ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ವಿದ್ಯುತ್ ನಿಗಮದ 622 ಹುದ್ದೆಗಳ ನೇಮಕಾತಿಯ ತಾತ್ಕಾಲಿಕ ಅಂಕಪಟ್ಟಿ ಅಂಕಪಟ್ಟಿಯನ್ನು ಪ್ರಕಟಿಸಲಾಗಿದೆ.
ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾಹಿತಿ ಬಿಡುಗಡೆ ಮಾಡಿದ್ದು, ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಖಾಲಿ ಇರುವ ಎಇ, ಜೆಇ (ವಿವಿಧ ವಿಭಾಗಗಳಲ್ಲಿನ), ಕೆಮಿಸ್ಟ್ ಮತ್ತು ಕೆಮಿಕಲ್ ಸೂಪರ್‌ವೈಸರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರಾಧಿಕಾರದಿಂದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎರಡು ಅವಧಿಗಳಲ್ಲಿ ದಿನಾಂಕ 18-02-2024 ರಂದು ನಡೆಸಲಾಗಿದೆ ಎಂದಿದೆ.
ಸದರಿ ಪರೀಕ್ಷೆಯ ಅಂತಿಮ ಉತ್ತರಗಳನ್ನು 17-04-2024 ರಂದು ಪ್ರಕಟಿಸಲಾಗಿದೆ. ಪ್ರಸ್ತುತ ಹುದ್ದೆವಾರು ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಾಧಿಕಾದ http://kea.kar.nic.in ವೆಬ್‌ಸೈಟಿನಲ್ಲಿ ದಿನಾಂಕ 08-05-2024 ರಂದು ಪ್ರಕಟಿಸಲಾಗಿದೆ. ಕಳೆದ ಬಾರಿ ನಡೆಸಿದ ಪರೀಕ್ಷೆಯಲ್ಲಿ ಕೆಪಿಸಿಎಲ್ ಸಂಸ್ಥೆಯು ಸೂಚಿಸಿರುವಂತೆ, ಪ್ರತಿ ತಪ್ಪು ಉತ್ತರಕ್ಕೆ 1/3 ರಷ್ಟು ನಕಾರಾತ್ಮಕ ಅಂಕವನ್ನು ಕಡಿತಗೊಳಿಸಲಾಗಿದೆ ಎಂದಿದೆ.
ಪ್ರಚುರಪಡಿಸಿರುವ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 15-05-2024 ರೊಳಗೆ ಇ-ಮೇಲ್ ವಿಳಾಸ kea2023exam@gmail.com ಗೆ ಸಲ್ಲಿಸಬಹುದಾಗಿದೆ ಎಂದು ತಿಳಿಸಿದೆ.
No comments:
Post a Comment