Tuesday, August 20, 2024

Circular related to online submission of application for 2024-25 NMMS Examination

  Wisdom News       Tuesday, August 20, 2024
Hedding ; Karnataka NMMS Exam application 2024...


ರಾಜ್ಯದ 8ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಎನ್‌ಎಂಎಂಎಸ್ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಪರೀಕ್ಷೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್.5 ಕೊನೆಯ ದಿನವಾಗಿದೆ.

NMMS ಪರೀಕ್ಷೆಯನ್ನು 2024ನೇ ಡಿಸೆಂಬರ್‌ 8ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕೆಎಸ್‌ಕ್ಯುಎಎಸಿ ವತಿಯಿಂದ ನಡೆಸಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ

NMMS ಪರೀಕ್ಷೆಯನ್ನು ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆ ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದ್ದು, ವಿದ್ಯಾರ್ಥಿ ವೇತನ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ.


ಸದರಿ ಪರೀಕ್ಷೆಯ ಆನ್‌ಲೈನ್ ಅರ್ಜಿಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ https://kseab.karnataka.gov.in ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲೆಯ ವಿದ್ಯಾರ್ಥಿಗಳ ಅರ್ಜಿಯನ್ನು ಆನ್‌ಲೈನ್‌ನಲ್ಲಿ ಮಂಡಳಿಯ ವೆಬ್‌ಸೈಟ್‌ನಲ್ಲಿ ಲಭ್ಯವಿರುವ NMMS ಲಾಗಿನ್‌ನಲ್ಲಿ ಸಲ್ಲಿಸುವುದು. ಆನ್‌ಲೈನ್ ಅರ್ಜಿ ಸಲ್ಲಿಸಲು 2024ನೇ ಸೆಪ್ಟೆಂಬರ್ 5 ಕೊನೆಯ ದಿನಾಂಕವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಮಂಡಳಿಯ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಸುತ್ತೋಲೆಯನ್ನು ಗಮನಿಸುವುದು ಹಾಗೂ ಕೆಎಸ್‌ಕ್ಯುಎಎಸಿ ಕಚೇರಿಯ ದೂರವಾಣಿ ಸಂಖ್ಯೆ 080-23341615 ಅನ್ನು ಸಂಪರ್ಕಿಸಬಹುದು.

logoblog

Thanks for reading Circular related to online submission of application for 2024-25 NMMS Examination

Previous
« Prev Post

No comments:

Post a Comment