ಕರ್ನಾಟಕ ರಾಜ್ಯ ಶಿಕ್ಷಣ ಮಂಡಳಿಗೆ (ಕೆಎಸ್‌ಇಎಬಿ) ಸಂಯೋಜಿತವಾಗಿರುವ ಶಾಲೆಗಳ 5,8, 9 ಮತ್ತು 11 ನೇ ತರಗತಿಗಳಿಗೆ "ಬೋರ್ಡ್ ಪರೀಕ್ಷೆಗಳನ್ನು" ನಡೆಸುವುದನ್ನು ಎತ್ತಿಹಿಡಿದ ಹೈಕೋರ್ಟ್ ಆದೇಶ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.
ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರ ನ್ಯಾಯಪೀಠವು ಕಳೆದ ತಿಂಗಳು ಕರ್ನಾಟಕ ಹೈಕೋರ್ಟ್ ನಿರ್ದೇಶನದ ಮೇರೆಗೆ ಪುನರಾರಂಭಗೊಂಡ ಈ ಪರೀಕ್ಷೆಗಳ ಯಾವುದೇ ಫಲಿತಾಂಶಗಳನ್ನು ಘೋಷಿಸುವುದನ್ನು ತಡೆಹಿಡಿದಿದೆ.
ಈ ವಿಷಯದಲ್ಲಿ ಹೈಕೋರ್ಟ್ ಮಾರ್ಚ್ ೨೨ ರಂದು ನೀಡಿದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ಮೇರೆಗೆ ತಡೆಯಾಜ್ಞೆ ನೀಡಲಾಗಿದೆ.
ಕರ್ನಾಟಕ ರಾಜ್ಯವು ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಲು ಮತ್ತು ಅವರಿಗೆ ಮತ್ತು ಅವರ ಪೋಷಕರು, ಶಿಕ್ಷಕರು ಮತ್ತು ಶಾಲಾ ಆಡಳಿತ ಮಂಡಳಿಗೆ ತೊಂದರೆ ಉಂಟುಮಾಡಲು ಬದ್ದವಾಗಿದೆ. ಕರ್ನಾಟಕ ಹೈಕೋರ್ಟ್ ನ ಆದೇಶವು ಆರ್ ಟಿಇ ಕಾಯ್ದೆಗೆ ಅನುಗುಣವಾಗಿಲ್ಲ ಎಂದು ಮೇಲ್ನೋಟಕ್ಕೆ ತೋರುತ್ತಿಲ್ಲ.
ನೋಟಿಸ್ ಅನ್ನು ಎರಡು ವಾರಗಳಲ್ಲಿ ಹಿಂದಿರುಗಿಸಲಾಗುವುದು. ಆದೇಶದ ಕಾರ್ಯಾಚರಣೆಯನ್ನು ಮುಂದಿನ ಆದೇಶದವರೆಗೆ ತಡೆಹಿಡಿಯಲಾಗುವುದು. ಯಾವುದೇ ಶಾಲೆ ಘೋಷಿಸಿದ ಫಲಿತಾಂಶಗಳನ್ನು ಯಾವುದೇ ಉದ್ದೇಶಕ್ಕಾಗಿ ಗಣನೆಗೆ ತೆಗೆದುಕೊಳ್ಳಬಾರದು ಮತ್ತು ಪೋಷಕರಿಗೆ ತಿಳಿಸುವ ಬದಲು ತಡೆಹಿಡಿಯಬೇಕು" ಎಂದು ಸುಪ್ರೀಂ ಕೋರ್ಟ್ ಇಂದು ಆದೇಶಿಸಿದೆ.
ರಾಜ್ಯದ 5,8,9, 11 ತರಗತಿಯ ಬೋರ್ಡ್ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಯಾವುದೇ ಫಲಿತಾಂಶ ಪ್ರಕಟಿಸದಂತೆ ರಾಜ್ಯದ ಶಾಲೆಗಳಿಗೆ ಸೂಚನೆ ನೀಡಿದೆ.
