Tuesday, June 11, 2024

Condition for Government Employees for Old Pension Scheme

  Wisdom News       Tuesday, June 11, 2024
Hedding ; Condition for Government Employees for Old Pension Scheme...


ಹಳೆ ಪಿಂಚಣಿ ಯೋಜನೆಗೆ ಸರ್ಕಾರಿ ನೌಕರರಿಗೆ ಷರತ್ತು...👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇



ಕರ್ನಾಟಕ ಸರ್ಕಾರ ರಾಜ್ಯ

ಸರ್ಕಾರಿ ನೌಕರರ ಬೇಡಿಕೆಯಂತೆ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ ಮರು ಜಾರಿ ಸಂಬಂಧ ಈಗಾಗಲೇ ಆದೇಶ ಹೊರಡಿಸಿದೆ. ಆದರೆ ಇದು ಎಲ್ಲಾ ಸರ್ಕಾರಿ ನೌಕರರಿಗೆ ಅನ್ವಯವಾಗುವುದಿಲ್ಲ.

ಸರ್ಕಾರದ ಆದೇಶ ಅನ್ವಯ 2006, ಏಪ್ರಿಲ್ 1ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲಾಗುತ್ತದೆ. ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆಯಿಂದ ಹಳೆಯ ಪಿಂಚಣಿ ಯೋಜನೆಗೆ ವಾಪಸ್ ಆಗಲು ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸಲು ಜೂ.30 ಕೊನೆಯ ದಿನವಾಗಿದೆ. ಒಂದು ವೇಳೆ ಆಯ್ಕೆಗಾಗಿ ಅರ್ಜಿಯನ್ನು ಸಲ್ಲಿಕೆ ಮಾಡದಿದ್ದಲ್ಲಿ ಪಿಂಚಣಿ ಯೋಜನೆಯಲ್ಲಿಯೇ

ಮುಂದುವರೆಯಲಿದ್ದಾರೆ. ಒಂದು ಬಾರಿ ಮಾತ್ರ ಆಯ್ಕೆಗೆ ಅವಕಾಶ:

ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆಯಿಂದ ಹಳೆಯ ಪಿಂಚಣಿ

ಯೋಜನೆಗೆ ಮರಳಲು ಒಮ್ಮೆ ಮಾತ್ರ ಅವಕಾಶ ಇರುತ್ತದೆ. ನೌಕರರು ಕೊನೆಯ ದಿನಾಂಕದ ತನಕ ಕಾಯದೇ ಬದಲಾವಣೆ ಬಯಸುವುದಾದರೆ ಬೇಗ ಅರ್ಜಿ ಸಲ್ಲಿಕೆ ಮಾಡಿ ಎಂದು ಸೂಚನೆ ನೀಡಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ಒಪಿಎಸ್ ಅನುಷ್ಠಾನ ಹೋರಾಟಗಾರರ ಸಂಘ ಎಲ್ಲಾ ಸರ್ಕಾರಿ ನೌಕರರಿಗೂ ಸಹ ಹೊಸ ಪಿಂಚಣಿ ಯೋಜನೆಯಿಂದ ಹಳೆಯ ಪಿಂಚಣಿ ಯೋಜನೆಗೆ ವಾಪಸ್ ಆಗಲು ಅವಕಾಶ ನೀಡಬೇಕು ಎಂದು ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಆದರೆ ಈ ಕುರಿತು ಇನ್ನೂ ಯಾವುದೇ ತೀರ್ಮಾನವಾಗಿಲ್ಲ. ಆಯ್ಕೆಗನುಸಾರ ಅವರು ಹಿಂದಿನ

ನೌಕರರ ಡಿಫೈನ್ಸ್ ಪಿಂಚಣಿ ಯೋಜನೆಗೊಳಪಡಲು ನಿಗದಿತ ಅರ್ಹತೆ ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ಜುಲೈ 31ರೊಳಗಾಗಿ ಹೊಸ ಅಂತಹ ನೌಕರರನ್ನು ಹಿಂದಿನ ಡಿಫೈನ್ಸ್ ಅವರು ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸ್ಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಡೀಕೃತ ಪ್ರಸ್ತಾವನೆಯನ್ನು ಸಲ್ಲಿಸತಕ್ಕದ್ದು ಎಂದು ಈಗಾಗಲೇ ಹಣಕಾಸು ಇಲಾಖೆ ಹೊರಡಿಸಿದೆ.

