ಪ್ರೀತಿಯ ಎಸೆಸೆಲ್ಸಿ ವಿದ್ಯಾರ್ಥಿಗಳೇ, ನಿಮಗೆಲ್ಲಾ ಮೊದಲಾಗಿ ನಮ್ಮ ಶುಭಾಶಯಗಳು
ನೀವು ನಿಮ್ಮ ಜೀವನದ ಮೊದಲ ಬೋರ್ಡ್ ಪರೀಕ್ಷೆಯನ್ನು ಬರೆಯುತ್ತಿದ್ದೀರಿ. ಇದು ನೀವು ಎದುರಿಸುವ ಮೊದಲ ರಾಜ್ಯಮಟ್ಟದ ಪರೀಕ್ಷೆ. ಮುಂದೆ ನೀವು ಎದುರಿಸುವ ಹಲವು ಬೋರ್ಡ್ ಪರೀಕ್ಷೆಗಳಿಗೆ ಇದು ಖಂಡಿತವಾಗಿಯೂ ಪಂಚಾಂಗ ಆಗುತ್ತದೆ.
2023ರ ಎಸೆಸೆಲ್ಸಿ ಪರೀಕ್ಷೆಗೆ ಈಗಾಗಲೇ ಕ್ಷಣಗಣನೆಯು ಆರಂಭ ಆಗಿದೆ. ಮಾರ್ಚ್ 31, ಶುಕ್ರವಾರ ನಿಮ್ಮ ಪರೀಕ್ಷೆಗಳು ಆರಂಭ ಆಗಲಿವೆ. ನಿಮಗೆ ಕಳೆದ ವರ್ಷ ಮೇ 16ರಿಂದ ಇಂದಿನ ದಿನದವರೆಗೂ ನಿಮ್ಮ ಅಧ್ಯಾಪಕರ ಮಾರ್ಗದರ್ಶನದಲ್ಲಿ ಉತ್ತಮವಾದ ತರಬೇತಿಯು ದೊರಕಿದ್ದು ಪರೀಕ್ಷೆಗೆ ಮಾನಸಿಕವಾಗಿ ಪ್ರಿಪೇರ್ ಆಗ್ತಾ ಇದ್ದೀರಿ. ಹಿಂದಿನ ಮೂರು ವರ್ಷಗಳ ಅವಧಿಯಲ್ಲಿ ಕೊರೊನಾ ಕಾರಣಕ್ಕೆ ನಿಮಗೆ ಬಿಗಿಯಾದ ಪರೀಕ್ಷೆಯೇ ಇಲ್ಲದೆ ಎಲ್ಲರೂ ಪಾಸಾಗಿ ಇಂದು ಹತ್ತನೇ ತರಗತಿಯಲ್ಲಿ ಇದ್ದೀರಿ.
ಆದ್ದರಿಂದ ಈ ವರ್ಷದ ಪರೀಕ್ಷೆಯು ನಿಮಗೆ ನಿಜವಾದ ಅಗ್ನಿಪರೀಕ್ಷೆಯೇ ಆಗಬಹುದು. ಆದರೆ ಆತಂಕ ಮಾಡುವ ಅಗತ್ಯವೇ ಇಲ್ಲ. ಆತಂಕ ಮಾಡಿದರೆ ನಿಮ್ಮ ನಿಜವಾದ ಸಾಮರ್ಥ್ಯವನ್ನು ತೋರಿಸಲು ಸಾಧ್ಯವಾಗದೆ ಹೋಗಬಹುದು. ಆದ್ದರಿಂದ ಕೂಲ್ ಆಗಿ ಒಂದೆಡೆ ಕುಳಿತು ಕೊನೆಯ ಕ್ಷಣದ ಕೆಲವು ಸಿದ್ಧತೆಗಳನ್ನು ಮಾಡಿದರೆ ಗೆಲುವು ಖಂಡಿತ ನಿಮ್ಮದೆ ಆಗುತ್ತದೆ.
