Saturday, May 4, 2024

CLT Exam Important Updates

  Wisdom News       Saturday, May 4, 2024
Hedding ; CLT Exam Important Updates...


ಕರ್ನಾಟಕ ನಾಗರೀಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ರಲ್ಲಿನ ತಿದ್ದುಪಡಿ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶವೊಂದನ್ನು ಪ್ರಕಟಿಸಿದೆ.

ವಿಷಯ ಹಾಗೂ ಉಲ್ಲೇಖ 01 ರಂತೆ ಕರ್ನಾಟಕ ನಾಗರೀಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ರಲ್ಲಿನ ಆದೇಶದಂತೆ ಕಾಲಕಾಲಕ್ಕೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯ ಉತ್ತೀರ್ಣತೆಯ ದಿನಾಂಕವನ್ನು ವಿಸ್ತರಿಸಲಾಗುತ್ತಿದೆ.

ಆದರಂತೆ ಉಲ್ಲೇಖ 02 ರ ಆದೇಶದಲ್ಲಿ "ದಿನಾಂಕ: 31/12/2023 ರೊಳಗೆ" ಎಂಬ ಪದ ಮತ್ತು ಅಂಕಿಗಳ ಬದಲಿಗೆ "ದಿನಾಂಕ: 31.12.2024 ರೊಳಗೆ" ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ: 01.01.2024 ರಿಂದ ಜಾರಿಗೆ ಬಂದಿದೆ ಎಂಬ ತಿದ್ದುಪಡಿ ಸರ್ಕಾರಿ ಆದೇಶದನ್ವಯ ನಿಯಮಾನುಸಾರ ಅಗತ್ಯ ಕ್ರಮ ವಹಿಸುವಂತೆ ಮಂಜೂರಾತಿ ಪ್ರಾಧಿಕಾರಿಗಳಿಗೆ ಸೂಚಿಸಿದೆ.

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ : ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ...
👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇

ಕರ್ನಾಟಕ ಸರ್ಕಾರಿ ನೌಕರರ ಬೇಡಿಕೆಯಂತೆ ರಾಜ್ಯ ಸರ್ಕಾರ ಸರ್ಕಾರಿ ನೌಕರರು ದಿನಾಂಕ 31/12/2024ರೊಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೆಗೆದುಕೊಳ್ಳುವುದು, ಉತ್ತೀರ್ಣರಾಗಲು ಅವಕಾಶವನ್ನು ನೀಡಿದೆ.

ಈಗ ವಿಜಯ ಈ ರವಿಕುಮಾರ್, ಜಂಟಿ ನಿರ್ದೇಶಕರು (ಆಡಳಿತ) ಜ್ಞಾಪನಾ ಪತ್ರವೊಂದನ್ನು ಹೊರಡಿಸಿದ್ದಾರೆ. ಈ ಪತ್ರ ಕರ್ನಾಟಕ ನಾಗರೀಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ರಲ್ಲಿನ ತಿದ್ದುಪಡಿ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

ಪತ್ರದ ವಿವರ: ಪತ್ರದಲ್ಲಿ ವಿಷಯ ಹಾಗೂ ಉಲ್ಲೇಖದಂತೆ ಕರ್ನಾಟಕ ನಾಗರೀಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ರಲ್ಲಿನ ಆದೇಶದಂತೆ ಕಾಲಕಾಲಕ್ಕೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯ ಉತ್ತೀರ್ಣತೆಯ ದಿನಾಂಕವನ್ನು ವಿಸ್ತರಿಸಲಾಗುತ್ತಿದೆ ಎಂದು ತಿಳಿಸಲಾಗಿದೆ.

ಆದರಂತೆ ದಿನಾಂಕ 31/12/2023 ರೊಳಗೆ ಎಂಬ ಪದ ಮತ್ತು ಅಂಕಿಗಳ ಬದಲಿಗೆ ದಿನಾಂಕ 31/12/2024 ರೊಳಗೆ ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ 01/01/2024ರಿಂದ ಜಾರಿಗೆ ಬಂದಿದೆ ಎಂಬ ತಿದ್ದುಪಡಿ ಸರ್ಕಾರಿ ಆದೇಶದನ್ವಯ ನಿಯಮಾನುಸಾರ ಅಗತ್ಯ ಕ್ರಮ ವಹಿಸುವಂತೆ ಮಂಜೂರಾತಿ ಪ್ರಾಧಿಕಾರಿಗಳಿಗೆ ಸೂಚಿಸಿದೆ ಎಂದು ಹೇಳಿದ್ದಾರೆ.

ಕಾರ್ಯದರ್ಶಿಗಳ ಭೇಟಿ: ಕೆಲವು ದಿನಗಳ ಹಿಂದೆ ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ನೇತೃತ್ವದ ನಿಯೋಗ ಉಜ್ವಲ್ ಕುಮಾರ್ ಘೋಷ್, ಕಾರ್ಯದರ್ಶಿಗಳು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಇ-ಆಡಳಿತ ಇವರನ್ನು ಭೇಟಿ ಮಾಡಿತ್ತು.