2006 ರ ನಂತರ ನೇಮಕವಾದ 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿ...👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇


2006 ಏಪ್ರಿಲ್ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕವಾದ 13,000 ಸರ್ಕಾರಿ ನೌಕರರರಿಗೆ (Government Employees) ಹಳೆ ಪಿಂಚಣಿ ವ್ಯವಸ್ಥೆ (Old Pension Scheme) ಜಾರಿ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

2006 ಏಪ್ರಿಲ್ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006ರ ನಂತರ ನೇಮಕಾತಿಗೊಂಡ 13,000 ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಓಪಿಎಸ್ ಜಾರಿಗೆ ಸರ್ಕಾರ ಷರತ್ತು ವಿಧಿಸಿದ್ದು, ಷರತ್ತಿಗೆ ಒಳಪಟ್ಟಿವರಿಗೆ ಮಾತ್ರ ಓಪಿಎಸ್ ಅನ್ವಯ ಎಂದು ಆದೇಶ ನೀಡಿದೆ.

ಸರ್ಕಾರದ ಷರತ್ತುಗಳೇನು?👇👇👇👇👇👇👇👇👇👇👇👇👇👇👇👇👇
👇👇👇👇👇👇👇👇👇👇👇👇👇


* 01-04-2006 ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಇಚ್ಛಿಸಿದಲ್ಲಿ ತಮ್ಮ ಅಭಿಮತವನ್ನು ನಿಗದಿತ ನಮೂನೆಯಲ್ಲಿ ದಿನಾಂಕ 30.06.2024 ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ನೇರವಾಗಿ ಸಲ್ಲಿಸತಕ್ಕದ್ದು. ಈ ಆಯ್ಕೆಯನ್ನು ಒಂದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ.
* ಒಂದು ಬಾರಿ ಮಾಡಿಕೊಂಡ ಆಯ್ಕೆಯನ್ನು ಬದಲಾಯಿಸಲು ಅವಕಾಶವಿಲ್ಲ.


* ಮೇಲಿನ 1ರಂತೆ ಆಯ್ಕೆಯನ್ನು ಚಲಾಯಿಸಲು ಅರ್ಹ ಸರ್ಕಾರಿ ನೌಕರರು ನಿಗದಿತ ದಿನಾಂಕದೊಳಗೆ ತಮ್ಮ ಆಯ್ಕೆಯನ್ನು ಚಲಾಯಿಸದೇ ಇದ್ದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಮುಂದುವರೆಯುತ್ತಾರೆ.


* ನೌಕರರ ಆಯ್ಕೆಗನುಸಾರ ಅವರು ಹಿಂದಿನ ಪಿಂಚಣಿ ಯೋಜನೆಗೊಳಪಡಲು ನಿಗದಿತ ಅರ್ಹತೆಯನ್ನು ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ದಿನಾಂಕ 31-7-2024ರೊಳಗೆ ಅಂತಹ ನೌಕರರನ್ನು ಹಿಂದಿನ ಡಿಫೈನ್ ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೂಢೀಕೃತ ಪ್ರಸ್ತಾವನೆಯನ್ನು ಸಲ್ಲಿಸತಕ್ಕದ್ದು.



* ಇಲಾಖಾ ಮುಖ್ಯಸ್ಥರು ತಮ್ಮ ಅಧೀನದ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಂದ ಸ್ವೀಕೃತವಾದ ಪ್ರಸ್ತಾವನೆಗಳನ್ನು ಪರಿಶೀಲಿಸಿ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಅರ್ಹ ನೌಕರರ ಪಟ್ಟಿಯನ್ನು ದಿನಾಂಕ 31-8-2024ರೊಳಗೆ ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಸಲ್ಲಿಸತಕ್ಕದ್ದು.