ಹೌದು, ರಾಜ್ಯ ಪಠ್ಯಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾದ ಮೌಲ್ಯಾಂಕನ ಪರೀಕ್ಷೆ ಫಲಿತಾಂಶವನ್ನು ಸೋಮವಾರ ಆಯಾ ಶಾಲೆಗಳಲ್ಲಿ ಪ್ರಕಟಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚಿಸಿತ್ತು.
2023 -24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ವಿದ್ಯಾರ್ಥಿಗಳಿಗೆ ಕಳೆದ ಮಾರ್ಚ್ ನಲ್ಲಿ ಮೌಲ್ಯಾಂಕನ ಪರೀಕ್ಷೆ ನಡೆಸಲಾಗಿದ್ದು, ಬ್ಲಾಕ್ ಹಂತದಲ್ಲಿ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿ ಉತ್ತರ ಪತ್ರಿಕೆಗಳ ಸಹಿತ ಶಾಲಾ ವಿದ್ಯಾರ್ಥಿಗಳ ಅಂಕಗಳನ್ನು ದಾಖಲಿಸಿ ಪ್ರತಿಯನ್ನು ಆಯಾ ಶಾಲೆಗಳಿಗೆ ಕಳುಹಿಸಲಾಗಿತ್ತು.
ಇದೀಗ ರಾಜ್ಯದ 5,8,9, 11 ತರಗತಿಯ ಬೋರ್ಡ್ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.
ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ರಾಜ್ಯದ 5, 8, 9,11 ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಅಸ್ತು ಎಂದಿತ್ತು, ನಂತರ ಹೈಕೋರ್ಟ್ ಮಾರ್ಚ್ 22 ರಂದು ನೀಡಿದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ಮೇರೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಯಾವುದೇ ಶಾಲೆ ಫಲಿತಾಂಶಗಳನ್ನು ಗಣನೆಗೆ ತೆಗೆದುಕೊಳ್ಳಬಾರದು ಮತ್ತು ಪೋಷಕರಿಗೆ ತಿಳಿಸುವ ಬದಲು ತಡೆಹಿಡಿಯಬೇಕು" ಎಂದು ಸುಪ್ರೀಂ ಕೋರ್ಟ್ ಇಂದು ಆದೇಶಿಸಿದೆ.
5, 8, 9 ಹಾಗೂ 11ನೇ ತರಗತಿ ವಿದ್ಯಾರ್ಥಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಕಲೆದ ತಿಂಗಳು ಕರ್ನಾಟಕ ಹೈಕೋರ್ಟ್ ನಿರ್ದೇಶನದ ಮೇರೆಗೆ ಬೋರ್ಡ್ ಎಕ್ಸಾಂ ನಡೆದಿತ್ತು. ಈ ಪರೀಕ್ಷೆಗಳ ಫಲಿತಾಂಶಗಳನ್ನು ಘೋಷಿಸುವುದಕ್ಕೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.
ಮುಂದಿನ ಆದೇಶದವರೆಗೆ ಕಾಯುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಸುಪ್ರೀಕೋರ್ಟ್ನ ನ್ಯಾಯಮೂರ್ತಿಗಳಾದ ಬೇಲಾ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರ ನ್ಯಾಯಾಪೀಠವು ಈ ತೀರ್ಪು ನೀಡಿದೆ. ಶಾಲೆ ಘೋಷಿಸಿದ ಫಲಿತಾಂಶಗಳನ್ನು ಯಾವುದೇ ಕಾರಣಕ್ಕೂ ಗಣನೆಗೆ ತೆಗೆದುಕೊಳ್ಳಬಾರದು ಎಂದು ಹೇಳಿದೆ.