ಈ ವರ್ಷ ನಿಮಗೆ ಇನ್ನೂ ಕೆಲವು ಅನುಕೂಲಗಳು ಇವೆ!
1. ಈ ವರ್ಷ ಕೊರೊನಾ ತೊಂದರೆ ಇಲ್ಲದೆ ಇಡೀ ವರ್ಷ ಸರಿಯಾದ ಪಾಠಗಳು ನಡೆದಿವೆ. ಎಲ್ಲ ಕಡೆಯೂ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಹೆಚ್ಚು ಬೆವರು ಹರಿಸಿದ್ದಾರೆ. ಇದು ಖಂಡಿತವಾಗಿ ಪಾಸಿಟಿವ್ ಅಂಶವಾಗಿದೆ.
2. ಈ ವರ್ಷದ ವಿದ್ಯಾರ್ಥಿಗಳು ಕೂಡ ಎಂಟು ಮತ್ತು ಒಂಬತ್ತನೇ ತರಗತಿಗಳಲ್ಲಿ ಕೊರೊನಾ ಕಾರಣಕ್ಕೆ ಸಂತ್ರಸ್ತರಾದ ಕಾರಣ (ಅದು ಸರಕಾರ ಮತ್ತು ಎಸೆಸೆಲ್ಸಿ ಬೋರ್ಡ್ ಇಬ್ಬರಿಗೂ ಗೊತ್ತಿರುವ ಕಾರಣ) ಹೆಚ್ಚು ಸುಲಭವಾದ ಪ್ರಶ್ನೆಪತ್ರಿಕೆಗಳು ಈ ವರ್ಷ ಬರುವ ಎಲ್ಲ ಸಾಧ್ಯತೆಗಳು ಇವೆ. ಎಲ್ಲ ಪ್ರಶ್ನೆಪತ್ರಿಕೆಗಳಲ್ಲಿ ಕಠಿಣತೆಯ ಮಟ್ಟ ಕಡಿಮೆ ಆಗಲಿದೆ ಎನ್ನುವುದು ನಿಮಗೆ ಪೂರಕ.
3. ಗಣಿತ ಮತ್ತು ವಿಜ್ಞಾನದ ವಿಷಯಗಳಲ್ಲಿ ಹಿಂದಿನ ವರ್ಷಗಳಲ್ಲಿ 20% ಕಠಿಣ ಮಟ್ಟದ ಅನ್ವಯ ಪ್ರಶ್ನೆಗಳು ಬರುತ್ತಿದ್ದು ಈ ವರ್ಷ ಅದು ಖಂಡಿತ 15% ಆಗಲಿದೆ. ಅಂದರೆ 80 ಅಂಕಗಳ ಪ್ರಶ್ನೆ ಪತ್ರಿಕೆಯಲ್ಲಿ 12 ಅಂಕಗಳ ಪ್ರಶ್ನೆಗಳು ಮಾತ್ರ ಕಠಿಣ ಆಗಿರಬಹುದು. ಉಳಿದ 68 ಅಂಕಗಳ ಪ್ರಶ್ನೆಗಳು ಸುಲಭ ಮತ್ತು ನೇರ ಆಗಿರುತ್ತವೆ.
4. ವಿಜ್ಞಾನ ವಿಷಯದಲ್ಲಿ 12-14 ಅಂಕಗಳನ್ನು ಚಿತ್ರಗಳ ಮೂಲಕ ಪಡೆಯಲು ಅವಕಾಶ ಇದ್ದು ಇದು ಜಸ್ಟ್ ಪಾಸ್ ಆಗುವ ವಿದ್ಯಾರ್ಥಿಗಳಿಗೆ ವರದಾನ ಆಗಲಿದೆ. ಅದರ ಜೊತೆಗೆ ಬೆಳಕು ಪಾಠದಲ್ಲಿ ಕಿರಣ ಚಿತ್ರಗಳು (Ray Diagrams), ವಿದ್ಯುಚ್ಛಕ್ತಿ ಪಾಠದಲ್ಲಿ ಸರ್ಕ್ಯುಟ್‌ಗಳು, ಓಮನ ನಿಯಮ, ಜೌಲನ ನಿಯಮ ಮೊದಲಾದವುಗಳು ಸುಲಭದಲ್ಲಿ ನಿಮಗೆ ಅಂಕ ತಂದುಕೊಡುತ್ತವೆ.
