Tuesday, March 26, 2024

SSLC Exam Supervisor Teacher Suspension in Yadagiri

  Wisdom News       Tuesday, March 26, 2024
Hedding ; SSLC Exam Supervisor Teacher Suspension in Yadagiri...



ರಾಜ್ಯದಾದ್ಯಂತ 25-03-2024ರಿಂದ SSLC ವಾರ್ಷಿಕ ಪರೀಕ್ಷೆ ಆರಂಭಗೊಂಡಿದೆ. ಮೊದಲ ದಿನದ ಪರೀಕ್ಷೆಗೆ ಒಟ್ಟು 8.26 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಈ ನಡುವಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಸಾಮೂಹಿಕ ನಕಲು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಇದೀಗ ಕೊಠಡಿ ಮೇಲ್ವಿಚಾರಕ ಶಿಕ್ಷಕರನ್ನು ಅಮಾನತ್ತುಗೊಳಿಸಿ ಆದೇಶಿಸಲಾಗಿದೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹುಣಸಗಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎಸ್‌ಎಸ್‌ಎಲ್‌ಸಿ ಪ್ರಥಮ ಭಾಷೆ ಪರೀಕ್ಷೆ ನಡೆದಿದ್ದು, ಮೊದಲ ದಿನವೇ ವಿದ್ಯಾರ್ಥಿಗಳು ಸಾಮೂಹಿಕ ನಕಲು ನಡೆಸಿರುವುದು ಬಯಲಾಗಿದೆ. ಕೊಠಡಿಯಲ್ಲಿನ ಸಿಸಿ ಕ್ಯಾಮರಾದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ನಕಲು ಬೆಳಕಿಗೆ ಬಂದಿದ್ದು, ಕೊಠಡಿ ಮೇಲ್ವಿಚಾರದ ಸಾಹೇಬಗೌಡ ಎಂಬವರನ್ನು ಅಮಾನತ್ತುಗೊಳಿಸಲಾಗಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಇದೇ ಮೊದಲ ಬಾರಿಗೆ ವೆಬ್‌ಕಾಸ್ಟಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಅದರ ಆಧಾರದಲ್ಲಿ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಏವೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಸಾಹೇಬಗೌಡ ಉಕ್ಕಾಲಿ ಹಾಗೂ ಝಂಡದಕೇರಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಹಣಮಂತ್ರಾಯ ಎಂಬುವವರನ್ನು ಅಮಾನತು ಮಾಡಲಾಗಿದೆ.

ಸುರಪುರ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಸಾಹೇಬಗೌಡ ಉಕ್ಕಾಲಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಕೊಠಡಿಯಲ್ಲಿಯೇ ಸಾಮೂಹಿಕ ನಕಲು ಕಂಡು ಬಂದಿದೆ. ಆದರೂ ಶಿಕ್ಷಕರು ಯಾವುದೇ ಕ್ರಮವನ್ನು ಕೈಗೊಂಡಿರಲಿಲ್ಲ. ಮಾತ್ರವಲ್ಲ, ಮುಖ್ಯ ಅಧೀಕ್ಷಕರ ಗಮನಕ್ಕೂ ತಂದಿರಲಿಲ್ಲ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪರೀಕ್ಷಾ ಅವ್ಯವಹಾರ ಕಂಡು ಬಂದಲ್ಲಿ, ತಕ್ಷಣವೇ ಮುಖ್ಯ ಅಧೀಕ್ಷಕರ ಗಮನಕ್ಕೆ ತಂದು ನಿಯಮಾನುಸಾರ ಕ್ರಮಕೈಗೊಳ್ಳಲು ಮುಖ್ಯ ಅಧೀಕ್ಷಕರಿಗೆ ಅಧಿಕಾರವಿರುತ್ತದೆ. ಆದರೆ ಸಾಹೇಬಗೌಡ ಉಕ್ಕಾಲಿ ಅವರು ಬೇಜವಾಬ್ದಾರಿತನ ಹಾಗೂ ಕರ್ತವ್ಯ ಲೋಪ ಎಸಗಿರುವುದು ಕಂಡು ಬಂದಿದೆ.

ಈ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ ಎಚ್‌.ಟಿ ಅವರು ಅಮಾನತ್ತುಗೊಳಿಸಿದ್ದಾರೆ. ಅಲ್ಲದೇ ಸಕ್ಷಮ ಪ್ರಾಧಿಕಾರದ ಲಿಖಿತ ಅನುಮತಿ ಇಲ್ಲದೇ ಕೇಂದ್ರಸ್ಥಾನವನ್ನು ತೊರೆಯುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

logoblog

Thanks for reading SSLC Exam Supervisor Teacher Suspension in Yadagiri

Previous
« Prev Post

No comments:

Post a Comment