Hedding : KSET-2023 LAST & FINAL CHANCE FOR DOCUMENT VERIFICATION FOR KSET-2023 CANDIDATES
ದಾಖಲಾತಿ ಪರಿಶೀಲನೆಗೆ ಅರ್ಹರಿದ್ದು ಇದುವರೆಗೂ ದಾಖಲಾತಿ ಪರೀಶೀಲನೆ ಪೂರ್ಣಗೊಳ್ಳದ (PG Degree Completed / Pursuing) ដូក (Annexure-B) ದಿನಾಂಕ 12.11.2024 ರಂದು ಬೆಳಿಗ್ಗೆ 10.00 ಘಂಟೆಗೆ ಎಲ್ಲಾ ಮೂಲ ದಾಖಲೆಗಳೊಂದಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರು, ಇಲ್ಲಿ ದಾಖಲಾತಿ ಪರಿಶೀಲನೆಗೆ ತಪ್ಪದೆ ಹಾಜರಾಗುವಂತೆ ತಿಳಿಸಲಾಗಿದೆ. ಇದು ಕೊನೆಯ ಅವಕಾಶವಾಗಿದ್ದು, ಮತ್ತೊಮ್ಮೆ ದಾಖಲಾತಿ ಪರಿಶೀಲನೆಗೆ ಯಾವುದೇ ಅವಕಾಶ ನೀಡಲಾಗುವುದಿಲ್ಲ ಹಾಗೂ ದಾಖಲಾತಿ ಪರಿಶೀಲನೆಗೆ ಹಾಜರಾಗದೆ ಇರುವ ಅಭ್ಯರ್ಥಿಗಳನ್ನು ಅರ್ಹತಾ ಪಟ್ಟಿಯಿಂದ ಕೈಬಿಡಲಾಗುವುದು.
ಈ ಹಿಂದೆ ದಾಖಲಾತಿ ಪರಿಶೀಲನೆಗೆ ಹಾಜರಾಗಿ, ಪರಿಶೀಲನೆ ಸಮಯದಲ್ಲಿ PG Degree Pursuing ಇದ್ದು ಪ್ರಸ್ತುತ ಸ್ನಾತಕೋತ್ತರ ಪದವಿ ಪೂರ್ಣ ಗೊಂಡಿರುವ ಅಭ್ಯರ್ಥಿಗಳು, ತಮ್ಮ ಸ್ನಾತಕೋತ್ತರ ಪದವಿ ಪೂರ್ಣಗೊಂಡಿರುವ ಬಗ್ಗೆ ಮೂಲ ಅಂಕಪಟ್ಟಿಯನ್ನು ಮತ್ತು ಎಲ್ಲಾ ಪೂರಕ ದಾಖಲಾತಿಗಳನ್ನು ಸಲ್ಲಿಸಿ ಪ್ರಮಾಣ ಪತ್ರವನ್ನು ಪಡೆಯಲು ಸೂಚಿಸಿದೆ.
ಶೈಕ್ಷಣಿಕ ಅರ್ಹತೆ ಮತ್ತು ಮೀಸಲಾತಿ ಸಂಬಂಧಿಸಿದ ಎಲ್ಲಾ ನಿಬಂಧನೆಗಳು ಹಾಗೂ ಮೂಲ ದಾಖಲೆಗಳ ಪರಿಶೀಲನೆಗೆ ಸಲ್ಲಿಸಬೇಕಾದ ದಾಖಲಾತಿ ಪ್ರಮಾಣ ಪತ್ರಗಳ ವಿವರಗಳಿಗೆ ದಿನಾಂಕ 11.09.2023 ರ ಅಧಿಸೂಚನೆಯನ್ನು ಓದಿಕೊಳ್ಳಲು ಸೂಚಿಸಿದೆ.
ವಿವಾಹಿತ ಮಹಿಳಾ ಅಭ್ಯರ್ಥಿಗಳು (ಕೆಸೆಟ್-2023ರ ಅರ್ಜಿಯಲ್ಲಿ ವಿವಾಹಿತರೆಂದು ನಮೂದಿಸಿ 2ಎ, 2ಬಿ. 3ಎ, 3ಬಿ ಮೀಸಲಾತಿ ಕೋರಿರುವ ಮಹಿಳಾ ಅಭ್ಯರ್ಥಿಗಳು) ತಮ್ಮ ಪತಿಯ ಹೆಸರಿನೊಂದಿಗೆ ಜಾರಿಯಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಮೂಲ ದಾಖಲೆಗಳ ಪರಿಶೀಲನೆ ಸಮಯದಲ್ಲಿ ಸಲ್ಲಿಸಲು ಸೂಚಿಸಿದೆ.
ಈಗಾಗಲೇ ದಾಖಲಾತಿ ಪರಿಶೀಲನೆ ಪೂರ್ಣಗೊಂಡು ಕೆಸೆಟ್ ಪ್ರಮಾಣ ಪತ್ರವನ್ನು ಇದುವರೆಗೂ ಪಡೆಯದಿರುವ (ಸ್ನಾತಕೋತ್ತರ ಪದವಿ ಪೂರ್ಣಗೊಂಡಿರುವ) ಅಭ್ಯರ್ಥಿಗಳು ಮೇಲ್ಕಂಡ ದಿನಾಂಕದಂದು ಖುದ್ದು ಹಾಜರಾಗಿ ದಾಖಲೆ ಪರಿಶೀಲನೆ ಸಮಯದಲ್ಲಿ ನೀಡಲಾದ ವೆರಿಫಿಕೇಷನ್ ಸ್ಲಿಪ್ ಅನ್ನು ಪ್ರಾಧಿಕಾರಕ್ಕೆ ಸಲ್ಲಿಸಿ ಕೆಸೆಟ್ ಪ್ರಮಾಣ ಪತ್ರವನ್ನು ಪಡೆಯಲು ಸೂಚಿಸಿದೆ.

No comments:
Post a Comment