ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ 'ಎ' ಮತ್ತು 'ಬಿ' ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ : 4509 (1)/2023-24, 2:26-02-202400 ಹೊರಡಿಸಿದ್ದು, ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ:27-08-2024ರಂದು ನಡೆಸಲು ನಿಗದಿಪಡಿಸಿರುತ್ತದೆ. ಅಭ್ಯರ್ಥಿಗಳು ಸಾಮಾಜಿಕ ಜಾಲತಾಣ ಹಾಗೂ ಇತರೆ ಯಾವುದೇ ತಪ್ಪು ಮಾಹಿತಿಗಳಿಗೆ ಮತ್ತು ಉಹಾಪೋಹಗಳಿಗೆ ಗೊಂದಲಕ್ಕೀಡಾಗದೇ ಆಯೋಗವು ಸದರಿ ನೇಮಕಾತಿಗೆ ದಿನಾಂಕ:27-08-2024ರಂದು ನಡೆಸಲಿರುವ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರವನ್ನು ಆಯೋಗದ ವೆಬ್ ಸೈಟ್ http://kpsc.kar.nic.inನಿಂದ ದಿನಾಂಕ:16-08-2024ರ ಸಂಜೆ 6.00ರ ನಂತರ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
ಸದರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿ ನಡೆಸಲಾಗುವುದು. ಸದರಿ ಪರೀಕ್ಷೆಯ ವೇಳಾಪಟ್ಟಿಯು ಆಯೋಗದ ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ. ಸದರಿ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಯಾವುದೇ ರೀತಿಯ ಬದಲಾವಣೆಗಳು ಇರುವುದಿಲ್ಲ. ಈ ಮಾಹಿತಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಿದೆ.
ವಿಶೇಷ ಸೂಚನೆ:
1. ಸದರಿ ನೇಮಕಾತಿಗೆ ಅರ್ಜಿ ಸಲ್ಲಿಸುವ ಸಮಯದಲ್ಲಿ ಪೂರ್ವಭಾವಿ ಪರೀಕ್ಷೆ ಬರೆಯಲು ಒಟ್ಟು 416 ಅಂಗವಿಕಲ ಅಭ್ಯರ್ಥಿಗಳು ಲಿಪಿಕಾರರ ಸಹಾಯವನ್ನು ಕೋರಿರುತ್ತಾರೆ. ಅದರಲ್ಲಿ ಒಟ್ಟು 157 ಅಂಗವಿಕಲ ಅಭ್ಯರ್ಥಿಗಳು ಆಯೋಗದ ವತಿಯಿಂದ ಲಿಪಿಕಾರರನ್ನು ಒದಗಿಸುವಂತೆ ಕೋರಿದ್ದು, ಅವರ ಕೋರಿಕೆಯಂತೆ ಲಿಪಿಕಾರರ ಸೌಲಭ್ಯವನ್ನು ಒದಗಿಸಲಾಗುವುದು.
2. ಇನ್ನುಳಿದ 259 ಅಂಗವಿಕಲ ಅಭ್ಯರ್ಥಿಗಳು ತಮ್ಮದೇ ಆದ ಲಿಪಿಕಾರರನ್ನು ಕರೆತರಲು ಆಯ್ಕೆ ಮಾಡಿಕೊಂಡಿರುತ್ತಾರೆ. ಸದರಿ 259 ಅಂಗವಿಕಲ ಅಭ್ಯರ್ಥಿಗಳು ಪರೀಕ್ಷಾ ದಿನದಂದು ಪರೀಕ್ಷಾ ಉಪಕೇಂದ್ರದ ಮುಖ್ಯಸ್ಥರನ್ನು ಲಿಪಿಕಾರರ ಸಹಾಯವನ್ನು ಒದಗಿಸುವಂತೆ ಕೋರಿದ್ದಲ್ಲಿ, ಸದರಿ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗುವುದು.
3. ತಮ್ಮದೇ ಆದ ಲಿಪಿಕಾರರನ್ನು ಕರೆತರುವ ಅಂಗವಿಕಲ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರದೊಂದಿಗೆ ಲಿಪಿಕಾರರ ಪ್ರವೇಶ ಪತ್ರವನ್ನು ಸಹ ಡೌನ್ ಲೋಡ್ ಮಾಡಿಕೊಳ್ಳತಕ್ಕದ್ದು.

No comments:
Post a Comment