರಿಕೆ-2
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ವಿಷಯಕ್ಕೆ ಸಂಬಂಧಿಸಿದ 100 ಪ್ರಶ್ನೆಗಳು ಇರುತ್ತವೆ. ಈ ಪತ್ರಿಕೆಯು 200 ಅಂಕಗಳಿಗೆ ಪರೀಕ್ಷೆ ಆಗಿರುತ್ತದೆ. ಎರಡು ಗಂಟೆಗಳ ಪರೀಕ್ಷೆ ಇರುತ್ತದೆ. ಈ ಪತ್ರಿಕೆಯು ವಸ್ತುನಿಷ್ಠ ಬಹು ಆಯ್ಕೆ ಪತ್ರಿಕೆ ಆಗಿರುತ್ತದೆ.

ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್‌ ಅಧಿವೇಶನದಲ್ಲಿ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಲಿಖಿತವಾಗಿ ಉತ್ತರ ನೀಡಿರುವ ಅವರು, ಒಟ್ಟಾರೆ 6,021 ಪಿಡಿಒ ಹುದ್ದೆಗಳು ಮಂಜೂರಾಗಿದ್ದು, 5,361 ಹುದ್ದೆಗಳು ಭರ್ತಿಯಾಗಿವೆ. 660 ಹುದ್ದೆಗಳು ಖಾಲಿ ಒವೆ. ಇವುಗಳನ್ನು ಬಡ್ತಿ ಮತ್ತು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ನೇರ ನೇಮಕಾತಿ ಮೂಲಕ 385 ಹುದ್ದೆಗಳನ್ನು ಭರ್ತಿ ಮಾಡಬೇಕಾಗಿದ್ದು, ಇವುಗಳಲ್ಲಿ ಈಗ 150 ಹುದ್ದೆಗಳ ನೇಮಕ ಪ್ರಕ್ರಿಯೆ ಮಾತ್ರ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದರು. ಆದರೆ ಅಭ್ಯರ್ಥಿಗಳ ಒತ್ತಡಕ್ಕೆ ಮಣಿದ ಸಚಿವರು ಖಾಲಿ ಇರುವ ಎಲ್ಲ ಹುದ್ದೆಗಳಿಗೂ ನೇಮಕ ಪ್ರಕ್ರಿಯೆ ನಡೆಸಲು ಇಲಾಖೆಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.


ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಸರ್ಕಾರದ ಆದೇಶದಂತೆ ಈ ಕೂಡಲೇ ನೇಮಕಾತಿ ಪ್ರಸ್ತಾವನೆಯನ್ನು ಕೆಪಿಎಸ್‌ಸಿಗೆ ಸಲ್ಲಿಸಲಿದ್ದು, ಕೆಪಿಎಸ್‌ಸಿಯು ಸದ್ಯವೇ ಅಧಿಸೂಚನೆ ಹೊರಡಿಸಲಿದೆ. ಹುದ್ದೆಗಳ ಮೀಸಲು ವರ್ಗೀಕರಣವನ್ನು ಅಂತಿಮಗೊಳಿಸಲಾಗುತ್ತಿದ್ದು, ಆದಷ್ಟು ಬೇಗ ಕೆಪಿಎಸ್‌ಸಿಗೆ ಪ್ರಸ್ತಾವನೆ ಸಲ್ಲಿಸುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ವಿಸ್ತಾರ ನ್ಯೂಸ್‌ಗೆ ಮಾಹಿತಿ ನೀಡಿದ್ದಾರೆ.