* ದಿನಾಂಕ 01.04.2006ರ ಪೂರ್ವದಲ್ಲಿನ ರಾಜ್ಯ ಸಿವಿಲ್ ಸೇವೆಯಲ್ಲಿನ ಖಾಲಿ ಹುದ್ದೆಗಳಿಗೆ ಹೊರಡಿಸಲಾದ ನೇಮಕಾತಿ ಅಧಿಸೂಚನೆಯನ್ವಯ ಆಯ್ಕೆಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು ತದನಂತರ ಸಮುಚಿತ ಮಾರ್ಗದಲ್ಲಿ ಅರ್ಜಿಯನ್ನು ಸಲ್ಲಿಸಿ ಸರ್ಕಾರದ ಅನ್ನ ಇಲಾಖೆಯಲ್ಲಿನ ಹುದ್ದೆಗೆ ನೇಮಕಾತಿ ಹೊಂದಿದ ಅರ್ಹ ಸರ್ಕಾರಿ ನೌಕರರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆ ಸೌಲಭ್ಯ ಪಡೆದುಕೊಳ್ಳಲು ಇಚ್ಛಿಸಿದಲ್ಲಿ ಮನವಿಯನ್ನು ಹಿಂದಿನ ನೇಮಕಾತಿ ಪ್ರಾಧಿಕಾರಕ್ಕೆ ದಿನಾಂಕ 30-06-2014ರೊಳಗೆ ಸಲ್ಲಿಸತಕ್ಕದ್ದು. 


ನೇಮಕಾತಿ ಪ್ರಾಧಿಕಾರವು ಅಂತಹ ಸರ್ಕಾರಿ ನೌಕರನು ಸಮುಚಿತ ಮಾರ್ಗದಲ್ಲಿ ಅರ್ಜಿ ಸಲ್ಲಿಸಿ ಅದನ್ನ ಇಲಾಖೆಗೆ ಆಯ್ಕೆಯಾದ ಹುದ್ದೆಗೆ ವರದಿಮಾಡಿಕೊಳ್ಳುವ ಸಲುವಾಗಿ ಬಿಡುಗಡೆ ಹೊಂದಿರುವುದನ್ನು ಖಚಿತಪಡಿಸಿಕೊಂಡು ಮೇಲಿನ ಕ್ರಮ ಸಂಖ್ಯೆ (4) ರಂತೆ ಪರಿಶೀಲಿಸಿ ಮೇಲಿನ ಕ್ರಮ ಸಂಖ್ಯೆ (5) ರಂತೆ ಮುಂದಿನ ಕ್ರಮಕ್ಕಾಗಿ ಕಳುಹಿಸತಕ್ಕದ್ದು.


ಹಳೆಯ ಪಿಂಚಣಿ ಯೋಜನೆ ಇತ್ತೀಚಿನ ಸುದ್ದಿ 2024: 👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇

ಭಾರತದ ಸರ್ವೋಚ್ಚ ನ್ಯಾಯಾಲಯವು ಎಲ್ಲಾ ಪಿಂಚಣಿ ಯೋಜನೆಗಳ ಬಗ್ಗೆ ಸರ್ಕಾರದಿಂದ ಸೂಚನೆಯನ್ನು ಕೇಳುತ್ತಿರುವುದರಿಂದ ಕೇಂದ್ರ ಸರ್ಕಾರಿ ನೌಕರರು ಇನ್ನೂ ಎಲ್ಲಾ ಪಿಂಚಣಿ ಯೋಜನೆಗಳನ್ನು ಜಾರಿಗೆ ತರಲು ಪ್ರೇರೇಪಿಸುತ್ತಿದ್ದಾರೆ .


 ಭಾರತದ ಕೆಲವು ರಾಜ್ಯಗಳು ತಮ್ಮ ರಾಜ್ಯ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯ ಪ್ರಕಾರ ಪಿಂಚಣಿ ನೀಡುತ್ತಿವೆ, ಇದು ನೌಕರರಿಗೆ ತುಂಬಾ ಪ್ರಯೋಜನಕಾರಿಯಾಗಿದೆ, ಆದರೆ ಇದು ಸರ್ಕಾರದ ಮೇಲೆ ಆರ್ಥಿಕ ಹೊರೆಯನ್ನು ಹೆಚ್ಚಿಸುತ್ತಿದೆ ಆದ್ದರಿಂದ ಕೇಂದ್ರ ಸರ್ಕಾರವು ಇನ್ನೂ ಹೊಸ ಪಿಂಚಣಿ ಯೋಜನೆಯನ್ನು ಮುಂದುವರೆಸುತ್ತಿದೆ . ನೀವು ಸಹ ಸರ್ಕಾರಿ ಉದ್ಯೋಗಿಯಾಗಿದ್ದರೆ ಮತ್ತು ಹಳೆಯ ಪಿಂಚಣಿ ಯೋಜನೆಯನ್ನು ಮರಳಿ ಪಡೆಯಲು ಬಯಸಿದರೆ ನೀವು ಈ ಲೇಖನವನ್ನು ಓದಬೇಕು, ಅಲ್ಲಿ ನಾವು ಹಳೆಯ ಪಿಂಚಣಿ ಯೋಜನೆಗೆ ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪನ್ನು ಸೇರಿಸಿದ್ದೇವೆ. 