5. ಗಣಿತದಲ್ಲಿ 8-9 ಅಂಕಗಳು ರಚನೆಗೆ ನಿಗದಿ ಆಗಿದ್ದು ಯಾವ ಸೂತ್ರ, ಗುಣಾಕಾರ, ಭಾಗಾಕಾರ ಇಲ್ಲದೆ ಪಡೆಯಬಹುದಾದ ಅಂಕಗಳು ಇವು. ಇದರ ಜೊತೆಗೆ ಗ್ರಾಫ್ ನಾಲ್ಕು ಅಂಕಗಳು, ಓಜೀವ್ ಮೂರು ಅಂಕಗಳು, ಪ್ರಮೇಯದ ಏಳು ಅಂಕಗಳು ಬೋನಸ್ ನಿಮಗೆ!
6. ಯಾವುದೇ ವಿಷಯದಲ್ಲಿ 45 ಅಂಕಗಳನ್ನು ಗುರುತು ಮಾಡುವುದು ಸುಲಭ ಈ ವರ್ಷ. ಯಾವುದೇ ಪರಿಣತ ಅಧ್ಯಾಪಕರು 45 ಅಂಕಗಳನ್ನು ಪಟ್ಟಿ ಮಾಡಲು ನಿಮಗೆ ಸಹಾಯ ಮಾಡಬಹುದು. ಅಷ್ಟನ್ನು ಇನ್ನು ಕೂಡ ಕಲಿಯಲು ಸಮಯ ಇದೆ!
7. ಪ್ರತೀ ವಿಷಯದ ಮಾದರಿ ಪ್ರಶ್ನೆಗಳನ್ನು ನಿಮ್ಮ ಅಧ್ಯಾಪಕರಿಂದ ಪಡೆಯಿರಿ. ಪ್ರತೀ ವಿಷಯದಲ್ಲಿ ಒಂದೆರಡು ಪ್ರಶ್ನೆಪತ್ರಿಕೆಗಳನ್ನು ಬಿಡಿಸಲು ಇನ್ನೂ ಸಮಯ ಇದೆ. ಅವುಗಳನ್ನು ಉತ್ತರಿಸಿ ಆದನಂತರ ನಿಮ್ಮ ಅಧ್ಯಾಪಕರಿಂದ ಮೌಲ್ಯಮಾಪನ ಮಾಡಿಸಿಕೊಳ್ಳಲು ಮರೆಯಬೇಡಿ.
8. ಎಸೆಸೆಲ್ಸಿ ಪರೀಕ್ಷೆಯ ವೇಳಾಪಟ್ಟಿಯು ಈ ವರ್ಷ ನಿಮಗೆ ತುಂಬಾ ಅನುಕೂಲ ಇದೆ. ಎಲ್ಲ ವಿಷಯಗಳ ಪರೀಕ್ಷೆಗಳ ಮಧ್ಯದಲ್ಲಿ ಭರ್ಜರಿಯಾಗಿ ರಜೆ ದೊರೆತಿದೆ. ಇದು ನಿಮ್ಮ ಅಧ್ಯಯನಕ್ಕೆ ಅನುಕೂಲ. ಆದ್ದರಿಂದ ಆತಂಕ ಮಾಡದೆ ಓದಿ.