ಯಾವ್ಯಾವ ಜಿಲ್ಲೆಯಲ್ಲಿ ಎಷ್ಟು ನೇರ ನೇಮಕಾತಿಯ ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿಯ ವಿಧಾನಸಭೆಯಲ್ಲಿ ಸಚಿವರು ನೀಡಿದ್ದರು. ಈ ಪ್ರಕಾರ ಬೆಂಗಳೂರು ಗ್ರಾಮಾಂತರದಲ್ಲಿ -10, ಬೆಂಗಳೂರು ನಗರದಲ್ಲಿ -03, ಚಿಕ್ಕಬಳ್ಳಾಪುರ- 04, ಚಿತ್ರದುರ್ಗ-0, ದಾವಣಗೆರೆ-04, ಕೋಲಾರ-08, ರಾಮನಗರ-04, ಶಿವಮೊಗ್ಗ-28, ತುಮಕೂರು-28, ಬಾಗಲಕೋಟೆ-3, ಬೆಳಗಾವಿ-31, ಧಾರವಾಡ-0, ಗದಗ-09, ಹಾವೇರಿ-07, ಉತ್ತರ ಕನ್ನಡ-09, ವಿಜಯಪುರ-1, ಚಿಕ್ಕಮಗಳೂರು-28, ಉಡುಪಿ-12, ದಕ್ಷಿಣ ಕನ್ನಡ-21, ಕೊಡಗು-09, ಮಂಡ್ಯ-04, ಹಾಸನ-16, ಮೈಸೂರು-07, ಚಾಮರಾಜನಗರ-04, ರಾಯಚೂರು-24, ಬೀದರ್‌-21, ಬಳ್ಳಾರಿ-05, ಯಾದಗಿರಿ-10, ಕಲಬುರಗಿ-37, ಕೊಪ್ಪಳ-9, ವಿಜಯನಗರ-35 ನೇರ ನೇಮಕಾತಿ ಹುದ್ದೆಗಳು ಸದ್ಯ ಖಾಲಿ ಇವೆ.


ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಪಿಡಿಒ ನೇಮಕಕ್ಕೆ ಸಿದ್ಧತೆ ನಡೆಸಿದೆ ಎಂದು ʻವಿಸ್ತಾರ ನ್ಯೂಸ್‌ʼ ಜೂನ್‌ 17 ರಂದೇ ವರದಿ ಮಾಡಿತ್ತು. ಪಿಡಿಒ ಹುದ್ದೆಗಳು ಖಾಲಿ ಇರುವುದರಿಂದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ ಎಂದು ಶಾಸಕರು ದೂರುತ್ತಿರುವುದರಿಂದ ಸರ್ಕಾರ ಆದಷ್ಟು ಬೇಗ ಈ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಿದೆ.



ವಿಧಾನಸಭೆಯಲ್ಲಿ ಶಾಸಕ ಬಸನಗೌಡ ದದ್ದಲ್‌ ಅವರ ಇನ್ನೊಂದು ಪ್ರಶ್ನೆಗೆ ಉತ್ತರಿಸಿರುವ ಸಚಿವ ಪ್ರಿಯಾಂಕ್‌ ಖರ್ಗೆ, ರಾಜ್ಯದಲ್ಲಿ 604 ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್‌-I ಹುದ್ದೆ ಖಾಲಿ ಇದ್ದು, ಇದರಲ್ಲಿ 530 ಹುದ್ದೆಗಳು ನೇರ ನೇಮಕಾತಿಯ ಹುದ್ದೆಗಳಾಗಿವೆ. 719 ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್‌-II ಹುದ್ದೆ ಖಾಲಿ ಇದ್ದು, ಇದರಲ್ಲಿ 412 ಹುದ್ದೆಗಳು ನೇರ ನೇಮಕಾತಿಯ ಹುದ್ದೆಗಳಾಗಿವೆ. 345 ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳು ಖಾಲಿ ಇದ್ದು, ಇವುಗಳಲ್ಲಿ 82 ಹುದ್ದೆಗಳು ನೇರ ನೇಮಕಾತಿಯ ಹುದ್ದೆಗಳಾಗಿವೆ ಎಂದು ತಿಳಿಸಿದ್ದಾರೆ. ಪಿಡಿಒ ಹುದ್ದೆಗಳ ಜತೆಗೆ ಈ ಹುದ್ದೆಗಳಿಗೂ ನೇಮಕ ನಡೆಯಲಿದೆ.

ಯಾರಿಗೆಲ್ಲಾ ಅವಕಾಶ?
ಅಂಗೀಕೃತಗೊಂಡ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಶಿಕ್ಷಣ ಪಡೆದಿರುವ ಅಭ್ಯರ್ಥಿಗಳು ಪಿಡಿಒ ಮತ್ತು ಗ್ರಾಮ ಪಂಚಾಯತಿ ಕಾರ್ಯದರ್ಶಿ (ಗ್ರೇಡ್‌-I) ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಗ್ರಾಮ ಪಂಚಾಯತಿ ಕಾರ್ಯದರ್ಶಿ (ಗ್ರೇಡ್‌-II) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಓದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷ ಮತ್ತು ಗರಿಷ್ಠ 35 ವರ್ಷ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.



