Tuesday, April 9, 2024

Karnataka 2nd PUC Result 2023

  Wisdom News       Tuesday, April 9, 2024
Hedding ; Karnataka 2nd PUC Result 2023


ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ (Second PUC Exam Result) ಬುಧವಾರ ಪ್ರಕಟವಾಗಲಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸುದ್ದಿಗೋಷ್ಠಿ ನಡೆಸಿದ ಬಳಿಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.



 ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.


2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. 


ವಿದ್ಯಾರ್ಥಿಗಳು ಮತ್ತು ಪೋಷಕರು ‌ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ www.karresultsnic.in ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.


ವಿದ್ಯಾರ್ಥಿಗಳೇ ಹಾಗೂ ಪೋಷಕರೇ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಏಪ್ರಿಲ್ 10 ರಂದು ಬಿಡುಗಡೆಯಾಗಲಿದೆ. ಯುಗಾದಿ ಹಬ್ಬದ ಮರುದಿನವೇ ವಿದ್ಯಾರ್ಥಿಗಳಿಗೆ ಈ ಖುಷಿಯ ವಿಚಾರವನ್ನು ಶಿಕ್ಷಣ ಇಲಾಖೆ ಹಂಚಿಕೊಂಡಿದೆ. 



ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಾಗುತ್ತದೆ.



ಮಲ್ಲೇಶ್ವರಂ ನಲ್ಲಿರುವ ಪರೀಕ್ಷಾ ಮಂಡಳಿ ಈ ಬಗ್ಗೆ ಸ್ಪಷ್ಟನೆ ನೀಡಿದೆ. https://karesults.nic.in ವೆಬ್ ಸೈಟ್ ನಲ್ಲಿ 11 ಗಂಟೆ ನಂತರ ಫಲಿತಾಂಶ ವೀಕ್ಷಿಸಬಹುದು ಎಂದು ತಿಳಿಸಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ 1 ಅನ್ನು ಮಾರ್ಚ್ 01 ರಿಂದ 22 ರವರೆಗೆ ನಡೆಸಿತ್ತು.ರಾಜ್ಯದಾದ್ಯಂತ 1,124 ಕೇಂದ್ರಗಳಲ್ಲಿ ಸುಮಾರು 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.




 ಮಾ.25ರಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಲಾಗಿತ್ತು. ಈ ವರ್ಷದಿಂದ ಮೂರು ಬಾರಿ ಪರೀಕ್ಷೆ ಬರೆಯುವ ಅವಕಾಶ ಇದೆ. ವಿದ್ಯಾರ್ಥಿಗಳು ಬಯಸಿದರೆ ಮತ್ತೊಮ್ಮೆ ಪರೀಕ್ಷೆ ಬರೆಯಬಹುದು. ಮುಂದಿನ ಶೈಕ್ಷಣಿಕ ವರ್ಷ ಪ್ರಾರಂಭಕ್ಕೂ ಮೊದಲೇ ಮೂರು ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಬೇಕಿದೆ.


ಏಪ್ರಿಲ್‌ 10 ಅಂದ್ರೆ ನಾಳೆ ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಬೆಳಗ್ಗೆ 10ಗಂಟೆಗೆ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಲಿದ್ದು, 11ಗಂಟೆಗೆ ನಂತರ https://karresults.nic.in ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳ ರಿಸಲ್ಟ್‌ ಪ್ರಕಟವಾಗಲಿದೆ.



ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ( 2nd PUC Examination-1 Result ) ನಾಳೆ ಬೆಳಗ್ಗೆ 10 ಗಂಟೆಗೆ ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಇಲಾಖೆ ( School Education Department ) ತಿಳಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಮಾರ್ಚ್ 2024ರ ದ್ವಿತೀಯ ಪಿಯುಸಿ ಪರೀಕ್ಷೆ- ನ್ನು ದಿನಾಂಕ:01/03/2024 ರಿಂದ 22/03/2024 ರವರೆಗೆ ನಡೆಸಲಾಯಿತು ಎಂದಿದೆ.



ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 10/04/2024 ರಂದು ಬೆಳಿಗ್ಗೆ 10:00 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ಹೇಳಿದ್ದಾರೆ.

ನಾಳೆ ಬೆಳಿಗ್ಗೆ 10 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಆ ಬಳಿಕ ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ:10/04/2024ರ ಬೆಳಿಗ್ಗೆ 11:00 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ತಿಳಿಸಿದ್ದಾರೆ.












logoblog

Thanks for reading Karnataka 2nd PUC Result 2023

Previous
« Prev Post

No comments:

Post a Comment