9. ಕಳೆದ ಎರಡು ವರ್ಷಗಳಲ್ಲಿ ಕೊರೊನಾ ಅಲೆಯು ತೀವ್ರವಾಗಿ ಇದ್ದ ಕಾರಣ ಪರೀಕ್ಷಾ ಕೇಂದ್ರದಲ್ಲಿ ವಿಪರೀತವಾದ ಒತ್ತಡ ಇತ್ತು. ಈ ವರ್ಷ ಅಷ್ಟು ಉಸಿರುಗಟ್ಟುವ ವಾತಾವರಣವು ಇರಲಾರದು. ಈ ಬಾರಿಯ ಎಸೆಸೆಲ್ಸಿ ಪರೀಕ್ಷಾ ಕೇಂದ್ರಗಳು ಹೆಚ್ಚು ವಿದ್ಯಾರ್ಥಿಸ್ನೇಹಿ ಆಗಿರುತ್ತವೆ.
10. ಪರೀಕ್ಷೆಯ ಅಂತಿಮ ಹಂತವಾದ ಮೌಲ್ಯಮಾಪನ ಕೂಡ ಈ ಬಾರಿ ವಿದ್ಯಾರ್ಥಿಸ್ನೇಹಿ ಆಗಿರುವ ಎಲ್ಲ ಸಾಧ್ಯತೆಗಳು ನಮಗೆ ಕಾಣುತ್ತಿವೆ. ಈ ಅಂಶ ಕೂಡ ವಿದ್ಯಾರ್ಥಿಗಳಿಗೆ ಅನುಕೂಲ.
ನೀವು ತಕ್ಷಣವೇ ಮಾಡಬೇಕಾದದ್ದು…..
ಇದು ಪಾಸ್ ಆಗಲು ಕಷ್ಟ ಪಡುವ ವಿದ್ಯಾರ್ಥಿಗಳಿಗೆ ಮಾತ್ರ!
1. ನಿಮ್ಮ ಅಧ್ಯಾಪಕರ ಮಾರ್ಗದರ್ಶನ ಪಡೆದು ಪ್ರತೀ ವಿಷಯದಲ್ಲಿ 45 ಅಂಕದ ಪಾಸಿಂಗ್ ಪ್ಯಾಕೇಜ್ ಪ್ರಶ್ನೆಗಳನ್ನು ಪಟ್ಟಿ ಮಾಡಿ. ಅವುಗಳ ಮೇಲೆ ಹೆಚ್ಚು ಫೋಕಸ್ ಮಾಡಿ ಓದಿ.
2. ಇನ್ನು ಪಾಠ 1, ಪಾಠ 2……..ಹೀಗೆ ಓದುವುದನ್ನು ಬಿಟ್ಟು ಪ್ರಶ್ನೆಪತ್ರಿಕೆಗಳನ್ನು ಸ್ವತಂತ್ರವಾಗಿ ಬಿಡಿಸುವುದು ಸೂಕ್ತ. ಬಿಡಿಸಿದ ನಂತರ ಅವುಗಳನ್ನು ನಿಮ್ಮ ಶಿಕ್ಷಕರಿಂದ ಮೌಲ್ಯಮಾಪನವನ್ನು ಮಾಡಿಸಿಕೊಂಡರೆ ಇನ್ನೂ ಒಳ್ಳೆಯದು.
3. ವಿವಿಧ ವಿಷಯಗಳ ಪರಿಣತ ಅಧ್ಯಾಪಕರು ನಡೆಸಿಕೊಡುವ ರೇಡಿಯೋ ಮತ್ತು ಟಿವಿ ಕಾರ್ಯಕ್ರಮಗಳು ತುಂಬಾ ಚೆನ್ನಾಗಿವೆ. ಅವುಗಳನ್ನು ಆಲಿಸಿ.
