ರಾಜ್ಯ ಸರ್ಕಾರಿ ನೌಕರರ ಸಂಘದ 2024-29ನೇ ಅವಧಿಯ ಚುನಾವಣೆ ಪ್ರಕ್ರಿಯೆ ವರದಿಯನ್ನು ಸಲ್ಲಿಸುವಂತೆ ಬೆಂಗಳೂರು ನಗರ ಜಿಲ್ಲೆ ಸಹಕಾರ ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳು ಸೂಚಿಸಿದ್ದಾರೆ.
ಈ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ಸರ್ಕಾರಿ ನೌಕರರ ಸಂಘದ ಚುನಾವಣೆ ಕುರಿತಂತೆ ವರದಿಯ ಜೊತೆಗೆ ಹಿಂದಿನ ಚುನಾವಣಾ ಅಧಿಸೂಚನೆ ಮತ್ತು ಬೈಲಾದ ಪ್ರತಿಗಳನ್ನು ತಮ್ಮ ಕಚೇರಿಗೆ ಸಲ್ಲಿಸಲು ನಿರ್ದೇಶನ ನೀಡಿದ್ದಾರೆ.
ರಾಜ್ಯ ಪರಿಷತ್ ಸದಸ್ಯ ಬಿ.ಗಂಗಾಧರ್ ಅವರು ರಾಜ್ಯ ಸರ್ಕಾರಿ ನೌಕರರ ಸಂಘದ 2024-29ನೇ ಸಾಲಿನ ಚುನಾವಣೆ ನಡೆಸಲು ನಿರ್ದೇಶನ ನೀಡುವಂತೆ ರಾಜ್ಯ ಸರ್ಕಾರದ ಸಹಕಾರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗೆ ಮನವಿ ಪತ್ರ ಸಲ್ಲಿಸಿದ್ದರು. ಜೊತೆಗೆ ಚುನಾವಣಾಧಿಕಾರಿ ನೇಮಕ ಮಾಡುವಂತೆ ಕೋರಿದ್ದರು.
ಈ ಪತ್ರವನ್ನು ಆಧರಿಸಿ ಅಪರ ಮುಖ್ಯ ಕಾರ್ಯದರ್ಶಿ ಸಹಕಾರ ಸಂಘಗಳ ಉಪನಿಬಂಧಕರಿಗೆ ನಿರ್ದೇಶನ ನೀಡಿ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಸಂಬಂಧಿಸಿದ ಮನವಿಯನ್ನು ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಸರ್ಕಾರಿ ನೌಕರರ ಸಂಘದ ಚುನಾವಣೆಯನ್ನು ಬೈಲಾದ ರೀತಿ ಪ್ರಾರಂಭಿಸುವಂತೆ ಜಿಲ್ಲಾ ನೋಂದಣಾಧಿಕಾರಿ ಸಂಘದ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

No comments:
Post a Comment