ಜುಲೈ 10ರಂದು ಎಸ್ಎಸ್ಎಲ್ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಿತ್ತು. ಇದೀಗ ಆಗಸ್ಟ್ 26ರಂದು ಎಸ್ಎಸ್ಎಲ್ಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ.
ಇಂದು (ಆಗಸ್ಟ್ 26ರ ಸೋಮವಾರ) ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ -3ರ ಪರೀಕ್ಷೆಯನ್ನು ಆಗಸ್ಟ್ 02 ರಿಂದ ಆಗಸ್ಟ್ 09 ರವರೆಗೆ ನಡೆಸಲಾಗಿತ್ತು. ಇದೀಗ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಮುಕ್ತಾಯಗೊಂಡಿದ್ದು, ನಾಳೆ ಫಲಿತಾಂಶ ಪ್ರಕಟವಾಗಲಿದೆ.
ಫಲಿತಾಂಶ ನೋಡಲು ಹೀಗೆ ಮಾಡಿ
ಎಸ್ಎಸ್ಎಲ್‌ಸಿ ಪರೀಕ್ಷೆ-3ರ ಫಲಿತಾಂಶ ಚೆಕ್ ಮಾಡಲು ಈ ಕ್ರಮ ಅನುಸರಿಸಿ. https://karresults.nic.in ಜಾಲತಾಣದಲ್ಲಿ ಆಗಸ್ಟ್ 26ರ ಮಧ್ಯಾಹ್ನ 12ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ಮಂಡಳಿ ತಿಳಿಸಿದೆ. ಎಸ್ಎಸ್ಎಲ್‌ಸಿ ಪರೀಕ್ಷೆ-2ರ ಫಲಿತಾಂಶ ಜುಲೈ 10ರಂದು ಪ್ರಕಟವಾಗಿತ್ತು.

No comments:
Post a Comment