ಹೈಕೋರ್ಟ್ ತೀರ್ಪನ್ನು ಭಾರತದ ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ . ಒಪಿಎಸ್ ಅನ್ನು ಏಕೆ ಮರುಸ್ಥಾಪಿಸಬಾರದು ಎಂಬುದನ್ನು ವಿವರಿಸಲು ನಾಲ್ಕು ವಾರಗಳಲ್ಲಿ ಅರ್ಜಿ ಸಲ್ಲಿಸುವಂತೆ ಭಾರತದ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ಕೇಳಿದೆ. 2024ರ ಫೆಬ್ರುವರಿಯಲ್ಲಿ ಮುಂದಿನ ವಿಚಾರಣೆಗೆ ಎಸ್‌ಸಿಐ ಪಟ್ಟಿ ಮಾಡಿದೆ.


 ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನ ಆದೇಶವನ್ನು ಪಾಲಿಸುವುದಾಗಿ ಮತ್ತು ನಿಗದಿತ ಕಾಲಮಿತಿಯೊಳಗೆ ಅರ್ಜಿ ಸಲ್ಲಿಸುವುದಾಗಿ ಹೇಳಿದೆ. ಅಖಿಲ ಭಾರತ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ (AISGEF) ಎಲ್ಲಾ ಸರ್ಕಾರಿ ನೌಕರರಿಗೆ ಸುಪ್ರೀಂ ಕೋರ್ಟ್ OPS ಅನ್ನು ಮರುಸ್ಥಾಪಿಸುವುದು ಆಶಾದಾಯಕವಾಗಿದೆ ಎಂದು ಸೂಚನೆ ನೀಡಿದೆ. 


ಹಳೆಯ ಪಿಂಚಣಿ ಯೋಜನೆ 2024 ರ ಇತ್ತೀಚಿನ ತೀರ್ಪು
ಹಳೆಯ ಪಿಂಚಣಿ ಯೋಜನೆ 2024 ಅನ್ನು ಮರಳಿ ಪಡೆಯಲು ಅರ್ಜಿದಾರರ ಮನವಿಯನ್ನು ಹೈಕೋರ್ಟ್ ನ್ಯಾಯಮೂರ್ತಿಗಳ ಪೀಠವು ಸ್ವೀಕರಿಸಿದೆ ಮತ್ತು ನ್ಯಾಯಾಧೀಶರು ಸರ್ಕಾರಿ ನೌಕರರಿಗೆ ಪಿಂಚಣಿ ಮಹತ್ವವನ್ನು ವಿವರಿಸಿದ್ದಾರೆ. 

ಅದರ ನಂತರ, ದೆಹಲಿ ಹೈಕೋರ್ಟ್ ಒಂದು ತಿಂಗಳೊಳಗೆ ಹಳೆಯ ಪಿಂಚಣಿ ಯೋಜನೆಯ ಪ್ರಯೋಜನಗಳನ್ನು ಸಾಂಪ್ರದಾಯಿಕವಾಗಿ ಮರುಸ್ಥಾಪಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿತು.

