Tuesday, March 5, 2024

Karnataka Teacher Eligibility Test Date: 30-06-2024 is scheduled to be held on Sunday in two sessions in all the district centers of the state.

  Wisdom News       Tuesday, March 5, 2024
Hedding ; Karnataka Teacher Eligibility Test Date: 30-06-2024 is scheduled to be held on Sunday in two sessions in all the district centers of the state...


Kar TET 2024: ಜೂನ್‌ನಲ್ಲಿ ಟಿಇಟಿ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದ ಶಿಕ್ಷಣ ಇಲಾಖೆ
Kar TET 2024: ಸಾರ್ವಜನಿಕ ಶಿಕ್ಷಣ ಇಲಾಖೆಯು ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ’(ಟಿಇಟಿ)ಯನ್ನು ಈ ಬಾರಿ ಜೂನ್‌ನಲ್ಲಿಯೇ ನಡೆಸಲು ತೀರ್ಮಾನಿಸಿದೆ. ಈ ಬಗ್ಗೆ ಸದ್ಯವೇ ಪ್ರಕಟಣೆ ಹೊರಡಿಸಲಿದೆ.


ಪ್ರಮುಖ ಸುದ್ದಿKar TET 2024: ಜೂನ್‌ನಲ್ಲಿ ಟಿಇಟಿ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದ ಶಿಕ್ಷಣ ಇಲಾಖೆ
Kar TET 2024: ಸಾರ್ವಜನಿಕ ಶಿಕ್ಷಣ ಇಲಾಖೆಯು ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ’(ಟಿಇಟಿ)ಯನ್ನು ಈ ಬಾರಿ ಜೂನ್‌ನಲ್ಲಿಯೇ ನಡೆಸಲು ತೀರ್ಮಾನಿಸಿದೆ. ಈ ಬಗ್ಗೆ ಸದ್ಯವೇ ಪ್ರಕಟಣೆ ಹೊರಡಿಸಲಿದೆ.


 ಸಾರ್ವಜನಿಕ ಶಿಕ್ಷಣ ಇಲಾಖೆಯು ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ’(ಟಿಇಟಿ) (Kar TET 2024)ಯನ್ನು ಈ ಬಾರಿ ಜೂನ್‌ನಲ್ಲಿಯೇ ನಡೆಸಲು ತೀರ್ಮಾನಿಸಿದೆ. ಇದಕ್ಕಾಗಿ ಇಲಾಖೆಯು ಪರೀಕ್ಷಾ ಕೇಂದ್ರಗಳನ್ನು ಗುರುತಿಸುವ ಕೆಲಸ ಆರಂಭಿಸಿದ್ದು, ಸದ್ಯವೇ ಪ್ರಕಟಣೆ ಹೊರಡಿಸಲಿದೆ ಎಂದು ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.




ಕಳೆದ ವರ್ಷಕ್ಕಿಂತ ಹೆಚ್ಚು ಅಭ್ಯರ್ಥಿಗಳು ಈ ಪರೀಕ್ಷೆ ಬರೆಯುವ ನಿರೀಕ್ಷೆ ಇರುವುದರಿಂದ ಶೇ. 5ರಷ್ಟು ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಲು ಶಿಕ್ಷಣ ಇಲಾಖೆಯು ತೀರ್ಮಾನಿಸಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಯು ಕಡ್ಡಾಯವಾಗಿ ಇರುವಂತೆ ಇಲಾಖೆಯು ಮುನ್ನೆಚ್ಚರಿಕೆಯನ್ನು ವಹಿಸುತ್ತಿದೆ.

