ರಾಜ್ಯ ಸರ್ಕಾರದಿಂದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸಿವಿಲ್ ಪೊಲೀಸ್ ಇನ್ಸ್ ಪೆಕ್ಟರ್ ಆಗಿದ್ದಂತ 261 ಮಂದಿಯನ್ನು ವರ್ಗಾವಣೆ ಮಾಡಲಾಗಿತ್ತು. ಇಂತಹ 261 ಮಂದಿಯನ್ನು ಚುನಾವಣೆ ಪೂರ್ವ ಸ್ಥಳಕ್ಕೆ ವರ್ಗಾವಣೆ ಮಾಡಿ ಆದೇಶಿಸಿದೆ.
ಈ ಕುರಿತಂತೆ ಡೈರೆಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸರ ಪರವಾಗಿ ಐಪಿಎಸ್ ಅಧಿಕಾರಿ ಸೌಮೇಂದು ಮುಖರ್ಜಿ ಅವರು ಆದೇಶ ಹೊರಡಿಸಿದ್ದಾರೆ.
ಅದರಲ್ಲಿ ಈ ಕೆಳಕಂಡ ಪೊಲೀಸ್ ಇನ್ಸ್ ಪೆಕ್ಟರ್ (ಸಿವಿಲ್) ಅವರುಗಳನ್ನು ಲೋಕಸಭಾ ಚುನಾವಣೆ ನಿಮಿತ್ತ ಚುನಾವಣಾ ಮಾರ್ಗಸೂಚಿಯ ಅನ್ವಯ ವಿವಿಧ ದಿನಾಂಕಗಳಂದು ವರ್ಗಾವಣೆಗೊಳಿಸಿ ಆದೇಶಿಸಲಾಗಿತ್ತು ಎಂದಿದ್ದಾರೆ.
ಪ್ರಸ್ತುತ ಲೋಕಸಭಾ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡಿರುವುದರಿಂದ ಅವರುಗಳನ್ನು ಅವರುಗಳ ಹೆಸರಿನ ಮುಂದೆ ನಮೂದಿಸಿರುವಂತ ಚುನಾವಣಾ ವರ್ಗಾವಣೆಯ ಪೂರ್ವ ಸ್ಥಳಗಳಿಗೆ ಪುನರ್ ನಿಯುಕ್ತಿಗೊಳಿಸಿ ಆದೇಶಲಾಗಿದೆ ಅಂತ ತಿಳಿಸಿದ್ದಾರೆ.

No comments:
Post a Comment