ಈ ತೀರ್ಪಿನ ವಿರುದ್ಧ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಯನ್ನು ಸಲ್ಲಿಸಿದೆ ಮತ್ತು ನ್ಯಾಯಾಲಯವು ಫೆಬ್ರವರಿ 2024 ರವರೆಗೆ ದೆಹಲಿ ಹೈಕೋರ್ಟ್ ತೀರ್ಪಿಗೆ ತಡೆ ನೀಡಿದೆ ಮತ್ತು ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಏಕೆ ನೀಡಬಾರದು ಎಂದು ಸರ್ಕಾರಗಳಿಂದ ಸಂಬಂಧಿತ ಅಂಶಗಳನ್ನು ಕೇಳಿದೆ. ಆದಾಗ್ಯೂ, ಹೊಸ ಪಿಂಚಣಿ ಯೋಜನೆಯನ್ನು ಒದಗಿಸುವ ಮೂಲಕ ರಾಜ್ಯ ಸರ್ಕಾರವು ಸರ್ಕಾರಿ ನೌಕರರು ಮತ್ತು ಉದ್ಯೋಗದಾತರ (ಸರ್ಕಾರ) ನಡುವಿನ ಉದ್ಯೋಗ ಒಪ್ಪಂದವನ್ನು ಉಲ್ಲಂಘಿಸುತ್ತಿದೆ ಎಂದು ದೆಹಲಿ ಹೈಕೋರ್ಟ್ ಒಪ್ಪಿಕೊಂಡಿದೆ. ಹೀಗಾಗಿ 2024ರ ಲೋಕಸಭೆ ಚುನಾವಣೆಗೂ ಮುನ್ನ ಹಳೆಯ ಪಿಂಚಣಿ ಯೋಜನೆಯನ್ನು ಮರಳಿ ಪಡೆಯುವ ಭರವಸೆಯನ್ನು ನೌಕರರು ಹೊಂದಿದ್ದಾರೆ .




ನೌಕರರಿಂದ ಸಂಸದರಿಗೆ ನೋಟಿಸ್ ಜಾರಿ 
ಹಳೆ ಪಿಂಚಣಿ ಯೋಜನೆಗೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ವಿರೋಧಿಸಿ 2023ರ ಅಕ್ಟೋಬರ್ 30ರಿಂದ ನವೆಂಬರ್ 2ರ ನಡುವೆ ಸಂಸದರಿಗೆ ಜಂಟಿ ಹೋರಾಟದ ಸಂಚಾಲನಾ ಸಮಿತಿ ಈಗಾಗಲೇ ನೋಟಿಸ್ ನೀಡಿದೆ . ಅಖಿಲ ಭಾರತ ರಾಜ್ಯ ಸರ್ಕಾರಿ ನೌಕರರು ದೆಹಲಿಯಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಲು ಮೆಗಾ ರ್ಯಾಲಿ ನಡೆಸಿದರು .

ಕೇಂದ್ರ ಸರ್ಕಾರಿ ನೌಕರರು ಮತ್ತು ಎಲ್ಲಾ ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಲು ನೌಕರರು ನಿರಂತರವಾಗಿ ಪ್ರತಿಭಟನೆ ಮತ್ತು ರ್ಯಾಲಿಗಳನ್ನು ನಡೆಸುತ್ತಿದ್ದಾರೆ. ಪಂಜಾಬ್, ರಾಜಸ್ಥಾನ, ಛತ್ತೀಸ್‌ಗಢ, ಜಾರ್ಖಂಡ್ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ಹಲವು ರಾಜ್ಯಗಳು ಈಗಾಗಲೇ ತಮ್ಮ ರಾಜ್ಯ ಉದ್ಯೋಗಿಗಳಿಗೆ ಹಳೆಯ ಪಿಂಚಣಿ ಯೋಜನೆ 2024 ಅನ್ನು ಒದಗಿಸುತ್ತಿವೆ ಎಂದು ನೌಕರರು ಪ್ರತಿಪಾದಿಸುತ್ತಿದ್ದಾರೆ . ಹಾಗಾಗಿ ಕೇಂದ್ರ ಸರ್ಕಾರ ತಮ್ಮೊಂದಿಗೆ ಕೆಲಸ ಮಾಡುತ್ತಿರುವ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಬೇಕು.