4. ಭಾಷಾ ವಿಷಯಗಳಲ್ಲಿ ವ್ಯಾಕರಣ (ಗ್ರಾಮರ್) ವಿಭಾಗವು ನಿಮಗೆ ಹೆಚ್ಚು ಗೊಂದಲವನ್ನು ಉಂಟುಮಾಡುವ ವಿಭಾಗ. ಅದಕ್ಕೆ ಪೂರಕವಾದ ಎರಡು ಅಥವ ಮೂರು ಗಂಟೆಗಳ ಒಂದು ತರಗತಿಯು ನಿಮಗೆ ಈಗ ಖಂಡಿತ ಅಗತ್ಯ ಇದೆ. ನಿಮ್ಮ ಅಧ್ಯಾಪಕರನ್ನು ಈ ಬಗ್ಗೆ ವಿನಂತಿ ಮಾಡಿ.
5. ಹಾಗೆಯೇ ಭಾಷಾ ವಿಷಯಗಳಲ್ಲಿ ಪದ್ಯ ಬಾಯಿಪಾಠ, ಸಾರಾಂಶ ಬರೆಯುವುದು, ಪತ್ರ ಲೇಖನ, ಪ್ರಬಂಧ ರಚನೆ, ಸಂದರ್ಭ ಸಹಿತ ಅರ್ಥ ವಿವರಣೆ, ಕವಿ ಕಾವ್ಯ ಪರಿಚಯ, ಗಾದೆ ವಿಸ್ತಾರ ಇವುಗಳು ಹೆಚ್ಚು ಸುಲಭ ಆದವು. ಈ ಅಂಕಗಳನ್ನು ಮಿಸ್ ಮಾಡಿಕೊಳ್ಳಬೇಡಿ. ಅವುಗಳನ್ನು ಈಗಲೂ ನೀವು ಕಲಿಯಬಹುದು.
ಮೊದಲ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ
ಜೂನ್ 2024*
ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ
ಜೂನ್ 2024*
ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ
ಜೂನ್ 2024*
ಸಮಾಜ ವಿಜ್ಞಾನ
ಜೂನ್ 2024*
ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, NSQF ಪರೀಕ್ಷೆಯ ವಿಷಯಗಳು (ಐಟಿ, ಚಿಲ್ಲರೆ, ಆಟೋಮೊಬೈಲ್, ಆರೋಗ್ಯ, ಸೌಂದರ್ಯ ಮತ್ತು ಸ್ವಾಸ್ಥ್ಯ)
ಜೂನ್ 2024*
ಗಣಿತ/*ಸಮಾಜಶಾಸ್ತ್ರ
ಜೂನ್ 19, 2024*
ಎಲೆಕ್ಟ್ರಿಕಲ್ ಇಂಜಿನಿಯರಿಂಗ್ IV ನ ಅಂಶಗಳು, ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಂಶಗಳು -2, ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಂಶಗಳು - IV, ಎಂಜಿನಿಯರಿಂಗ್ ಗ್ರಾಫಿಕ್ಸ್ -2, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಅಂಶಗಳು-IV, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಅಂಶಗಳು, ANSI 'C' ನಲ್ಲಿ ಪ್ರೋಗ್ರಾಮಿಂಗ್, ಕಂಪ್ಯೂಟರ್ ವಿಜ್ಞಾನದ ಅಂಶಗಳು, ಅರ್ಥಶಾಸ್ತ್ರದ ಅಂಶಗಳು
ಕರ್ನಾಟಕ SSLC 2024 ಕೊನೆಯ ನಿಮಿಷದ ತಯಾರಿ ಸಲಹೆಗಳು
ಕರ್ನಾಟಕ SSLC ಪರೀಕ್ಷೆಗಳು 2024 ಕ್ಕೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಕೆಳಗೆ ನೀಡಲಾದ ಕರ್ನಾಟಕ SSLC ತಯಾರಿ ಸಲಹೆಗಳ ಮೂಲಕ ಹೋಗಬಹುದು .