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಡಿಸೆಂಬರ್ 2024ರ ವರೆಗೂ ಸರ್ಕಾರವು ಅವಧಿ ವಿಸ್ತರಿಸಿದ್ದು, ಕೂಡಲೇ ಪರೀಕ್ಷೆ ಸ್ಲಾಟ್ ಗಳನ್ನು ಆರಂಭಿಸುವಂತೆ ಕೋರಿದ್ದರು. ಈ ಮನವಿಗೆ ಕಾರ್ಯದರ್ಶಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಶೀಘ್ರವಾಗಿ ಸ್ಲಾಟ್‌ಗಳನ್ನು ಪ್ರಾರಂಭಿಸುವುದಾಗಿ ತಿಳಿಸಿದ್ದರು. ಪ್ರಸ್ತುತ ಆಡಳಿತಕ್ಕೆ ಅನುಕೂಲವಾಗುವಂತೆ ಸಿಲಬಸ್ ಕೂಡ ಬದಲಾವಣೆ ಮಾಡುವುದಾಗಿ ತಿಳಿಸಿದ್ದರು.


ಕರ್ನಾಟಕ ಸರ್ಕಾರ ಈಗಾಗಲೇ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಉತ್ತೀರ್ಣಗೊಳ್ಳುವ ನಿಯಮಗಳನ್ನು ಬದಲಾವಣೆ ಮಾಡಿದೆ. ಪರಿಷ್ಕೃತಗೊಳಿಸಿ ರಾಜ್ಯಪತ್ರದಲ್ಲಿ ಪ್ರಕಟಿಸಿದಂತೆ ಇದನ್ನು ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) (ತಿದ್ದುಪಡಿ) ನಿಯಮಗಳು, 2024 ಎಂದು ಕರೆಯಲಾಗುತ್ತದೆ.

ನಿಯಮ 2ಕ್ಕೆ ತಿದ್ದುಪಡಿ ತರಲಾಗಿದೆ. ಅದರಂತೆ ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ರ (ಇದರಲ್ಲಿ ಇನ್ನು ಮುಂದೆ ಸದರಿ ನಿಯಮಗಳೆಂದು ಉಲ್ಲೇಖಿಸಲಾಗಿದೆ) ಎಂಬ ಪದ ಮತ್ತು ಅಂಕಿಗಳ ಬದಲಿಗೆ ನಿಯಮ 2ರಲ್ಲಿ ದಿನಾಂಕ 31/12/2023 ರೊಳಗೆ ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ 31/12/2024 ರೊಳಗೆ ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ 01/01/2024ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು ಎಂದು ರಾಜ್ಯಪತ್ರದಲ್ಲಿ ತಿಳಿಸಲಾಗಿದೆ.

ನೌಕರರು ದಿನಾಂಕ 31/12/2023ರೊಳಗೆ, ಎಂಬ ಪದ ಮತ್ತು ಅಂಕಿಗಳ ಬದಲಿಗೆ ದಿನಾಂಕ 31/12/2024ರೊಳಗೆ ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ 01/01/2024ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು ಮತ್ತು ಉಪ ನಿಯಮ (2)ರಲ್ಲಿ ದಿನಾಂಕ 31/12/2023ರೊಳಗೆ ಎಂಬ ಪದ ಮತ್ತು ಅಂಕಿಗಳ ಬದಲಿಗೆ ದಿನಾಂಕ 31/12/2024ರೊಳಗೆ, ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ 01/01/2024ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು ಎಂದು ಆದೇಶ ಹೇಳಿದೆ. ಇದರಂತೆ ನೌಕರರು 31/12/2024ರೊಳಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು.

ಕರ್ನಾಟಕ ಸರ್ಕಾರ ಎಲ್ಲಾ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಕಡ್ಡಾಯಗೊಳಿಸಿದೆ. ಆದ್ದರಿಂದ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಂಡು, ಉತ್ತೀರ್ಣರಾಗಬೇಕು. ಹೊಸದಾಗಿ ಸರ್ಕಾರಿ ಕೆಲಸಕ್ಕೆ ಸೇರಿದ ನೌಕರ/ ಸಿಬ್ಬಂದಿಗಳು ಸಹ ತಮ್ಮ ಪರಿವೀಕ್ಷಣಾ ಅವಧಿಯೊಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯ. ಉತ್ತೀರ್ಣರಾಗದವರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರು ಎಂದು ಸರ್ಕಾರಿ ಆದೇಶ ಹೇಳಿದೆ.



logoblog

Thanks for reading CLT Exam Important Updates

Previous
« Prev Post

No comments:

Post a Comment