Sunday, April 21, 2024

To apply for teacher transfer information

  Wisdom News       Sunday, April 21, 2024
Hedding ; To apply for teacher transfer information...



ಹಳೇ ಕಾಯಿದೆ ಅನ್ವಯವೇ ಶಿಕ್ಷಕರ ವರ್ಗಾವಣೆ; ಇಲ್ಲಿವೆ ಪ್ರಕ್ರಿಯೆಯ ಪ್ರಮುಖ ದಿನಾಂಕಗಳು


 ಈ ಬಾರಿ ಶಿಕ್ಷಕರ ವರ್ಗಾವಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಅಂತೆಯೇ ದಿನಾಂಕ ಘೋಷಣೆ ಮಾಡಿದೆ. ಇನ್ನು ವಾರ್ಗವಣೆಯನ್ನು ಹಳೆಯ ಕಾಯ್ದೆ ಮಾದರಿಯಲ್ಲಿ ಮಾಡಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಹಳೇ ಕಾಯಿದೆ ಅನ್ವಯವೇ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಈ ಮೂಲಕ 2024ನೇ ಸಾಲಿನ ವರ್ಗಾವಣೆಗೆ ಚಾಲನೆ ನೀಡಿದೆ.

ನೂತನ ಶಿಕ್ಷಕರ ವರ್ಗಾವಣೆ ಕಾಯಿದೆ ಜಾರಿಗೊಳಿಸಿ, ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ಶಿಕ್ಷಣ ಇಲಾಖೆ ಪ್ರಯತ್ನಿಸಿತ್ತು. ಆದರೆ, ಸಮಯದ ಅಭಾವದ ಹಿನ್ನೆಲೆಯಲ್ಲಿ ಇದೀಗ ಹಳೇ ಕಾಯಿದೆ ಮಾದರಿಯಲ್ಲೇ ವರ್ಗಾವಣೆ ನಡೆಸಲಿದ್ದು, ಶಿಕ್ಷಕರಿಗೆ ಅರ್ಜಿ ಸಲ್ಲಿಸಲು ಸೂಚಿಸಿದೆ.

ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರುವ ಹಿನ್ನೆಲೆಯಲ್ಲಿಸದ್ಯ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಿ, ನಂತರ ಕೌನ್ಸೆಲಿಂಗ್‌ಗೆ ದಿನಾಂಕ ನಿಗದಿಪಡಿಸಲು ಇಲಾಖೆ ನಿರ್ಧರಿಸಿದೆ.

ಶಿಕ್ಷಕರು ವರ್ಗಾವಣೆಯ ಅಧಿನಿಯಮ ಮತ್ತು ನಿಯಮಗಳನ್ನು ಎಲ್ಲಹಂತದ ವರ್ಗಾವಣಾ ಪ್ರಾಧಿಕಾರಿಗಳು ಕಡ್ಡಾಯವಾಗಿ ತಿಳಿದುಕೊಳ್ಳಬೇಕು. ಮಾರ್ಗಸೂಚಿಯಲ್ಲಿತಿಳಿಸಿರುವಂತೆ ಹಾಗೂ ಶಿಕ್ಷಕರ ವರ್ಗಾವಣೆ ಕಾಯಿದೆ/ನಿಯಮಗಳು-2020 ಮತ್ತು ತಿದ್ದುಪಡಿ 2022ರ ಪ್ರಕಾರ ಕ್ರಮವಹಿಸಲು ಸಕ್ಷಮ ಪ್ರಾಧಿಕಾರಕ್ಕೆ ಇಲಾಖೆಯು ಸೂಚಿಸಿದೆ.


ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಿ
ಈ ಅಧಿಸೂಚನೆಯು ತಾಂತ್ರಿಕ, ಆಡಳಿತಾತ್ಮಕ ಕಾರಣಗಳಿಂದಾಗಿ ವ್ಯತ್ಯಯಗಳುಂಟಾದಲ್ಲಿಅವಶ್ಯಕತೆಗೆ ಅನುಗುಣವಾಗಿ ವೇಳಾಪಟ್ಟಿಯಲ್ಲಿಬದಲಾವಣೆ ಮಾಡಿಕೊಳ್ಳುವ ಷರತ್ತಿಗೆ ಒಳಪಟ್ಟಿರುತ್ತದೆ. ಇಲಾಖೆಯ ಅದೇಶಗಳನ್ನು ಸ್ಪಷ್ಟವಾಗಿ ಅರ್ಥೈಸಿಕೊಂಡು, ಪ್ರಸ್ತಾಪಿತ ವರ್ಗಾವಣಾ ಪ್ರಕ್ರಿಯೆಯನ್ನು ಯಾವುದೇ ಲೋಪದೋಷಗಳಿಗೆ ಎಡೆಮಾಡಿಕೊಡದಂತೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕೆಂದು ಸೂಚಿಸಲಾಗಿದೆ.

ಒಂದೊಮ್ಮೆ ಇಲಾಖಾ ಮಾರ್ಗಸೂಚಿಗಳನ್ನು ಉಲ್ಲಂಘಿಘಿಸಿ ಅರ್ಜಿಗಳ ಅನುಮೋದನೆ ಮತ್ತು ವರ್ಗಾವಣಾ ಕೌನ್ಸೆಲಿಂಗ್‌ನಲ್ಲಿಅಕ್ರಮಗಳು ಕಂಡುಬಂದಲ್ಲಿ ಅಂತಹ ಸಕ್ಷಮ ಪ್ರಾಧಿಕಾರದ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮಗಳನ್ನು ಕೈಗೊಳ್ಳಲಾಗುವುದು,'' ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತೆ ಬಿ.ಬಿ. ಕಾವೇರಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

ಶಿಕ್ಷಕರ ವರ್ಗಾವಣೆ ಸಂಬಂಧ ಸಕ್ಷಮ ಪ್ರಾಧಿಕಾರವನ್ನು ನಿಗದಿಪಡಿಸಲಾಗಿದೆ. ಶಿಕ್ಷಕರು ಯಾವುದೇ ಕುಂದು-ಕೊರತೆ ಇದ್ದಲ್ಲಿ, ಸಂಬಂಧಪಟ್ಟ ಪ್ರಾಧಿಕಾರವನ್ನು ಸಂಪರ್ಕಿಸಬಹುದಾಗಿದೆ.

ಮಾ.18ರಿಂದ ಆರಂಭ
ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗಳು ಅಧಿಕೃತವಾಗಿ ಮಾ.18ರಿಂದ ಆರಂಭವಾಗಲಿವೆ. ಶಾಲೆಗಳ ವಲಯಗಳ ಇಂದೀಕರಣಕ್ಕೆ ಮಾ.26ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆ ವೆಬ್‌ಸೈಟ್‌ ಸಂಪರ್ಕಿಸಬಹುದು. ಚುನಾವಣೆ ಮುನ್ನವೇ ವರ್ಗಾವಣೆಗೆ ಮಾಡಲು ಶಿಕ್ಷಣ ಇಲಾಖೆಯು ಅಧಿಸೂಚನೆ ಹೊರಡಿಸಿರುವುದಕ್ಕೆ ಶಿಕ್ಷಣ ಸಚಿವರಿಗೆ ಕರ್ನಾಟಕ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಭಿನಂದನೆ ಸಲ್ಲಿಸಿದೆ.


