ಸುದ್ದಿದ್ವಿತೀಯ ಪಿಯುಸಿಯಲ್ಲಿ 90ಕ್ಕಿಂತ ಹೆಚ್ಚು ಅಂಕ ಗಳಿಸಿದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ...
2024ನೇ ಸಾಲಿನ PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಗಳಿಸಿದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಈ ಪುರಸ್ಕಾರ ನೀಡಲಾಗುತ್ತಿದೆ.
ಅರ್ಜಿ ಸಲ್ಲಿಸಲು ಈ ಕ್ರಮ ಅನುಸರಿಸಿ👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇
ಶೇ. 90%ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಮಾತ್ರ Online ನಲ್ಲಿ ಅರ್ಜಿ ಸಲ್ಲಿಸುವುದು.
2. ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ-ತಾಯಿ ಕರ್ನಾಟಕ ರಾಜ್ಯ ಸರ್ಕಾರದ ಖಾಯಂ ನೌಕರರಾಗಿರಬೇಕು ಹಾಗೂ ಸರ್ಕಾರಿ ನೌಕರರ ಸಂಘದ ಸದಸ್ಯರಾಗಿರಬೇಕು.
3. ಸಂಘವು ನಿಗಧಿಪಡಿಸಿರುವ ನಮೂನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ/ ತಾಲ್ಲೂಕು/ಯೋಜನಾ ಶಾಖೆ ಅಧ್ಯಕ್ಷರು ಮತ್ತು ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ದೃಢೀಕರಿಸಿ Online ನಲ್ಲಿ Upload ಮಾಡುವುದು.
4. ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾಸಂಸ್ಥೆಯ ನೌಕರರು ಅರ್ಜಿ ಸಲ್ಲಿಸುವಂತಿಲ್ಲ.
5. ಕೋರಿರುವ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು Upload ಮಾಡದಿದ್ದಲ್ಲಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
6. ಪಿ.ಯು.ಸಿ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-05-2024
ವಿಶೇಷ ಸೂಚನೆ: ಎಸ್.ಎಸ್.ಎಲ್.ಸಿ. ಮತ್ತು ಸಿ.ಬಿ.ಎಸ್.ಸಿ ಫಲಿತಾಂಶ ಪ್ರಕಟಣೆಗೊಂಡ ನಂತರ ವಿದ್ಯಾರ್ಥಿಗಳ ಪೋಷಕರು ಮೇಲಿನ ಲಿಂಕ್ ಮೂಲಕವೇ ಅರ್ಜಿ ಸಲ್ಲಿಸುವುದು ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿ: 31-05-2024 ಆಗಿರುತ್ತದೆ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 90 ಕ್ಕೂ ಅಧಿಕ ಅಂಕ ಪಡೆದ, ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿಲಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ ಅಥವಾ ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ನೌಕರರಾಗಿರಬೇಕು.
ರಾಜ್ಯ ಸರ್ಕಾರಿ ನೌಕರರ ಕೇಂದ್ರ ಸಂಘವು ಪ್ರಸಕ್ತ ಸಾಲಿನ ಎಸ್ಎಸ್ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 90 ಕ್ಕೂ ಅಧಿಕ ಅಂಕ ಪಡೆದ, ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ ಅಥವಾ ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ನೌಕರರಾಗಿರಬೇಕು. ನಿಗಮ ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮಕಗೊಂಡ ನೌಕರರ ಮಕ್ಕಳು ಅರ್ಜಿ ಸಲ್ಲಿಸುವಂತಿಲ್ಲ. ವಿದ್ಯಾರ್ಥಿ ಪ್ರಥಮ ಪ್ರಯತ್ನದಲ್ಲೇ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು
ವಿದ್ಯಾರ್ಥಿಯ ತಂದೆ ಅಥವಾ ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.
ನಿಗಮ, ಮಂಡಳಿ, ಪ್ರಾಧಿಕಾ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ.
ಅರ್ಜಿ ಸಲ್ಲಿಸಲು ಅರ್ಹ ವಿದ್ಯಾರ್ಥಿಯು, 2022ರ ಎಸ್‌ಎಸ್‌ಎಲ್‌ಸಿ/ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ಎಸ್‌ಎಸ್‌ಎಲ್‌ಸಿ/ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾದ ದೃಢೀಕೃತ ಅಂಕಪಟ್ಟಿ.
ವಿದ್ಯಾರ್ಥಿಯ ಪಾಸ್‌ಪೋರ್ಟ್ ಅಳತೆಯ ಫೋಟೋ.
ಇಲಾಖೆಯ ಸೇವಾ ದೃಢೀಕರಣ ಪತ್ರ.
ಸಂಘದ ಜಿಲ್ಲಾ/ತಾಲೂಕು/ಯೋಜನಾ ಶಾಖೆ ಅಧ್ಯಕ್ಷರು/ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ಪಡೆದ ದೃಢೀಕರಣ ಪತ್ರ.
ಈ ಮೇಲಿನ ಎಲ್ಲ ದಾಖಲೆಗಳನ್ನು ಜೆಪಿಜಿ ಫಾರ್ಮೆಟ್ ನಲ್ಲಿ 1MB ಮೀರದಂತೆ ಅಪ್‌ಲೋಡ್ ಮಾಡಬೇಕು.
ಅರ್ಜಿ ಸಲ್ಲಿಕೆಯಾದ ಮೇಲೆ ನೋಂದಾಯಿತ ಇ ಮೇಲ್‌ಗೆ ಸೀಕೃತಿ ಬರುತ್ತದೆ.
ಶೇಕಡವಾರು ಅಂಕಗಳನ್ನು ನಿರ್ಧರಿಸಿ ಅರ್ಜಿಯನ್ನು ಪರಿಗಣಿಸಲಾಗುತ್ತದೆ.
ಈ ಎಲ್ಲ ದಾಖಲೆಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಲು ಮಾತ್ರ ಅವಕಾಶವಿದೆ
No comments:
Post a Comment