ವಿದ್ಯಾರ್ಥಿಗಳು ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿಯ ಮೂಲಕ ಹೋಗಬೇಕು ಮತ್ತು ನಂತರ, ಕರ್ನಾಟಕ ಎಸ್‌ಎಸ್‌ಎಲ್‌ಸಿ ಪಠ್ಯಕ್ರಮವನ್ನು ತಯಾರಿಸಲು ಅಧ್ಯಯನ ವೇಳಾಪಟ್ಟಿಯನ್ನು ರಚಿಸಬೇಕು
ಅವರು ಪರೀಕ್ಷೆಯ ಮೊದಲು ಸಂಪೂರ್ಣ ಪಠ್ಯಕ್ರಮವನ್ನು ಪೂರ್ಣಗೊಳಿಸಬೇಕು ಮತ್ತು ನಂತರ ಅದನ್ನು ಪರಿಷ್ಕರಿಸಲು ಪ್ರಾರಂಭಿಸಬೇಕು
ಪರೀಕ್ಷೆಗಳ ಕಷ್ಟದ ಮಟ್ಟವನ್ನು ತಿಳಿಯಲು ಮತ್ತು ಅದನ್ನು ನಿವಾರಿಸಲು ಕರ್ನಾಟಕ SSLC ಪ್ರಶ್ನೆ ಪತ್ರಿಕೆಗಳು 2024 ಅನ್ನು ಪರಿಹರಿಸಿ
ವಿದ್ಯಾರ್ಥಿಗಳು ಪ್ರತಿಯೊಂದು ಸಂದೇಹವನ್ನು ನಿವಾರಿಸಬೇಕು ಮತ್ತು ಅಗತ್ಯವಿದ್ದರೆ ಅವರು ಪರಿಕಲ್ಪನೆಗಳ ಉತ್ತಮ ತಿಳುವಳಿಕೆಯನ್ನು ಹೊಂದಲು ಶಿಕ್ಷಕರನ್ನು ಸಂಪರ್ಕಿಸಬೇಕು
ಪ್ರತಿರಕ್ಷಣಾ ವ್ಯವಸ್ಥೆಯನ್ನು ದುರ್ಬಲಗೊಳಿಸಬಹುದು ಮತ್ತು ಖಿನ್ನತೆ ಮತ್ತು ಇತರ ಸಂಬಂಧಿತ ಕಾಯಿಲೆಗಳಿಗೆ ಕಾರಣವಾಗಬಹುದು ಎಂದು ವಿದ್ಯಾರ್ಥಿಗಳು ಒತ್ತಡವನ್ನು ತೆಗೆದುಕೊಳ್ಳಬಾರದು ಎಂದು ಸಲಹೆ ನೀಡುತ್ತಾರೆ. ಅವರು ತಮ್ಮ ಅತ್ಯುತ್ತಮವಾದದ್ದನ್ನು ನೀಡಬೇಕು ಮತ್ತು ಅವರ ತಯಾರಿಯನ್ನು ಒತ್ತಡ-ಮುಕ್ತಗೊಳಿಸಬೇಕು.
ಅಭ್ಯರ್ಥಿಗಳು ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮಾದರಿಯ ಮೂಲಕ ಹೋಗಲು ಮತ್ತು ಮಾರ್ಕಿಂಗ್ ಸ್ಕೀಮ್ ಅನ್ನು ಅರ್ಥಮಾಡಿಕೊಳ್ಳಲು ಸಲಹೆ ನೀಡಲಾಗುತ್ತದೆ.
ಕರ್ನಾಟಕ SSLC ವೇಳಾಪಟ್ಟಿ 2024 ರಲ್ಲಿ FAQ ಗಳು
ಕೆಳಗಿನ ಕರ್ನಾಟಕ SSLC ಟೈಮ್ ಟೇಬಲ್ 2024 ನಲ್ಲಿ FAQ ಗಳನ್ನು ಪರಿಶೀಲಿಸಿ.
