Monday, August 5, 2024

Aided School Vacant Posts Approval

  Wisdom News       Monday, August 5, 2024
Hedding ; Aided School Vacant Posts Approval...


ಖಾಸಗಿ ಅನುದಾನಿತ ಶಾಲೆ ಹಾಗೂ ಕಾಲೇಜುಗಳ ಖಾಲಿ ಹುದ್ದೆಗಳ ನೇಮಕಾತಿಗಾಗಿ ಸರ್ಕಾರ ಮಹತ್ವದ ಆದೇಶ ಒಂದನ್ನು ಹೊರಡಿಸಿದೆ.

ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದೆ. 1987ರಿಂದ 1994-95ರ ಶೈಕ್ಷಣಿಕ ಅವಧಿಯಲ್ಲಿ ಪ್ರಾರಂಭಗೊಂಡು ಈಗಾಗಲೇ ವೇತನಾನುದಾನಕ್ಕೆ ಒಳಪಟ್ಟ ಖಾಸಗಿ ಅನುದಾನಿತ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಪದವಿ ಕಾಲೇಜುಗಳಲ್ಲಿ ದಿನಾಂಕ:01-01-2016ರಿಂದ ದಿನಾಂಕ:31-12-2020ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಮತ್ತಿತರ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಭರ್ತಿಮಾಡಿಕೊಳ್ಳಲು ಆರ್ಥಿಕ ಇಲಾಖೆಯು ಸಹಮತಿಸಿದೆ.

ಷರತ್ತುಗಳು:

1. ಹುದ್ದೆಗಳನ್ನು ಭರ್ತಿ ಮಾಡಿಕೊಂಡ ನಂತರ ನೇಮಕಾತಿ ಅನುಮೋದನೆಗಾಗಿ ಆರ್ಥಿಕ ಇಲಾಖೆಯ ಅನಧಿಕೃತ ಟಿಪ್ಪಣಿ ಸಂಖ್ಯೆ:ಆಇ 384 ವೆಚ್ಚ-8/2013, ದಿನಾಂಕ:09-04- 2013ರಲ್ಲಿನ ಚೆಕ್‌ಲಿಸ್ಟ್ ಅನುಬಂಧ-3ರನ್ವಯ ಸಂಪೂರ್ಣ ಮಾಹಿತಿ/ದಾಖಲೆಗಳೊಂದಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವುದು.

2. ಮೇಲ್ಕಂಡಂತೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಂದರ್ಭದಲ್ಲಿ ಜಾರಿಯಲ್ಲಿರುವ ಅನುದಾನ ಸಂಹಿತೆ ಮತ್ತು ಸರ್ಕಾರದ ಆದೇಶ ಮತ್ತು ಸುತ್ತೋಲೆಗಳ ನಿಯಮಗಳನ್ನು ಪಾಲಿಸಿರುವುದನ್ನು ಖಚಿತಪಡಿಸಿಕೊಳ್ಳುವುದು.

3. ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಾಗ ನಿಯಮಾನುಸಾರ ರೋಸ್ಟರ್ ಬಿಂದು ಮತ್ತು ಕಲ್ಯಾಣ ಕರ್ನಾಟಕದ ಮೀಸಲಾತಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.

4. 2016-2017 ರಿಂದ 2023-24ನೇ ಸಾಲಿನವರಗೆ ವಿದ್ಯಾರ್ಥಿಗಳ ದಾಖಲಾತಿ, ಪರೀಕ್ಷಾ ಫಲಿತಾಂಶ ಮತ್ತು ಮೂಲಭೂತ ಸೌಕರ್ಯಗಳು ಉತ್ತಮವಾಗಿರುವುದನ್ನು ಖಚಿತಪಡಿಸಿಕೊಳ್ಳುವುದು.

5. ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಶಾಲಾ/ಕಾಲೇಜುಗಳು ಪ್ರಾರಂಭವಾದಾಗಿನಿಂದ ಅವಿಚ್ಚಿನ್ನವಾಗಿ ನಡೆಯುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು.

6. ಅನುದಾನಿತ ಶಾಲೆಗಳು ಮತ್ತು ಕಾಲೇಜುಗಳು ಆನ್‌ಲೈನ್ ಮೂಲಕ ವಿವರಗಳು ಮತ್ತು ದಾಖಲೆಗಳನ್ನು ಸಲ್ಲಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸುವುದು. ಈ ತಂತ್ರಾಂಶದ ಮೂಲಕ ಪ್ರಸ್ತಾವನೆಗಳನ್ನು ವ್ಯವಹರಿಸುವುದು.

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಆದೇಶ ಡೌನ್ಲೋಡ್ ಮಾಡಿಕೊಳ್ಳಿ.


logoblog

Thanks for reading Aided School Vacant Posts Approval

Previous
« Prev Post

No comments:

Post a Comment