ಪ್ರಮುಖ ದಿನಾಂಕಗಳು
ವರ್ಗಾವಣೆ ಪೂರ್ವ ಭಾವಿ ಕ್ರಮಗಳು ಮಾ.18 ರಿಂದ ಏ.20
ವಲಯ ವರ್ಗಾವಣೆ ಕ್ರಮಗಳು ಏ.8 ರಿಂದ ಏ. 22
ನಿರ್ದಿಷ್ಟಪಡಿಸಿದ ಹುದ್ದೆಗಳ ಶಿಕ್ಷಕರ ವರ್ಗಾವಣೆ ಏ.8 ರಿಂದ ಏ.22
ಕೋರಿಕೆ/ಪರಸ್ಪರ ವರ್ಗಾವಣೆ ಏ.15 ರಿಂದ ಮೇ 31
ವರ್ಗಾವಣೆ ವಿಧ ಉಪ ಪರಿಮಿತಿ ಪರಿಗಣಿಸಬೇಕಾದ ವೃಂದ ಬಲ
ವಲಯ ವರ್ಗಾವಣೆ ಶೇ.4 ಶೈಕ್ಷಣಿಕ ತಾಲೂಕು
ಕೋರಿಕೆ ವರ್ಗಾವಣೆ (ಜಿಲ್ಲೆಒಳಗೆ) ಶೇ.7 ಶೈಕ್ಷಣಿಕ ಜಿಲ್ಲೆ
ಕೋರಿಕೆ ವರ್ಗಾವಣೆ (ವಿಭಾಗ ಒಳಗೆ) ಶೆ.2 ವಿಭಾಗ
ಕೋರಿಕೆ ವರ್ಗಾವಣೆ (ವಿಭಾಗ ಹೊರಗೆ) ಶೇ.2 ವಿಭಾಗ



ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಶಿಕ್ಷಕರು–ಮುಖ್ಯ ಶಿಕ್ಷಕರ ವರ್ಗಾವಣೆಗೆ ಶಾಲಾ ಶಿಕ್ಷಣ ಇಲಾಖೆ ಪರಿಷ್ಕೃತ ಸುತ್ತೋಲೆ ಹೊರಡಿಸಿದ್ದು, ವರ್ಗಾವಣೆಗೆ ಅರ್ಹರಾದ ಶಿಕ್ಷಕರ ಅಂತಿಮ ಪಟ್ಟಿ ಇದೇ 24ರಂದು ಪ್ರಕಟವಾಗಲಿದೆ. 

ಒಂದೇ ಸ್ಥಳ–ಒಂದೇ ಹುದ್ದೆಯಲ್ಲಿ ಕನಿಷ್ಠ ಮೂರು ಹಾಗೂ ಗರಿಷ್ಠ ಐದು ವರ್ಷ ಪೂರೈಸಿದ (ಇದೇ ಮೇ 31ಕ್ಕೆ ಅನ್ವಯವಾಗುವಂತೆ) ಶಿಕ್ಷಕರು ವರ್ಗಾವಣೆಗೆ ಅರ್ಹರಾಗಿರುತ್ತಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಿಕ್ಷಕರ ಸೇವಾ ವಿವರಗಳನ್ನು ಪಡೆದು, ಸೇವಾ ಪುಸ್ತಕದ ವಿವರಗಳನ್ನು ಪರಿಶೀಲಿಸಿದ ನಂತರ ಇದೇ 19ರ ಒಳಗೆ ಅಪ್‌ಲೋಡ್‌ ಮಾಡುವರು. 20ರಂದು ತಾತ್ಕಾಲಿಕ ಕರಡು ಪಟ್ಟಿ ಪ್ರಕಟಿಸಲಾಗುವುದು. ಆಕ್ಷೇಪಣೆಗಳಿದ್ದಲ್ಲಿ ಶಿಕ್ಷಕರು 22ರ ಒಳಗೆ ಸಲ್ಲಿಸಬೇಕು.


23ರಂದು ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ 24ರಂದು ವಲಯವಾರು ವರ್ಗಾವಣೆಗೆ ಅರ್ಹರಾದ ಶಿಕ್ಷಕರ ಅಂತಿಮ ಪಟ್ಟಿ ಪ್ರಕಟಿಸಲಾಗುತ್ತದೆ. ಶೇ 4ರಷ್ಟು (ಶೈಕ್ಷಣಿಕ ತಾಲ್ಲೂಕಿನ ಒಳಗೆ) ವಲಯವಾರು, ಜಿಲ್ಲೆಯ ಒಳಗೆ ಶೇ 7ರಷ್ಟು ಕೋರಿಕೆ ವರ್ಗಾವಣೆ, ಶೇ 2ರಷ್ಟು ವಿಭಾಗವಾರು ವರ್ಗಾವಣೆ, ವಿಭಾಗದ ಹೊರಗೆ ಶೇ 2ರಷ್ಟು ಕೋರಿಕೆ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಶಾಲೆ ಆರಂಭವಾಗುವ ಮೇ 29ರ ಒಳಗೆ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಆಯುಕ್ತೆ ಬಿ.ಬಿ. ಕಾವೇರಿ ತಿಳಿಸಿದ್ದಾರೆ.


