Tuesday, May 28, 2024

1st Standard Admission age Clarification

  Wisdom News       Tuesday, May 28, 2024

Hedding  ;  1st Standard Admission age Clarification



ರಾಜ್ಯಾದ್ಯಂತ ಮೇ 29ರಿಂದ ಶಾಲೆಗಳು ಆರಂಭವಾಗುತ್ತಿದ್ದು, ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳ ಕುರಿತ ವಾರ್ಷಿಕ ಕ್ರಿಯಾ ಯೋಜನೆಗೆ ಸಂಬಂಧಿಸಿದಂತೆ 2024-25ನೆ ಸಾಲಿನ ಶೈಕ್ಷಣಿಕ ಮಾರ್ಗದರ್ಶಿಯನ್ನು ಶಾಲಾ ಶಿಕ್ಷಣ ಇಲಾಖೆಯು ತನ್ನ ವೆಬ್‍ಸೈಟ್‍ನಲ್ಲಿ ಪ್ರಕಟಿಸಿದೆ.

ಈ ನಡುವೆ ಕೇಂದ್ರವು ಶಾಲೆಗೆ ಸೇರಲು 6 ವರ್ಷ ಕಡ್ಡಾಯವಾಗಿರಬೇಕು ಎಂದು ರಾಜ್ಯಗಳಿಗೆ ನಿರ್ದೇಶನ ನೀಡಿತ್ತು. 


ಇದರ ನಡುವೆಯೂ ಪ್ರಸಕ್ತ ವರ್ಷದ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ಜೂ.1ಕ್ಕೆ ಆರು ವರ್ಷಗಳು ತುಂಬಿರಬೇಕು ಎಂಬ ನಿಯಮವನ್ನು ಸಡಿಲಿಸಿದ್ದು, ತಿದ್ದುಪಡಿಯನ್ನೇ ಮಾರ್ಗಸೂಚಿಯಲ್ಲಿ ಪ್ರಕಟಿಸಲಾಗಿದೆ.

ಒಂದನೇ ತರಗತಿಗೆ ಸೇರುವ ಮಕ್ಕಳಿಗೆ ಜೂನ್‌ 1ಕ್ಕೆ 6 ವರ್ಷ ಪೂರ್ಣಗೊಂಡಿರಬೇಕು ಎಂಬ ನಿಯಮ ರೂಪಿಸಲಾಗಿದೆ. 



ಆದರೆ, ಈ ನಿಯಮ 2024-25ನೇ ಶೈಕ್ಷಣಿಕ ಸಾಲಿಗೆ ಅನ್ವಯಿಸುವುದಿಲ್ಲ. ಮುಂದಿನ ವರ್ಷದಿಂದ ಶಾಲೆಗೆ ಸೇರಿಸುವ ಮಕ್ಕಳಿಗೆ ಈ ನಿಯಮ ಕಡ್ಡಾಯ.

ಶಾಲೆಗೆ ಮಕ್ಕಳನ್ನು ಸೇರಿಸುವಾಗ ಜನನ ಪ್ರಮಾಣಪತ್ರ, ಆಸ್ಪತ್ರೆ ದಾಖಲೆ, ಅಂಗನವಾಡಿ, ಆರೋಗ್ಯ ಸಹಾಯಕಿಯರ ದೃಢೀಕರಣ, ಇಲ್ಲವೇ ಪೋಷಕರು ನೀಡುವ ಸ್ವಯಂ ದೃಢೀಕರಿಸಿದ ಪ್ರಮಾಣ ಪತ್ರ ಸೇರಿದಂತೆ ಯಾವುದಾದರೂ ಒಂದು ದಾಖಲೆ ಸಲ್ಲಿಸಬೇಕು.




logoblog

Thanks for reading 1st Standard Admission age Clarification

Previous
« Prev Post

No comments:

Post a Comment