Wednesday, September 4, 2024

Good news for teachers: CM promises to fulfill teachers' demands including promotion

  Wisdom News       Wednesday, September 4, 2024
Hedding ; Good news for teachers: CM promises to fulfill teachers' demands including promotion...


ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಅವರ ಬೇಡಿಕೆಗಳ ಕುರಿತು ಸಭೆ ನಡೆಸಿದರು.






ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಅವರ

ಬೇಡಿಕೆಗಳ ಕುರಿತು ಚರ್ಚೆ ನಡೆಸಿದರು. ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು, ವಿಧಾನ ಪರಿಷತ್‌ ಸದಸ್ಯರಾದ ಕೆ. ಎಸ್. ಪುಟ್ಟಣ್ಣ, ಸಾಹಿತಿ ಬರಗೂರು ರಾಮಚಂದ್ರಪ್ಪ, ಡಾ. ನಿರಂಜನಾರಾಧ್ಯ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದವರ ಬೇಡಿಕೆಗಳ ಕುರಿತು ಚರ್ಚೆ ನಡೆಸಿ, ಮಾತನಾಡಿದರು.

2017ರಲ್ಲಿ ವೃಂದ ಮತ್ತು ನೇಮಕಾತಿ ನಿಯಮಾವಳಿಗೆ ತಿದ್ದುಪಡಿ ಮಾಡಿದ ಬಳಿಕ ಸೇವಾ ನಿಯಮಗಳನ್ನು ಪೂರ್ವಾನ್ವಯವಾಗುವಂತೆ ಅನುಷ್ಠಾನಗೊಳಿಸಬಾರದು. ಪದವೀಧರರಾಗಿರುವ 40 ಸಾವಿರಕ್ಕೂ ಹೆಚ್ಚಿನ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಆದೇಶ ಹೊರಡಿಸಬೇಕು. ನೇಮಕಾತಿ 7ನೇ ತರಗತಿವರೆಗೆ ಎಂದು ಹೇಳಿ ಈಗ 5ನೇ ತರಗತಿವರೆಗೆ ಎಂದು ಹಿಂಬಡ್ತಿ ನೀಡಲಾಗಿದೆ. ಆಯಾ ಜಿಲ್ಲಾ ನೇಮಕಾತಿ ಸಮಿತಿಯ ಮಟ್ಟದಲ್ಲಿ ಮುಖ್ಯೋಪಾಧ್ಯಾಯ ಹುದ್ದೆಗಳಿಗೆ ಈ ಮೊದಲು ಮುಂಬಡ್ತಿ ನೀಡಲಾಗುತ್ತಿತ್ತು. ಅದನ್ನು ಕಳೆದ ಮೂರು ವರ್ಷಗಳಿಂದ ನಿಲ್ಲಿಸಲಾಗಿದ್ದು, ಇದನ್ನು ಮುಂದುವರೆಸಬೇಕು. ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಯಲ್ಲಿ, ಮುಂಬಡ್ತಿ ಹುದ್ದೆಗಳನ್ನು ಶೇ.50ರಷ್ಟು ನಿಗದಿಪಡಿಸಬೇಕು. ಮುಂಬಡ್ತಿ ಸಂದರ್ಭದಲ್ಲಿ ಸೇವಾ ಜೇಷ್ಟತೆಯನ್ನು ಪರಿಗಣಿಸಬೇಕು ಎಂದು ಶಿಕ್ಷಕರ ಸಂಘದ ನಿಯೋಗದವರು ಮನವಿ ಮಾಡಿದ್ದಾರೆ.

ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಕಾನೂನು ತೊಡಕು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಸಮಗ್ರವಾಗಿ ಸಮಾಲೋಚನೆ ನಡೆಸಿ, ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು.





Subject : News 

Subject Language : Kannada

Which Department : all

Place : Karnataka

Announcement Date: /09/2024

Subject Format : PDF/JPJ

Subject Size : 56kb

Pages :

Scanned Copy : Yes

Editable Text : NO

Password Protected :  

Download Link : Yes

Copy Text : NO

Print Enable : Yes

Quality : High

Subject Size Reduced :NO

Password : NO

Cost : Free

For Personal Use Only





logoblog

Thanks for reading Good news for teachers: CM promises to fulfill teachers' demands including promotion

Previous
« Prev Post

No comments:

Post a Comment