ಹಳೆಯ ಪಿಂಚಣಿ ಯೋಜನೆ ಮರುಸ್ಥಾಪನೆ 2024
ಕೇಂದ್ರ ಸರ್ಕಾರವು 2004 ರಲ್ಲಿ ಹೊಸ ಪಿಂಚಣಿ ಯೋಜನೆಗೆ ಅನುಮೋದನೆ ನೀಡಿತು ಮತ್ತು ನಂತರ ಹೊಸ ಪಿಂಚಣಿ ಯೋಜನೆಯಲ್ಲಿನ ನಿಬಂಧನೆಗಳ ಪ್ರಕಾರ ನೌಕರರು ಪಿಂಚಣಿ ಪಡೆಯುತ್ತಿದ್ದಾರೆ . ಹೊಸ ಪಿಂಚಣಿ ಯೋಜನೆ- ಎನ್‌ಪಿಎಸ್ ಕೊಡುಗೆಯನ್ನು ಆಧರಿಸಿರುವುದರಿಂದ ಹಳೆಯ ಪಿಂಚಣಿ ಯೋಜನೆಯ ಲಾಭವನ್ನು ಪಡೆಯುವ ನೌಕರರು ಈ ಯೋಜನೆಯಲ್ಲಿ ನಷ್ಟವನ್ನು ಎದುರಿಸಬೇಕಾಗುತ್ತದೆ. ಹೊಸ ಪಿಂಚಣಿ ಯೋಜನೆ 2024 ರಲ್ಲಿ ನಿವೃತ್ತಿಯ ನಂತರ ನೌಕರರು ಪ್ರತಿ ತಿಂಗಳು ಕೊಡುಗೆ ನೀಡುವ ಮೊತ್ತವನ್ನು ಒದಗಿಸಲಾಗುತ್ತದೆ. ಆದರೆ ನೌಕರರು ಹೊಸ ಪಿಂಚಣಿ ಯೋಜನೆಯನ್ನು ಹಳೆಯ ಪಿಂಚಣಿ ಯೋಜನೆಯೊಂದಿಗೆ ಹೋಲಿಕೆ ಮಾಡಿದರೆ , ಆಪ್‌ಗಳು ಬೆನಿಫಿಟ್ ಪಿಂಚಣಿ ಯೋಜನೆಯ ಆಧಾರದ ಮೇಲೆ ನೌಕರರು ಕಳೆದ ಪ್ರಕಾರ ಉದ್ವಿಗ್ನತೆಯನ್ನು ಪಡೆಯುತ್ತಿದ್ದರು. ನಿವೃತ್ತಿಯ ಸಮಯದಲ್ಲಿ ಸಂಬಳ.


ಕೇಂದ್ರ ಅಥವಾ ರಾಜ್ಯ ಸರ್ಕಾರದೊಂದಿಗೆ ಕೆಲಸ ಮಾಡುವ ನೌಕರರಿಗೆ ಮಾತ್ರ ಒದಗಿಸಲಾಗಿದೆ, ಆದರೆ ಹೊಸ ಪಿಂಚಣಿ ಯೋಜನೆಯು ಎಲ್ಲಾ ಖಾಸಗಿ ಉದ್ಯೋಗಿಗಳನ್ನು ಎನ್‌ಪಿಎಸ್‌ಗೆ ಕೊಡುಗೆ ನೀಡಲು ಆಹ್ವಾನಿಸುತ್ತದೆ ಆದ್ದರಿಂದ ಅವರು ನಿವೃತ್ತಿಯ ನಂತರವೂ ಪಿಂಚಣಿ ಪಡೆಯುತ್ತಾರೆ. ಆದಾಗ್ಯೂ, 2024 ರ ಭಾರತೀಯ ಸಂಸತ್ತಿನ ಚುನಾವಣೆಯ ಮೊದಲು ಹಳೆಯ ಪಿಂಚಣಿ ಯೋಜನೆಯನ್ನು ಪುನಃಸ್ಥಾಪಿಸಲು ಸರ್ಕಾರಿ ನೌಕರರು ಸರ್ಕಾರ ಮತ್ತು ಸುಪ್ರೀಂ ಕೋರ್ಟ್‌ನಿಂದ ಭರವಸೆ ಹೊಂದಿದ್ದಾರೆ .


