Sunday, May 26, 2024

Schools to resume from May 29 across the state: Here is the new ``schedule'' of primary, high schools...

  Wisdom News       Sunday, May 26, 2024
Hedding ; Schools to resume from May 29 across the state: Here is the new ``schedule'' of primary, high schools...


ರಾಜ್ಯಾದ್ಯಂತ ಮೇ. 29 ರಿಂದ ಶಾಲೆಗಳು ಪುನರಾರಂಭ : ಇಲ್ಲಿದೆ 2024-25ನೇ ಸಾಲಿನ ‘ಶೈಕ್ಷಣಿಕ ವೇಳಾಪಟ್ಟಿ’


ಮೇ. 29 ರಿಂದ 2024-25 ಸಾಲಿನ ಶಾಲೆಗಳು ಪ್ರಾರಂಭವಾಗಲಿದ್ದು, ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಪ್ರೌಢ ಶಾಲೆಗಳಿಗೆ 2024-25ನೇ ಸಾಲಿನ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ಕ್ರಿಯಾ ಯೋಜನೆ / ಮಾರ್ಗಸೂಚಿಯನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.

ಮೇ. 29 ರಿಂದ 2024-25 ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗುವುದರಿಂದ ರಾಜ್ಯಾದ್ಯಂತ ಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಏಕರೂಪದ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ಕ್ರಿಯಾಯೋಜನೆ/ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ.

ಸದರಿ ಮಾರ್ಗಸೂಚಿಯಲ್ಲಿ ವಾರ್ಷಿಕ/ಮಾಹೆವಾರು ಪಾಠ ಹಂಚಿಕೆ, ಪಠ್ಯತರ ಚಟುವಟಿಕೆಗಳು, ಗುಣಮಟ್ಟದ ಶಿಕ್ಷಣಕ್ಕಾಗಿ ಫಲಿತಾಂಶಮುಖಿ ಚಟುವಟಿಕೆಗಳು, ಸಂಭ್ರಮ ಶನಿವಾರ (ನೋ ಬ್ಯಾಗ್ ಡೇ) ಆಯೋಜನೆಗೆ ಪೂರಕವಾದ ಪಠ್ಯಾಧಾರಿತ ಚಟುವಟಿಕೆ ಬ್ಯಾಂಕ್ ನಿರ್ವಹಣೆ ಹಾಗೂ ವಿವಿಧ ಶಾಲಾ ಹಂತದ CCE (ಪರೀಕ್ಷೆಗಳು/ ಮೌಲ್ಯಂಕನ,ವಿಶ್ಲೇಷಣೆ) ಚಟುವಟಿಕೆಗಳನ್ನು ನಿರ್ವಹಿಸಲು ಸಹಾಯವಾಗುವಂತೆ ಯೋಜಿಸಿ, ಸಿದ್ಧಪಡಿಸಲಾಗಿದೆ.




ಪ್ರಸಕ್ತ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ ದಿನಾಂಕ: 29.05.2024 ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ. 


ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ. ಪ್ರಯುಕ್ತ ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, 



ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ಈ ಕೆಳಕಂಡಂತೆ ನಿಗದಿಪಡಿಸಲಾಗಿದ್ದು, ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾಲನೆ ಮಾಡಲು ಸೂಚಿಸಿದೆ.

 ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲ ಶಾಲೆಗಳಲ್ಲಿ ಮೇ 29ರಿಂದ ತರಗತಿಗಳು ಆರಂಭವಾಗಲಿದೆ ಎಂದು ಶಿಕ್ಷಣ ಇಲಾಖೆಯು ಮಾಹಿತಿ ನೀಡಿದೆ.

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅನ್ವಯವಾಗುವಂತಹ 2024-2025 ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದೆ.

ಈ ವೇಳಾಪಟ್ಟಿಯ ಪ್ರಕಾರ ಮೊದಲನೇ ಅವಧಿಯ ತರಗತಿಗಳು 2024ರ ಮೇ 29 ರಿಂದ ಅ.2ರವರೆಗೆ, ಎರಡನೇ ಅವಧಿಯ ತರಗತಿಗಳು ಅ.21ರಿಂದ 2025ರ ಎ.10 ರವರೆಗೆ ನಡೆಯಲಿವೆ. ಇದರ ನಡುವೆ, ಅ.3 ರಿಂದ 20ರವರೆಗೆ ದಸರಾ ರಜೆ, 2025ರ ಎ.11 ರಿಂದ ಮೇ 28ರವರೆಗೆ ಬೇಸಿಗೆ ರಜೆಯನ್ನು ನೀಡಲಾಗುತ್ತದೆ.

244 ಶಾಲಾ ಕರ್ತವ್ಯದ ದಿನಗಳು ಇರಲಿದ್ದು, ಇದರಲ್ಲಿ ಪರೀಕ್ಷೆ ಮೌಲ್ಯಾಂಕನ ಕಾರ್ಯಕ್ಕೆ 26 ದಿನಗಳು, ಪಠ್ಯೇತರ ಚಟುವಟಿಕೆಗೆ 24 ದಿನಗಳು, ಮೌಲ್ಯಮಾಪನ, ಫಲಿತಾಂಶ ವಿಶ್ಲೇಷಣೆಗೆ 10 ದಿನ, ಶಾಲಾ ಸ್ಥಳೀಯ ರಜೆ 4 ದಿನ, ಬೋಧನಾ ಕಲಿಕೆಗೆ 180 ದಿನಗಳು ಎಂದು ವಿಂಗಡಿಸಲಾಗಿದೆ.

ಈ ವಾರ್ಷಿಕ ಮಾರ್ಗಸೂಚಿಯಲ್ಲಿ ಮಾಸಿಕ ಪಾಠ ಹಂಚಿಕೆ, ಪತ್ಯೇತರ ಚಟುವಟಿಕೆ, ಗುಣಮಟ್ಟದ ಶಿಕ್ಷಣಕ್ಕಾಗಿ ಫಲಿತಾಂಶಮುಖಿ ಚಟುವಟಿಕೆ, ಸಂಭ್ರಮ ಶನಿವಾರ ಸೇರಿ ಇತರ ಯೋಜನೆಗಳನ್ನು ನಿರ್ವಹಿಸುವಂತೆ ಶಾಲಾ ಶಿಕ್ಷಣ ಆಯುಕ್ತರು ಸೂಚನೆ ನೀಡಿದ್ದಾರೆ.

logoblog

Thanks for reading Schools to resume from May 29 across the state: Here is the new ``schedule'' of primary, high schools...

Previous
« Prev Post

No comments:

Post a Comment