Tuesday, October 1, 2024

KARNATAKA AROGYA SANJEEVINI SCHEME

  Wisdom News       Tuesday, October 1, 2024
Hedding ; KARNATAKA AROGYA SANJEEVINI SCHEME...


ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನೂತನ 'ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ'ಯನ್ನು (THE KARNATAKA AROGYA SANJEEVINI SCHEME -KASS) ಅನುಷ್ಠಾನಗೊಳಿಸಲು ವಿವಿಧ ಸಮಿತಿಗಳನ್ನು ರಚಿಸುವ ಬಗ್ಗೆ ರಾಜ್ಯ ಸರ್ಕಾರ ಗೆಜೆಟ್ ಪ್ರಕಟಣೆಯನ್ನು ಹೊರಡಿಸಿದೆ.

ಪ್ರಸ್ತಾವನೆ:

ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು 'ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ' (KARNATAKA AROGYA SANJEEVINI SCHEME - KASS) ಎಂಬ ನೂತನ ಯೋಜನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ಮುಖಾಂತರ ಅನುಷ್ಠಾನಗೊಳಿಸಲು ಸರ್ಕಾರವು ನಿರ್ಧರಿಸಿ, ಮೇಲೆ (1) ರಿಂದ (3) ರಲ್ಲಿ ಓದಲಾದ ಸರ್ಕಾರದ ಆದೇಶಗಳಲ್ಲಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಕೆಲವು ಕಾರ್ಯನೀತಿ ಸೂಚನೆಗಳನ್ನು ನೀಡಲಾಗಿದೆ.

ಮೇಲೆ ಓದಲಾದ (2) ರ ಸರ್ಕಾರದ ಆದೇಶ ದಿನಾಂಕ: 05.09.2022ರಲ್ಲಿ ಯೋಜನೆಯ ನಿರ್ವಹಣೆಗಾಗಿ ವಿವಿಧ ಸಮಿತಿಗಳ ರಚನೆ ಹಾಗೂ ಅವುಗಳ ಅಧಿಕಾರ ಮತ್ತು ನಿರ್ವಹಿಸಬೇಕಾದ ವಿಷಯಗಳ ಬಗ್ಗೆ ಪ್ರತ್ಯೇಕ ಆದೇಶ ಹೊರಡಿಸುವುದಾಗಿ ತಿಳಿಸಲಾಗಿದೆ.

ಮೇಲೆ ಓದಲಾದ (3)ರ ಪತ್ರ ಮತ್ತು (4) ರಲ್ಲಿನ ಕಡತಗಳಲ್ಲಿ ಕಾರ್ಯಕಾರಿ ನಿರ್ದೇಶಕರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಇವರು ಸರ್ಕಾರಕ್ಕೆ ಸಲ್ಲಿಸಿದ ಪ್ರಸ್ತಾವನೆಗಳಲ್ಲಿ KASS ಯೋಜನೆಯ ನಿರ್ವಹಣೆಗಾಗಿ ಕೆಲವು ಸಮಿತಿಗಳನ್ನು ರಚಿಸಿ ಆದೇಶ ಹೊರಡಿಸಲು ಕೋರಿರುತ್ತಾರೆ.


ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ' (KARNATAKA AROGYA SANJEEVINI SCHEME KASS) ಯನ್ನು ಸುಗುಮವಾಗಿ, ಪರಿಣಾಮಕಾರಿಯಾಗಿ ಹಾಗೂ ಸುವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲು ವಿವಿಧ ಸಮಿತಿಗಳನ್ನು ಅವುಗಳ ಸಂಯೋಜನೆ ಹಾಗೂ ಜವಾಬ್ದಾರಿಗಳನ್ನು ನಿಗದಿಪಡಿಸಿ ಆದೇಶಿಸಬೇಕಾಗಿರುವುದರಿಂದ ಕಾರ್ಯಕಾರಿ ನಿರ್ದೇಶಕರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಇವರು ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದೆ.


logoblog

Thanks for reading KARNATAKA AROGYA SANJEEVINI SCHEME

Previous
« Prev Post

No comments:

Post a Comment