Thursday, July 4, 2024

Karnataka Government Employees KGID Bonus

  Wisdom News       Thursday, July 4, 2024
Hedding ; Karnataka Government Employees KGID Bonus 2024...

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಎನ್ನುವಂತೆ ಇಂದು ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯು ಸರ್ಕಾರಿ ನೌಕರರಿಗೆ 2018ರಿಂದ 2020ರ ಅವಧಿಯವರೆಗೆ ಬಾಕಿ ಇದ್ದಂತ 2 ವರ್ಷಗಳ ಕೆಜಿಐಡಿ ಬೋನಸ್ ನೀಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಕೆ.ಜಿ.ಐ.ಡಿ ವಿಮಾ ಯೋಜನೆಯ ಕಡ್ಡಾಯ ವಿಮಾದಾರರಿಗೆ 2018-20 ದ್ವೈವಾರ್ಷಿಕ ಅವಧಿಗೆ ಅಧಿಲಾಭಾಂಶ (Bonus) ಘೋಷಣೆ ಮಾಡಲು ಪ್ರಸ್ತಾಪಿಸಲಾಗಿದ್ದು, ದಿನಾಂಕ: 01.04.2018 ರಿಂದ 31.03.2020ರ ದ್ವೈವಾರ್ಷಿಕ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಎಲ್ಲಾ ಪಾಲಿಸಿಗಳಿಗೆ ವಿಮಾ ಮೊತ್ತದ ಮೇಲೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.80/- ರಂತೆ ಲಾಭಾಂಶ (ಬೋನಸ್) ಘೋಷಿಸಲು; ಮತ್ತು ಅವಧಿ ಪೂರ್ಣ, ಮರಣಜನ್ಯ ಹಾಗೂ ವಿಮಾ ತ್ಯಾಗ ಮೌಲ್ಯಗಳಿಂದ ದಿನಾಂಕ: 01.04.2020 ರಿಂದ 31.03.2022 ರ ಅವಧಿಯಲ್ಲಿ ಹೊರ ಹೋಗಿರುವ ವಿಮಾ ಪಾಲಿಸಿಗಳಿಗೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.80/- ರಂತೆ ಮಧ್ಯಂತರ ಲಾಭಾಂಶವನ್ನು (ಇಂಟರೀಮ್ ಬೋನಸ್) ಘೋಷಿಸಲು ಸಚಿವ ಸಂಪುಟ ನಿರ್ಣಯಿಸಿತು.

ಇಂದಿನ ಸಚಿವ ಸಂಪುಟ ನಿರ್ಣಯದಂತೆ ರಾಜ್ಯ ಸರ್ಕಾರಿ ನೌಕರರಿಗೆ ಕೆಜಿಡಿಐ ಬೋನಸ್ ನೀಡಲು ಶೀಘ್ರದಲ್ಲೇ ಅಧಿಕೃತ ಆದೇಶವನ್ನು ಸರ್ಕಾರ ಹೊರಡಿಸಲಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ಸಿಗಲಿದೆ.

ಇನ್ನೂ 5ನೇ ರಾಜ್ಯ ಹಣಕಾಸು ಆಯೋಗದ ಅವಧಿಯನ್ನು ದಿನಾಂಕ: 28.02.2025 ರವರೆಗೆ ವಿಸ್ತರಿಸುವ ಸಂಬಂಧ ಆಯೋಗದ ಅವಧಿಯನ್ನು 28ನೇ ಫೆಬ್ರವರಿ 2025 ರವರೆಗೆ ವಿಸ್ತರಿಸುವ ಬಗ್ಗೆ ಹಾಗೂ ಡಿಸೆಂಬರ್ 2024ರ ಒಳಗೆ ಆಯೋಗವು ತನ್ನ ವರದಿಯನ್ನು ಸಲ್ಲಿಸುವಂತೆ ತಿಳಿಸುವ ಬಗ್ಗೆ ಸಚಿವ ಸಂಪುಟದ ಅನುಮೋದನೆ ನೀಡಿದೆ.


ಕೆಜಿಐಡಿ ವಿಮಾ ಯೋಜನೆಯ ಕಡ್ಡಾಯ ವಿಮಾದಾರರಿಗೆ 2018 -20 ದ್ವೈವಾರ್ಷಿಕ ಅವಧಿಗೆ ಬೋನಸ್ ಘೋಷಣೆ ಮಾಡಲಾಗಿದೆ.

ಕರ್ನಾಟಕ ಸರ್ಕಾರಿ ವಿಮಾ ಯೋಜನೆಯ ಕಡ್ಡಾಯ ಜೀವ ವಿಮಾ ಯೋಜನೆಯ ವಿಮಾದಾರರಿಗೆ ದಿನಾಂಕ 1.4.2018 ರಿಂದ 31.3.2020ರ ದ್ವೈವಾರ್ಷಿಕ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಎಲ್ಲಾ ಪಾಲಿಸಿಗಳಿಗೆ ವಿಮಾ ಮೊತ್ತದ ಮೇಲೆ ಪ್ರತಿ ಸಾವಿರ ರೂಪಾಯಿಗೆ ಪ್ರತಿ ವರ್ಷಕ್ಕೆ 80 ರೂಪಾಯಿ ಬೋನಸ್ ಘೋಷಿಸಲು ಸಚಿವ ಸಂಪುಟ ನಿರ್ಣಯಿಸಿದೆ.

ಅವಧಿ ಪೂರ್ಣ, ಮರಣ ಹಾಗೂ ವಿಮಾ ತ್ಯಾಗ ಮೌಲ್ಯಗಳಿಂದ ದಿನಾಂಕ 01.04.2020 ರಿಂದ 31.03.2022 ಅವಧಿಯಲ್ಲಿ ಹೊರ ಹೋಗಿರುವ ವಿಮಾ ಪಾಲಿಸಿಗಳಿಗೆ ಪ್ರತಿ ಸಾವಿರ ರೂಪಾಯಿಗೆ ಪ್ರತಿ ವರ್ಷಕ್ಕೆ 80 ರೂ. ನಂತೆ ಮಧ್ಯಂತರ ಲಾಭಾಂಶ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ.


ಜುಲೈ 4) ಸಚಿವ ಸಂಪುಟ ಸಭೆ ನಡೆದಿದ್ದು, ಹಲವು ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಅದರಲ್ಲೂ, ಕೆ.ಜಿ.ಐ.ಡಿ (KGID) ವಿಮಾ ಯೋಜನೆಯ ಕಡ್ಡಾಯ ವಿಮಾದಾರರಿಗೆ 2018-20 ದ್ವೈವಾರ್ಷಿಕ ಅವಧಿಗೆ ಅಧಿಲಾಭಾಂಶ (Bonus) ಘೋಷಣೆ ಮಾಡಲು ಪ್ರಸ್ತಾಪ, 563 ನಗರ ಆರೋಗ್ಯ ಕ್ಷೇಮ ಕೇಂದ್ರ (ನಮ್ಮ ಕ್ಲಿನಿಕ್)ಗಳಿಗೆ ಅಗತ್ಯವಿರುವ ಸಾಮಗ್ರಿಗಳನ್ನು ಒದಗಿಸುವುದು ಸೇರಿ ಹಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.






logoblog

Thanks for reading Karnataka Government Employees KGID Bonus

Previous
« Prev Post

No comments:

Post a Comment