ವೇತನ ಎಷ್ಟಿರುತ್ತದೆ?
ಗ್ರಾಮ ಪಂಚಾಯಾತ್‌ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಯ ವೇತನ ಶ್ರೇಣಿ: ರೂ. 37,900-70,850
ಗ್ರಾಮ ಪಂಚಾಯತಿ ಕಾರ್ಯದರ್ಶಿ (ಗ್ರೇಡ್‌-I) ಹುದ್ದೆಯ ವೇತನ ಶ್ರೇಣಿ: ರೂ. 27,650-52,650
ಗ್ರಾಮ ಪಂಚಾಯತಿ ಕಾರ್ಯದರ್ಶಿ (ಗ್ರೇಡ್‌-II) ಹುದ್ದೆಯ ವೇತನ ಶ್ರೇಣಿ: ರೂ. 21,400-42,000
ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಯ ವೇತನ ಶ್ರೇಣಿ: ರೂ. 21,400-42,000

ನೇಮಕ ಹೇಗೆ?
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿಗಳಿಸಿದ ಶೇಕಡಾವಾರು ಅಂಕಗಳ ಆಧಾರದಲ್ಲಿ ನೇಮಕಮಾಡಿಕೊಳ್ಳಲಾಗುತ್ತದೆ. ಈ ಯಾವ ಹುದ್ದೆಗಳಿಗೂ ಸಂದರ್ಶನ ನಡೆಸಲಾಗುವುದಿಲ್ಲ.

ಈ ಹಿಂದೆ ಪಿಡಿಒ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವಾಗ ನಡೆಸಲಾಗುತ್ತಿದ್ದ ಸ್ಪರ್ಧಾತ್ಮಕ ಪರೀಕ್ಷೆಯು ಎರಡು ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡಿರುತ್ತಿತ್ತು. ಪ್ರಶ್ನೆ ಪತ್ರಿಕೆ-1 ಸಾಮಾನ್ಯ ಜ್ಞಾನಕ್ಕೆ ಸಂಬಂಧಿಸಿದ್ದಾಗಿರುತ್ತಿತ್ತು. ಇದರಲ್ಲಿ ಒಟ್ಟು ನೂರು ಪ್ರಶ್ನೆಗಳಿರಲಿದ್ದು, 200 ಅಂಕಗಳಿಗೆ ಈ ಪರೀಕ್ಷೆ ನಡೆಯುತ್ತಿತ್ತು. ಮತ್ತೊಂದು ಪತ್ರಿಕೆ-2 ಸಹ ನೂರು ಪ್ರಶ್ನೆಗಳಿರಲಿದ್ದು, 200 ಅಂಕಗಳಿಗೆ ನಡೆಯುತ್ತಿತ್ತು.



2016 ರಲ್ಲಿ ನೇಮಕ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿತ್ತು. ಆದರೆ ಈ ಬಾರಿ ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್‌ಸಿ) ಈ ನೇಮಕ ಪ್ರಕ್ರಿಯೆ ನಡೆಸುತ್ತಿರುವುದರಿಂದ ಆಯೋಗವು ಗ್ರೂಪ್‌ “ಸಿʼʼ ಹುದ್ದೆಗಳ ನೇಮಕಕ್ಕೆ ನಡೆಸುವ ರೀತಿಯಲ್ಲಿಯೇ ಈ ಹುದ್ದೆಗಳಿಗೂ ಪರೀಕ್ಷೆ ನಡೆಸಲಿದೆ. ಗ್ರೂಪ್‌ ಸಿ ಹುದ್ದೆಗಳಿಗೆ 200 ಅಂಕಗಳಿಗೆ ಬದಲಾಗಿ ನೂರು ಅಂಕಗಳಿಗೆ ಪರೀಕ್ಷೆ ನಡೆಯುತ್ತದೆ.


logoblog

Thanks for reading Karnataka PDO Recruitment 2024

Previous
« Prev Post

No comments:

Post a Comment