ಶಾಲಾ ಶಿಕ್ಷಣ ಇಲಾಖೆಯ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರು ಸಹಿತ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಸರಕಾರಿ ಪ್ರೌಢಶಾಲಾ ಶಿಕ್ಷಕರು, ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪರಿಷ್ಕರಿಸಿದೆ.


ಎ.19ರ ರಾತ್ರಿ 10.30ರ ವರೆಗೆ ಅರ್ಹ ಶಿಕ್ಷಕರ ಹೆಸರನ್ನು ಇಂಡೀಕರಣ (ಅಪ್‌ಡೇಟ್‌) ಮಾಡಲು ಅವಕಾಶ ನೀಡಲಾಗಿದೆ.


ವಲಯ ವರ್ಗಾವಣೆಗೆ ಅರ್ಹರಿರುವ ಶಿಕ್ಷಕರ ತಾತ್ಕಾಲಿಕ ಪಟ್ಟಿ ಬಿಡುಗಡೆಯಾಗಿತ್ತು. ಆದರೆ ವರ್ಗಾವಣೆಗೆ ಅರ್ಹರಿದ್ದ ಹಲವು ಶಿಕ್ಷಕರ ಹೆಸರು ಇಂಡೀಕರಣ (ಅಪ್‌ಡೇಟ್‌) ಆಗದಿರುವುದನ್ನು ಗಮನಿಸಿ ವರ್ಗಾವಣೆ ಪ್ರಕ್ರಿಯೆಗೆ ಸಮಯ ವಿಸ್ತರಿಸಿ ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಎ.19ರ ರಾತ್ರಿ 10.30ರೊಳಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ವರ್ಗಾವಣೆಗೆ ಅರ್ಹರಿರುವ ಶಿಕ್ಷಕರ ಮಾಹಿತಿಯನ್ನು ಇಂಡೀಕರಿಸಬೇಕು. ಈ ಅವಧಿಯ ಬಳಿಕ ವರ್ಗಾವಣೆ ತಂತ್ರಾಂಶವನ್ನು ಪ್ರೀಝ್ ಮಾಡಲಾಗುತ್ತದೆ. ಆ ಬಳಿಕ ಯಾವುದೇ ಇಂಡೀಕರಣಕ್ಕೆ ಆಸ್ಪದ ಇರುವುದಿಲ್ಲ ಎಂದು ಇಲಾಖೆ ತಿಳಿಸಿದೆ.


ಎ.20ಕ್ಕೆ ವಲಯ ವರ್ಗಾವಣೆಗೆ ಆರ್ಹರಿರುವ ಶಿಕ್ಷಕರ ತಾತ್ಕಾಲಿಕ ಕರಡು ಪಟ್ಟಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಿಸಬೇಕು. ಎ. 20ರಿಂದ ಎ.22ರ ವರೆಗೆ ಪ್ರಕಟಿತ ತಾತ್ಕಾಲಿಕ ಕರಡು ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಎ.23ರಂದು “ಎ’ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು ಸಲ್ಲಿಸಿರುವ ಆಕ್ಷೇಪಣೆ, ದಾಖಲೆಗಳನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಿ ತೀರ್ಮಾನ ಪ್ರಕಟಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಉಪನಿರ್ದೇಶಕರಿಗೆ ಅವಕಾಶ ನೀಡಲಾಗಿದೆ. ಎ. 24ರಂದು ವಲಯ ವರ್ಗಾವಣೆಗೆ ಅರ್ಹರಿರುವ ಶಿಕ್ಷಕರ ಆದ್ಯತೆಯ ಕರಡು ಪಟ್ಟಿ ಪ್ರಕಟಿಸುವಂತೆ ಸೂಚಿಸಲಾಗಿದೆ.


logoblog

Thanks for reading To apply for teacher transfer information

Previous
« Prev Post

No comments:

Post a Comment