6. ಪರೀಕ್ಷಾ ಕೇಂದ್ರದಲ್ಲಿ ಮೂರುಕಾಲು ಘಂಟೆ ಕುಳಿತುಕೊಳ್ಳುವುದು ಬಹಳ ದೊಡ್ಡ ತಪಸ್ಸು. ಅದಕ್ಕೆ ಬೆಟ್ಟದಷ್ಟು ತಾಳ್ಮೆ ಬೇಕು. ಅದನ್ನು ಹೆಚ್ಚು ಮಾಡಲು ಮಾನಸಿಕವಾಗಿ ಸಿದ್ಧತೆ ಮಾಡಿ.
7. ನೀವೀಗ ದಿನಕ್ಕೆ ಕನಿಷ್ಠ ಒಂದೆರಡು ಗಂಟೆಗಳ ಕಾಲ ಬರೆಯುವುದನ್ನು ಅಭ್ಯಾಸ ಮಾಡಬೇಕು. ಇದರಿಂದ ಅಕ್ಷರ ಚಂದ ಆಗುತ್ತದೆ ಮತ್ತು ನಿಮ್ಮ ಸೈಕೊಮೋಟಾರ್ ಕೌಶಲವು ವೃದ್ಧಿ ಆಗುತ್ತದೆ ಮತ್ತು ನೆನಪಿನ ಶಕ್ತಿಯು ಜಾಸ್ತಿಯಾಗುತ್ತದೆ.
8. ಮೌನವು ಅತೀ ಹೆಚ್ಚು ಪ್ರಭಾವಶಾಲೀ ಮಾಧ್ಯಮ. ಪರೀಕ್ಷೆ ಸಮೀಪ ಬರುತ್ತಿದ್ದ ಹಾಗೆ ಹೆಚ್ಚು ಹೊತ್ತು ಮೌನ ಆಗಿರಿ. ಮೌನ ಪ್ರಾರ್ಥನೆಗಳು ಹೆಚ್ಚು ಶಕ್ತಿಶಾಲಿ.
9. ಬೆಳಗ್ಗೆ ಎದ್ದು ಸ್ವಲ್ಪ ಹೊತ್ತು Instrumental Music (ಸಿತಾರ್, ವೀಣೆ ಇತ್ಯಾದಿ) ಕೇಳುವುದು ನಿಮ್ಮ ಏಕಾಗ್ರತೆ ಹೆಚ್ಚು ಮಾಡಲು ಉತ್ತಮ ಅಭ್ಯಾಸ. ಏಕೆಂದರೆ ಸಂಗೀತಕ್ಕೆ ನಿಮ್ಮ ಮೆಮೊರಿ ಮತ್ತು ಏಕಾಗ್ರತೆ ಎರಡನ್ನೂ ಹೆಚ್ಚು ಮಾಡುವ ಶಕ್ತಿ ಇದೆ. ಮನಸ್ಸು ರಿಲ್ಯಾಕ್ಸ್ ಮಾಡಲು ಕೂಡ ಮ್ಯೂಸಿಕ್ ಹೆಚ್ಚು ಅನುಕೂಲಕರ.
10. ನಿಮ್ಮ ಮೇಲೆ ಬೇರೆ ಯಾರಾದರೂ ಭರವಸೆಯನ್ನು ಇಡುವುದಕ್ಕಿಂತ ನಿಮ್ಮ ಮೇಲೆ ನೀವೇ ಹೆಚ್ಚು ಭರವಸೆ ಇಡುವುದು ಮುಖ್ಯ. ಅದು ಪಾಸಿಟಿವ್ ಥಿಂಕಿಂಗ್ ಮಾಡುವುದರಿಂದ ಸಾಧ್ಯ ಆಗುತ್ತದೆ. ‘ನನಗೆ ಖಂಡಿತ ಸಾಧ್ಯ ಇದೆ’ ಅನ್ನುವುದೇ ನಿಮ್ಮ ಯಶಸ್ಸಿನ ಬೀಜ ಮಂತ್ರ.

No comments:
Post a Comment