Monday, November 11, 2024

Transfer order of Registered Manager , DDPI of School Education Department

  Wisdom News       Monday, November 11, 2024
Hedding : Transfer order of Registered Manager , DDPI of School Education Department


ಸರ್ಕಾರದ ಅಧಿಸೂಚನೆ ಸಂಖ್ಯೆ:ಇಪಿ 50 ಡಿಪಿಐ 2024, ದಿನಾಂಕ:28/08/2024ರಲ್ಲಿ ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಹಾಗೂ ತತ್ಸಮಾನ ವೃಂದದ ಹುದ್ದೆಯಿಂದ ಉಪನಿರ್ದೇಶಕರು ಹಾಗೂ ತತ್ಸಮಾನ ವೃಂದದ ಹುದ್ದೆಗೆ ಸ್ಥಾನಪನ್ನ ಬಡ್ತಿ ನೀಡಲಾಗಿದ್ದ ಶ್ರೀ ಚನ್ನಬಸಪ್ಪ ಮುಧೋಳ, ಹಿರಿಯ ಸಹಾಯಕ ನಿರ್ದೇಶಕರು, ಅಪರ ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಕಲಬುರಗಿ ಇವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಉಪನಿರ್ದೇಶಕರು (ಆಡಳಿತ), ಶಾಲಾ ಶಿಕ್ಷಣ ಇಲಾಖೆ, ಯಾದಗಿರಿ ಜಿಲ್ಲೆ, ಯಾದಗಿರಿ ಇಲ್ಲಿನ ಶ್ರೀ ಹೆಚ್.ಟಿ.ಮಂಜುನಾಥ್ ಇವರ ಜಾಗಕ್ಕೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.

-2

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಯಾದ ಶ್ರೀ ಪಿ.ಬೈಲಾಂಜನಪ್ಪ, ಉಪ ನಿರ್ದೇಶಕರು(ಆಡಳಿತ), ಶಾಲಾ ಶಿಕ್ಷಣ ಇಲಾಖೆ, ಚಿಕ್ಕಬಳ್ಳಾಪುರ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತ ದೃಷ್ಟಿಯಿಂದ ಉಪ ನಿರ್ದೇಶಕರು(ಆಡಳಿತ), ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿನ ಖಾಲಿ ಹುದ್ದೆಗೆ ವರ್ಗಾಯಿಸಿ ಆದೇಶಿಸಿದೆ.

-3

ಶಾಲಾ ಶಿಕ್ಷಣ ಇಲಾಖೆಯ ಪತ್ರಾಂಕಿತ ಸಹಾಯಕರು ವೃಂದದ ಅಧಿಕಾರಿಯಾದ ಶ್ರೀ ಹೆಚ್.ಎಸ್.ಹುತ್ತೇಶ್, ಪತ್ರಾಂಕಿತ ಸಹಾಯಕರು, ಉಪ ನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತ ದೃಷ್ಟಿಯಿಂದ ಪತ್ರಾಂಕಿತ ಸಹಾಯಕರು, ಉಪ ನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಉತ್ತರ ಜಿಲ್ಲೆ ಇಲ್ಲಿನ ಖಾಲಿ ಹುದ್ದೆಗೆ ವರ್ಗಾಯಿಸಿ ಆದೇಶಿಸಿದೆ.


logoblog

Thanks for reading Transfer order of Registered Manager , DDPI of School Education Department

Previous
« Prev Post

No comments:

Post a Comment