Saturday, November 30, 2024

2022-23 GPT Teachers Service Consideration

  Wisdom News       Saturday, November 30, 2024
Hedding ; 2022-23 GPT Teachers Service Consideration



2022-23ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನೇಮಕವಾದ ಪದವೀಧರ ಪ್ರಾಥಮಿಕ ಶಿಕ್ಷಕರ ಹಿಂದಿನ ಸೇವೆಯನ್ನು ವೇತನ ಸಂರಕ್ಷಣೆ ಉದ್ದೇಶಕ್ಕಾಗಿ ಪರಿಗಣಿಸುವ ಬಗ್ಗೆ ಸುತ್ತೋಲೆ.

ಉಲ್ಲೇಖ: ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ (6-8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ (ರಿ), ಬೆಂಗಳೂರು ಇವರ ಪತ್ರ ದಿನಾಂಕ: 08.10.2024.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2022-23ನೇ ಸಾಲಿನ ಸರ್ಕಾರಿ ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ ಆಯ್ಕೆಯಾದ ಶಿಕ್ಷಕರು ನೇಮಕಾತಿ ಹೊಂದುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಾಗರೀಕ ಸೇವಾ ನಿಯಮ 25(ಬಿ) ಪ್ರಕಾರ ಈ ಹಿಂದಿನ ಹುದ್ದೆಯಲ್ಲಿ ಸಲ್ಲಿಸಿದ ಸೇವೆಯನ್ನು ಅರ್ಹದಾಯಕ ಸೇವೆಯೆಂದು ಪರಿಗಣಿಸುವ ಹಾಗೂ ರಜೆ ಮತ್ತು 42(ಬಿ) ಪ್ರಕಾರ ವೇತನ ಸಂರಕ್ಷಣೆ ಉದ್ದೇಶಕ್ಕಾಗಿ ವರಿಗಣಿಸುವಂತೆ ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ (6-8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ(ರಿ), ಬೆಂಗಳೂರು ಇವರು ಸರ್ಕಾರವನ್ನು ಕೋರಿರುತ್ತಾರೆ (ಪ್ರತಿ ಲಗತ್ತಿಸಿದೆ).

ಆದ್ದರಿಂದ, ಮೇಲ್ಕಂಡ ವಿಷಯದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ಬಗ್ಗೆ ಅರ್ಜಿದಾರರಿಗೆ ಸೂಕ್ತ ಮಾಹಿತಿ / ಹಿಂಬರಹ ನೀಡುವಂತೆ ಹಾಗೂ ಅಗತ್ಯವಿದ್ದಲ್ಲಿ ಮನವಿಯೊಂದಿಗೆ ಸರ್ಕಾರಕ್ಕೆ ಪ್ರತ್ಯೇಕವಾಗಿ ಪ್ರಸ್ತಾವನೆ/ ವರದಿಯನ್ನು ಸಲ್ಲಿಸುವಂತೆ ತಮಗೆ ತಿಳಿಸಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದು ಶಾಲಾ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.



logoblog

Thanks for reading 2022-23 GPT Teachers Service Consideration

Previous
« Prev Post

No comments:

Post a Comment