ಈ ವರ್ಷವೂ ಮತ್ತೆ ಶಿಕ್ಷಕರ ನೇಮಕಾತಿ ನಡೆಯಲಿರುವುದರಿಂದ ಆದಷ್ಟು ಬೇಗ ಈ ಅರ್ಹತಾ ಪರೀಕ್ಷೆಯನ್ನು ಪೂರ್ಣಗೊಳಿಸಲು ಶಿಕ್ಷಣ ಇಲಾಖೆಯು ತೀರ್ಮಾನಿಸಿದೆ. ಕಳೆದ ವರ್ಷ ಈ ಪರೀಕ್ಷೆಗೆ ಜುಲೈನಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು, ಸೆಪ್ಟೆಂಬರ್‌ನಲ್ಲಿ ಪರೀಕ್ಷೆ ನಡೆಸಲಾಗಿತ್ತು. ಈ ವರ್ಷ ಜೂನ್‌ನಲ್ಲಿಯೇ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದ್ದು, ಏಪ್ರಿಲ್‌ನಲ್ಲಿಯೇ ಅರ್ಜಿ ಆಹ್ವಾನಿಸುವ ನಿರೀಕ್ಷೆ ಇದೆ.




ರಾಜ್ಯ ಸರ್ಕಾರ ನಡೆಸುವ ಶಿಕ್ಷಕರ ನೇಮಕಾತಿಯಲ್ಲಿ ಭಾಗವಹಿಸಲು ಈ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವುದು ಕಡ್ಡಾಯವಾಗಿರುತ್ತದೆ. ಅಭ್ಯರ್ಥಿಗಳು ಎಷ್ಟು ಬಾರಿ ಬೇಕಾದರೂ ಈ ಅರ್ಹತಾ ಪರೀಕ್ಷೆ ಬರೆಯಬಹುದಾಗಿದೆ. ಹೆಚ್ಚಿನ ಅಂಕ ಪಡೆಯಲು ಬಯಸುವವರು ಮರು ಪರೀಕ್ಷೆಯನ್ನು ಸಹ ತೆಗೆದುಕೊಳ್ಳಬಹುದು. ಈ ಪರೀಕ್ಷೆಯ ಅಂಕಗಳನ್ನು ಶಿಕ್ಷಕರ ನೇಮಕಾತಿಗೆ ಮಾನದಂಡವನ್ನಾಗಿ ಪರಿಗಣಿಸಲಾಗುತ್ತದೆ.




ಅರ್ಹತೆಗಳೇನು?
1 ರಿಂದ 5ನೇ ತರಗತಿಗಳಿಗೆ ಶಿಕ್ಷಕರಾಗಲು ಸೀನಿಯರ್ ಸೆಕೆಂಡರಿ/ಪಿಯುಸಿ/ತತ್ಸಮಾನ ವಿದ್ಯಾರ್ಹತೆಯಲ್ಲಿ ಕನಿಷ್ಠ ಶೇ.50 (ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು ಶೇ.45) ಅಂಕಗಳನ್ನು ಪಡೆದಿರಬೇಕು ಮತ್ತು ಶಿಕ್ಷಣದಲ್ಲಿ (D.El.Ed) ಎರಡು ವರ್ಷಗಳ ಡಿಪ್ಲೊಮಾ ಪಡೆದಿರಬೇಕು ಅಥವಾ ವಿಶೇಷ ಶಿಕ್ಷಣದಲ್ಲಿ ಎರಡು ವರ್ಷದ ಡಿಪ್ಲೊಮಾ ಮಾಡಿರಬೇಕು. ಬಿಇಡಿ ಪದವಿ ಪಡೆದವರೂ ಅರ್ಜಿ ಸಲ್ಲಿಸಬಹುದು. ಇವರೆಲ್ಲರೂ ಟಿಇಟಿ ಪರೀಕ್ಷೆಯಲ್ಲಿ ಪತ್ರಿಕೆ-1 ಅನ್ನು ಬರೆಯಲು ಅರ್ಹರಾಗಿರುತ್ತಾರೆ.




