Wednesday, November 6, 2024

402 PSI Exam Result 2024

  Wisdom News       Wednesday, November 6, 2024
Hedding ; 402 PSI Exam Result 2024



ಕರ್ನಾಟಕ ಪೊಲೀಸ್ ಇಲಾಖೆಯ 402 ಪಿಎಸ್‌ಐ ಹುದ್ದೆಗಳಿಗೆ ನಡೆದ ಪರೀಕ್ಷೆಯ ಅಭ್ಯರ್ಥಿಗಳ ಅಂಕಗಳ ಫಲಿತಾಂಶವನ್ನು ಇಂದು (ನವೆಂಬರ್‌ 06) ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಪರಿಶೀಲನೆ ಮಾಡಿ ನವೆಂಬರ್ 9ರೊಳಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಹಾಗಾದರೆ ಅಂಕಪಟ್ಟಿಯನ್ನು ವೀಕ್ಷಣೆ ಮಾಡುವ ವಿಧಾನವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿಯಿದ್ದ 402 ಪಿಎಸ್‌ಐ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಕ್ಟೋಬರ್‌ 3, 2024ರಂದು ನಡೆಸಲಾಗಿದ್ದ ಪರೀಕ್ಷೆಯ ಕೀ ಉತ್ತರಗಳನ್ನು ಈಗಾಗಲೇ ಪ್ರಕಟ ಮಾಡಲಾಲಾಗಿದೆ. ಇದೀಗ ಇಂದು (ನವೆಂಬರ್ 06) ಅಭ್ಯರ್ಥಿಗಳ ಅಂಕಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೂಲಕ ಪರೀಕ್ಷೆ ಬರೆದ 42,933 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಆಕ್ಷೇಪಣೆಗಳಿದ್ದಲ್ಲಿ ನವೆಂಬರ್‌ 9ರೊಳಗೆ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಕ್ಟೋಬರ್ 3, 2024ರಂದು ಪಿಎಸ್‌ಐ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2ರಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂಕಗಳ ವಿವರಗಳುಳ್ಳ ತಾತ್ಕಾಲಿಕ ಅಂಕಪಟ್ಟಿಯನ್ನು ಕೆಇಎ ಅಧಿಕೃತ ವೆಬ್‌ಸೈಟ್‌ https://cetonline.karnataka.gov.in ನಲ್ಲಿ ಪ್ರಕಟಿಸಿದೆ.

logoblog

Thanks for reading 402 PSI Exam Result 2024

Previous
« Prev Post

No comments:

Post a Comment