ಕರ್ನಾಟಕ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟವು ಕಾಮೆಡ್-ಕೆ ಯುಜಿಇಟಿ ಫಲಿತಾಂಶ 2024 ಅನ್ನು ಇಂದು (ಮೇ 24, ಶುಕ್ರವಾರ) ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗಿದೆ. ಪ್ರವೇಶ ಪರೀಕ್ಷೆಗೆ ಹಾಜರಾಗಿದ್ದ ಎಲ್ಲಾ ಅಭ್ಯರ್ಥಿಗಳು ತಮ್ಮ ರ‍್ಯಾಂಕ್ ಅನ್ನು ತಿಳಿಯಲು ಒಕ್ಕೂಟದ ಅಧಿಕೃತ ವೆಬ್‌ಸೈಟ್ https://comedk.org/ ಭೇಟಿ ನೀಡಿ ಪರಿಶೀಲಿಸಬಹುದು.
ರ‍್ಯಾಂಕ್ ಕಾರ್ಡ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಲು, ಅಭ್ಯರ್ಥಿಗಳಿಗೆ ತಮ್ಮ ನೋಂದಣಿ ಸಂಖ್ಯೆ ಹಾಗೂ ಇತರ ವಿವರಗಳು ಒದಗಿಸಬೇಕು. ಪ್ರವೇಶ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶಗಳನ್ನು ಪರಿಶೀಲಿಸಬಹುದು.
COMEDK UGET RESULT 2024 ವೀಕ್ಷಿಸಲು ಈ ವಿಧಾನವನ್ನು ಅನುಸರಿಸಿ.
https://comedk.org/ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
ಕಾಮೆಟ್-ಕೆ ವೆಬ್‌ಸೈಟ್ ಮುಖಪುಟ ತೆರೆದುಕೊಳ್ಳುತ್ತದೆ.
ಕಾಮೆಡ್ಕೆ ಯುಜಿಇಟಿ 2024 ರ ಫಲಿತಾಂಶವನ್ನು ಪರಿಶೀಲಿಸಲು ಲಿಂಕ್ ಅನ್ನು ಹುಡುಕಿ ಮತ್ತು ಅದರ ಮೇಲೆ ಕ್ಲಿಕ್ ಮಾಡಿ.
ಅಗತ್ಯವಿರುವ ಲಾಗಿನ್ ವಿವರಗಳನ್ನು ಫೀಡ್ ಮಾಡಿದ ಬಳಿಕ ಸಲ್ಲಿಸಿ
ಫಲಿತಾಂಶ ಪುಟವು ಪರದೆಯ ಮೇಲೆ ಕಾಣಿಸಿಕೊಳ್ಳುತ್ತದೆ.
ಫಲಿತಾಂಶವನ್ನು ಪರಿಶೀಲಿಸಿ ಮತ್ತು ಪುಟವನ್ನು ಡೌನ್‌ಲೋಡ್ ಮಾಡಿ.
ಹೆಚ್ಚಿನ ಅಗತ್ಯಕ್ಕಾಗಿ ಅದರ ಫಲಿತಾಂಶದ ಹಾರ್ಡ್ ಕಾಪಿಯನ್ನು ಇರಿಸಿಕೊಳ್ಳಿ
ಕಾಮೆಡ್-ಕೆ ಯುಜಿಇಟಿ ಪರೀಕ್ಷೆಯನ್ನು 2024 ಮೇ 12 ರಂದು ರಾಜ್ಯಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಮೊದಲ ಶಿಫ್ಟ್ ಬೆಳಗ್ಗೆ 8.30 ರಿಂದ 11.30 ರವರೆಗೆ, ಎರಡನೇ ಶಿಫ್ಟ್ ಮಧ್ಯಾಹ್ನ 1 ರಿಂದ 4 ರವರೆಗೆ ಮತ್ತು ಮೂರನೇ ಶಿಫ್ಟ್ ಸಂಜೆ 5.30 ರಿಂದ ರಾತ್ರಿ 8.30 ರವರೆಗೆ ಪರೀಕ್ಷೆ ನಡೆಯಿತು.
ಕೌನ್ಸೆಲಿಂಗ್ ಪ್ರಕ್ರಿಯೆಯು ಇಂದು (ಮೇ 24, ಶುಕ್ರವಾರ) ಸಂಜೆ 4 ಗಂಟೆಗೆ ಪ್ರಾರಂಭವಾಗಲಿದೆ. ಅಭ್ಯರ್ಥಿಗಳು ಇಂದಿನಿಂದ ಅಧಿಕೃತ ವೆಬ್‌ಸೈಟ್‌ನಲ್ಲಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಲು ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಾಮೆಡ್-ಕೆ ಅಧಿಕೃತ ವೆಬ್‌ಸೈಟ್ ಅನ್ನು ಪರಿಶೀಲಿಸಬಹುದು.

No comments:
Post a Comment