Hedding ; One time 3 years relaxation order for recruitment of Group B C posts..
ಆಯೋಗವು 2023-24ನೇ ಸಾಲಿನಲ್ಲಿ ಉಲ್ಲೇಖ(01)ರ ಅಧಿಸೂಚನೆಯಲ್ಲಿ ಸಾರಿಗೆ ಇಲಾಖೆಯಲ್ಲಿನ ಗ್ರೂಪ್-ಸಿ ವೃಂದದ ಮೋಟಾರು ವಾಹನ ನಿರೀಕ್ಷಕರು -70 (ಉಳಿಕೆ ಮೂಲ ವೃಂದದ) ಹುದ್ದೆಗಳಿಗೆ ಅಧಿಸೂಚನೆ ಜಾರಿ ಮಾಡಲಾಗಿರುತ್ತದೆ. ಸದರಿ ಅಧಿಸೂಚನೆಯಲ್ಲಿ ಗರಿಷ್ಠ ವಯೋಮಿತಿಯನ್ನು 'ಸಾಮಾನ್ಯ ಅರ್ಹತೆ- 35 ವರ್ಷಗಳು, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ 38 ವರ್ಷಗಳು ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1- 40 ವರ್ಷಗಳು" ಎಂದು ನಿಗದಿಪಡಿಸಲಾಗಿತ್ತು.
ಪ್ರಸ್ತುತ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 166 ಸೆನೆನಿ 2024, ದಿನಾಂಕ:10.09.2024ರಲ್ಲಿ, ಈ ಕೆಳಕಂಡಂತೆ ಆದೇಶ ಹೊರಡಿಸಲಾಗಿರುತ್ತದೆ.
'ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್-ಸಿ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ. ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ (one time measure) ಗರಿಷ್ಠ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದೆ."
ಸರ್ಕಾರದ ಮೇಲ್ಕಂಡ ಆದೇಶದ ಹಿನ್ನೆಲೆಯಲ್ಲಿ ದಿ:14-03-2024ರ ಅಧಿಸೂಚನೆಯಲ್ಲಿನ ಗ್ರೂಪ್-ಸಿ ವೃಂದದ ಮೋಟಾರು ವಾಹನ ನಿರೀಕ್ಷಕರು 70 (ಆರ್‌ಪಿಸಿ) ಹುದ್ದೆಗಳಿಗೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಆನ್ವಯವಾಗುವಂತೆ (one time measure) ಗರಿಷ್ಠ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆಯನ್ನು ನೀಡಿ ಅರ್ಹ ಅಭ್ಯರ್ಥಿಗಳು ದಿನಾಂಕ:05-11-2024 ರಿಂದ 120-11-2024 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕಲ್ಪಿಸಲಾಗಿದ್ದು, ಅಭ್ಯರ್ಥಿಗಳು ವಿಸ್ತರಿತ ಕೊನೆಯ ದಿನಾಂಕವಾದ 20-11-2024ಕ್ಕೆ ಆಯಾ ಮೀಸಲಾತಿಗಳ ಮುಂದೆ ನಮೂದಿಸಿರುವ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
ವಿಶೇಷ ಸೂಚನೆ:-
1.ಈ ಹಿಂದೆ ತಾಂತ್ರಿಕ ಕಾರಣದಿಂದ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿ ಮಾಡಲು ಸಾಧ್ಯವಾಗದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು.
2.ವಯೋಮಿತಿಯನ್ನು ಹೊರತುಪಡಿಸಿ ಉಳಿದಂತೆ ಉಲ್ಲೇಖಿತ ಅಧಿಸೂಚನೆಗಳಲ್ಲಿ ತಿಳಿಸಲಾಗಿರುವ ಮಾಹಿತಿ/ವಿವರಗಳನ್ನು ಯಥಾವತ್ತಾಗಿ ಅನ್ವಯಿಸಿಕೊಳ್ಳತಕ್ಕದ್ದು ಹಾಗೂ ಹೆಚ್ಚಿನ ವಿವರಗಳಿಗಾಗಿ ಸದರಿ ಅಧಿಸೂಚನೆಗಳನ್ನು ಓದಿಕೊಳ್ಳತಕ್ಕದ್ದು.

No comments:
Post a Comment