5,8,9,11 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಬೇಡ ಎಂದು ಖಾಸಗಿ ಶಾಲಾ ಒಕ್ಕೂಟಗಳು ಆಗ್ರಹಿಸಿದ್ದವು. ಈ ಹಿಂದೆಯೂ ಖಾಸಗಿ ಶಾಲೆಗಳ ಒಕ್ಕೂಟ ಸುಪ್ರೀಂಕೋರ್ಟ್ ಮೆಟ್ಟಿಲು ಏರಿತ್ತು. ಆ ವೇಳೆ ಹೈಕೋರ್ಟ್ನಲ್ಲೇ ಬಗೆಹರಿಸಿಕೊಳ್ಳಲು ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು. ಇದೀಗ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.
ಮಾರ್ಚ್ ತಿಂಗಳಿನಲ್ಲಿ ಬೋರ್ಡ್ ಎಕ್ಸಾಂ ನಡೆದಿತ್ತು. ಪರೀಕ್ಷೆ ನಡೆಸದಂತೆ ರುಪ್ಸಾ ಅರ್ಜಿ ಸಲ್ಲಿಸಿತ್ತು. ಆದಾಗ್ಯೂ ಪರೀಕ್ಷೆ ಸುಸೂತ್ರವಾಗಿ ನಡೆಸಲಾಗಿತ್ತು. ಇದಾದ ಬಳಿಕ ರುಪ್ಸಾ ಮೌಲ್ಯಮಾಪನ ದೋಷ ಆರೋಪ ಮಾಡಿತ್ತು. ಬೇಕಾಬಿಟ್ಟಿ ಮೌಲ್ಯ ಮಾಪನವಾಗಿದೆ ಎಂದು ಹೇಳಿತ್ತು. ಮೌಲ್ಯಾಂಕನ ಪರೀಕ್ಷೆ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯ ಫಲಿತಾಂಶ ಬಿಡುಗಡೆಗೆ ಬ್ರೇಕ್ ಹಾಕಿದೆ.
08 : 5,8,9 ಮತ್ತು 11 ನೇ ತರಗತಿಯ ವಿಧ್ಯಾರ್ಥಿಗಳು ಮತ್ತೆ ಸಂಕಷ್ಟದಲ್ಲಿ ಸಿಲುಕಿದ್ದು, ಪರೀಕ್ಷೆ ನಡೆಸಲು ಕೋರ್ಟ್ ಆದೇಶಕ್ಕೆ ಕಾದಿದ್ದ ವಿದ್ಯಾರ್ಥಿಗಳು ಇದೀಗ ಫಲಿತಾಂಶಕ್ಕಾಗಿ ಮತ್ತೆ ಕೋರ್ಟ್ ಆದೇಶ ನೋಡುತ್ತಿದ್ದಾರೆ.
ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.
ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರನ್ನೊಳಗೊಂಡ ನ್ಯಾಯಪೀಠವು, ಈ ತರಗತಿಗಳ ಪರೀಕ್ಷೆಗಳ ಫಲಿತಾಂಶ ಘೋಷಣೆಗೆ ತಡೆ ನೀಡಿದೆ. ಸದ್ಯ ಯಾವುದೇ ಶಾಲೆಗಳು ಸಹ ಫಲಿತಾಂಶ ಪ್ರಕಟಿಸಬಾರದು. ಮುಂದಿನ ಆದೇಶದವರೆಗೆ ಕಾಯಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮಾರ್ಚ್ನಲ್ಲಿ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶ ನೀಡಿದ್ದ ಹೈಕೋರ್ಟ್, ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ಸೂಚನೆ ನೀಡಿತ್ತು. ಅದರಂತೆ ಶಾಲೆಗಳು ಪರೀಕ್ಷೆಗಳನ್ನು ನಡೆಸಿದ್ದವು. ಇದೀಗ ಫಲಿತಾಂಶ ಪ್ರಕಟವಾಗುವ ಸಂದರ್ಭದಲ್ಲೇ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಬಂದಿದೆ.

No comments:
Post a Comment