6 ರಿಂದ 8ನೇ ತರಗತಿಗೆ ಶಿಕ್ಷಕರಾಗಲು ಪದವಿಯಲ್ಲಿ ಕನಿಷ್ಠ ಶೇ. 50 (ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು ಶೇ.45) ಅಂಕಗಳನ್ನು ಪಡೆದಿರಬೇಕು ಮತ್ತು ಎರಡು ವರ್ಷಗಳ D.El.Ed ಕೋರ್ಸಿನ ತೇರ್ಗಡೆಯಾಗಿರಬೇಕು ಅಥವಾ ಬಿ.ಇಡಿಯಲ್ಲಿ ಅಥವಾ ನಾಲ್ಕು ವರ್ಷಗಳ B.El.Ed ಯಲ್ಲಿ ಅಥವಾ ಅಥವಾ ನಾಲ್ಕು ವರ್ಷಗಳ ಎಲಿಮೆಂಟರಿ ಶಿಕ್ಷಣದ ಪದವಿಯನ್ನು ಪಡೆದಿರಬೇಕು. ಬಿಎ/ಬಿಎಸ್ಸಿ ಪದವಿ ಮತ್ತು ಶಿಕ್ಷಣದಲ್ಲಿ ಎರಡು ವರ್ಷಗಳ ಡಿಪ್ಲೊಮಾ ಪಡೆದವರು ಕೂಡ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.




1 ರಿಂದ 8ನೇ ತರಗತಿಗಳಿಗೆ ಶಿಕ್ಷಕರಾಗಲು ಸೀನಿಯರ್ ಸೆಕೆಂಡರಿ/ಪಿಯುಸಿ/ತತ್ಸಮಾನ ವಿದ್ಯಾರ್ಹತೆಯಲ್ಲಿ ಕನಿಷ್ಠ ಶೇ.50(ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು ಶೇ.45) ಅಂಕಗಳನ್ನು ಗಳಿಸಿರಬೇಕು ಮತ್ತು ನಾಲ್ಕು ವರ್ಷಗಳ ಎಲಿಮೆಂಟರಿ ಶಿಕ್ಷಣ ಪದವಿಯನ್ನು ಹೊಂದಿರಬೇಕು. ಈ ಅಭ್ಯರ್ಥಿಗಳು ಟಿಇಟಿ ಪರೀಕ್ಷೆಯಲ್ಲಿ ಎರಡೂ ಪತ್ರಿಕೆಗಳನ್ನು ಬರೆಯಲು ಅರ್ಹರಾಗಿರುತ್ತಾರೆ.




ಅಂತಿಮ ವರ್ಷದಲ್ಲಿ /ಸೆಮಿಸ್ಟರ್‌ನಲ್ಲಿ ಓದುತ್ತಿರುವ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದಾಗಿದೆ. ಈ ಪರೀಕ್ಷೆ ಬರೆಯಲು ವಯೋಮಿತಿ ಇರುವುದಿಲ್ಲ.



 ಎನ್‌ಸಿಟಿಇಯಿಂದ ಮಾನ್ಯತೆ ಪಡೆದಂತಹ ಡಿಪ್ಲೊಮಾ/ ಪದವಿ ಕೋರ್ಸುಗಳನ್ನು ಮಾತ್ರ ವಿದ್ಯಾರ್ಹತೆಯಲ್ಲಿ ಪರಿಗಣಿಸಲಾಗುತ್ತದೆ.


ಜೀವಿತಾವಧಿಯ ಮಾನ್ಯತೆ


ಈ ಪರೀಕ್ಷೆಯಲ್ಲಿ ತೇರ್ಗಡೆಯಾದವರಿಗೆ ನೀಡಲಾಗುವ ಪ್ರಮಾಣ ಪತ್ರವು ಜೀವಿತಾವಧಿಯವರೆಗೆ ಮಾನ್ಯತೆಯನ್ನು ಹೊಂದಿರುತ್ತದೆ. ಈ ಹಿಂದೆ ಏಳು ವರ್ಷಗಳ ಕಾಲ ಮಾನ್ಯತೆ ಇರಲಿದೆ ಎಂದು ಹೇಳಲಾಗಿತ್ತು. ಆದರೆ ಈಗ ಬದಲಾವಣೆ ಮಾಡಲಾಗಿದೆ. ಅರ್ಹತೆ ಪಡೆದವರು ಯಾವುದೇ ಸಂದರ್ಭದಲ್ಲಿ ನಡೆಯುವ ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.





logoblog

Thanks for reading Karnataka Teacher Eligibility Test Date: 30-06-2024 is scheduled to be held on Sunday in two sessions in all the district centers of the state.

Previous
« Prev Post

No comments:

Post a Comment