Thursday, June 6, 2024

Election Commission of India has lifted the Model Code of Conduct

  Wisdom News       Thursday, June 6, 2024
Hedding ; Election Commission of India has lifted the Model Code of Conduct...


ಲೋಕಸಭೆ ಚುನಾವಣೆ 2024 ಮತ್ತು ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ರಾಜ್ಯಗಳ ರಾಜ್ಯ ವಿಧಾನಸಭೆಗಳಿಗೆ ಸಾರ್ವತ್ರಿಕ ಚುನಾವಣೆಗಳು ಮತ್ತು ಕೆಲವು ಉಪಚುನಾವಣೆಗಳಿಗಾಗಿ ವಿಧಿಸಲಾಗಿದ್ದಂತ ಮಾದರಿ ನೀತಿ ಸಂಹಿತೆಯನ್ನು ತೆಗೆದುಹಾಕಲಾಗಿದೆ ಅಂತ ಚುನಾವಣಾ ಆಯೋಗ ಆದೇಶದಲ್ಲಿ ತಿಳಿಸಿದೆ.

ಇಂದು ಚುನಾವಣಾ ಆಯೋಗದ ಹಿರಿಯ ಪ್ರಧಾನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದ ದಿನಾಂಕದಿಂದ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಜಾರಿಗೆ ತರಲಾಗಿದೆ. ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಇದು ಜಾರಿಯಲ್ಲಿರುತ್ತದೆ ಎಂದು ಹೇಳಲು ನನಗೆ ನಿರ್ದೇಶಿಸಲಾಗಿದೆ ಎಂದಿದ್ದಾರೆ.

ಈಗ, ಲೋಕಸಭೆ ಚುನಾವಣೆ 2024 ಮತ್ತು ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ರಾಜ್ಯಗಳ ರಾಜ್ಯ ವಿಧಾನಸಭೆಗಳು ಮತ್ತು ಕೆಲವು ಉಪಚುನಾವಣೆಗಳಿಗೆ ಸಂಬಂಧಿಸಿದ ಫಲಿತಾಂಶಗಳನ್ನು ಆಯಾ ಚುನಾವಣಾಧಿಕಾರಿಗಳು ಘೋಷಿಸಿರುವುದರಿಂದ, ಕರ್ನಾಟಕದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳನ್ನು ಹೊರತುಪಡಿಸಿ ಮಾದರಿ ನೀತಿ ಸಂಹಿತೆ ತಕ್ಷಣದಿಂದ ಜಾರಿಗೆ ಬರುವುದನ್ನು ನಿಲ್ಲಿಸಿದೆ ಎಂದು ತಿಳಿಸಿದ್ದಾರೆ.

ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ / ಉಪಚುನಾವಣೆಗಳ ಕಾರಣ ಮಾದರಿ ನೀತಿ ಸಂಹಿತೆ ಮಹಾರಾಷ್ಟ್ರ ಮತ್ತು ತೆಲಂಗಾಣದಲ್ಲಿ ಜಾರಿಯಲ್ಲಿರಲಿದೆ ಎಂದಿದ್ದಾರೆ.

logoblog

Thanks for reading Election Commission of India has lifted the Model Code of Conduct

Previous
« Prev Post

No comments:

Post a Comment