OPS ವ್ಯಾಪ್ತಿಗೆ ಒಳಪಡಿಸಲು ರಾಜ್ಯ ಸರ್ಕಾರ ಆದೇಶ, ಹಳೇ ಪಿಂಚಣಿಗೆ ಒಳಪಡಲು 6 ಷರತ್ತು👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇


ರಾಜ್ಯದ ಸರಕಾರಿ ನೌಕರರ ‘ಒಪಿಎಸ್‌’ ಬೇಡಿಕೆಯನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈಡೇರಿಸಿದೆ. ಹೊಸ ಪಿಂಚಣಿ(NPS) ಯೋಜನೆಯಿಂದ ಹಳೇ ಪಿಂಚಣಿ (ಒಪಿಎಸ್‌) ಯೋಜನೆಗೆ ರಾಜ್ಯ ಸರ್ಕಾರ ಒಪ್ಪಿ ಆದೇಶ ಹೊರಡಿಸಿದೆ. 2006ರ ಏಪ್ರಿಲ್ಗೆ ಮುನ್ನ ನೇಮಕಗೊಂಡ ಸರ್ಕಾರಿ ನೌಕರರು OPS ವ್ಯಾಪ್ತಿಗೆ ಒಳಪಡಿಸಲು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇದು ಎಲ್ಲಾ ಸರ್ಕಾರಿ ನೌಕರರಿಗೂ ಸಂಬಂಧಪಟ್ಟಿರುವುದಿಲ್ಲ. ಕೇವಲ ಏಪ್ರಿಲ್ 2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆ ಮೂಲಕ ಆಯ್ಕೆ ಹೊಂದಿದವರಿಗೆ ಮಾತ್ರ.


ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಲು ಸರ್ಕಾರ ಒಪ್ಪಿದೆ, ಆದ್ರೆ, ಹಳೆಯ ಪಿಂಚಣಿ ಯೋಜನೆಗೆ ಒಳಪಡಲು ಆರು ಷರತ್ತು ವಿಧಿಸಿದೆ.

ಹಳೆಯ ಪಿಂಚಣಿ ಸೇವೆಗೆ ಒಳಪಡಲು ಸರ್ಕಾರಿ ನೌಕರರು ತಾವೇ ಒಪ್ಪಿಗೆ ಸೂಚಿಸಬೇಕು.
ಏಪ್ರಿಲ್ 2006ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆ ಮೂಲಕ ಆಯ್ಕೆ ಹೊಂದಿದವರಿಗೆ ಮಾತ್ರ ಅವಕಾಶ.
ಹಳೆಯ ಪಿಂಚಣಿ ಸೇವೆಗೆ ಒಳಪಟ್ಟರೆ, ಬದಲಾವಣೆಗೆ ಮತ್ತೆ ಅವಕಾಶವಿಲ್ಲ.
ಹಳೆಯ ಪೆನ್ಷನ್ ಸ್ಕೀಮ್ ಒಳಪಡದೆ ಹೋದರೆ ನೂತನ ರಾಷ್ಟ್ರೀಯ ಪೆನ್ಷನ್ ಸ್ಕೀಮ್ ಗೆ ಮುಂದುವರೆಯುತ್ತಾರೆ.
ಓಲ್ಡ್ ಪೆನ್ಶನ್ ಸ್ಕೀಮ್ ಗೆ ಒಳಪಡಲು ಅರ್ಜಿ ಸಲ್ಲಿಸಲು ಜೂನ್ 30 2024ರ ವರೆಗೆ ಮಾತ್ರ ಅವಕಾಶ.

ಇನ್ನು 2006 ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಿದ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, 2006 ಏಪ್ರಿಲ್‌ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ. ಚುನಾವಣೆಗೂ ಪೂರ್ವದಲ್ಲಿ ಎನ್.ಪಿ.ಎಸ್ ನೌಕರರು ಮುಷ್ಕರು ಮಾಡುವ ವೇಳೆ ಸ್ಥಳಕ್ಕೆ ಭೇಟಿನೀಡಿ ನಾವು ಅಧಿಕಾರಕ್ಕೆ ಬಂದ ನಂತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದೆ, ಕೊಟ್ಟ ಮಾತಿನಂತೆ ಬೇಡಿಕೆ ಈಡೇರಿಸಿ ನುಡಿದಂತೆ ನಡೆದಿದ್ದೇನೆ. ಎಲ್ಲಾ 13,000 ಎನ್.ಪಿ.ಎಸ್ ನೌಕರರ ಕುಟುಂಬಗಳಿಗೆ ನಮ್ಮ ಈ ನಿರ್ಧಾರ ನೆಮ್ಮದಿ ನೀಡಿದೆ ಎಂದು ಭಾವಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.










logoblog

Thanks for reading Condition for Government Employees for Old Pension Scheme

Previous
« Prev Post

No comments:

Post a Comment