Wednesday, November 27, 2024

Tutti allowance of state government employees increased from 8.50% to 10.75% (2.25%)...

  Wisdom News       Wednesday, November 27, 2024
Hedding ; Tutti allowance of state government employees increased from 8.50% to 10.75% (2.25%)...



ರಾಜ್ಯ ಸರ್ಕಾರದಿಂದ ರಚಿಸಲ್ಪಟ್ಟ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳ ಬೆಳಕಿನಲ್ಲಿ ವೇತನ ಶ್ರೇಣಿಗಳು ಮತ್ತು ಪಿಂಚಣಿ ಪರಿಷ್ಕರಣೆ ಕುರಿತ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ನೀತಿ ನಿರ್ಣಯವನ್ನು ಕೈಗೊಳ್ಳಲಾಗಿರುತ್ತದೆ. 


ಅದರಂತೆ, ಕ್ರಮವಾಗಿ ಮೇಲೆ (1) ಮತ್ತು (2)ರಲ್ಲಿ ಓದಲಾದ ದಿನಾಂಕ: 23.08.2024 ಮತ್ತು 28.08.2024ರ ಸರ್ಕಾರಿ ಆದೇಶಗಳಲ್ಲಿ 2024ರ ಪರಿಷ್ಕೃತ ವೇತನ ಶ್ರೇಣಿಗಳನ್ನು ಮತ್ತು ಪರಿಷ್ಕೃತ ಪಿಂಚಣಿಯನ್ನು ದಿನಾಂಕ: 01.08.2024ರಿಂದ ಅನ್ವಯವಾಗುವಂತೆ ಅನುಷ್ಠಾನಗೊಳಿಸಿ ವಿಸ್ತ್ರತವಾದ ಆದೇಶಗಳನ್ನು ಹೊರಡಿಸಲಾಗಿರುತ್ತದೆ.

ದಿನಾಂಕ: 23.08.2024ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರು ಮತ್ತು ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರಿಗೆ ತುಟ್ಟಿ ಭತ್ಯೆ ಮಂಜೂರಾತಿಯನ್ನು ಕ್ರಮಬದ್ಧಗೊಳಿಸುವ ಬಗ್ಗೆ ಅವಕಾಶಗಳನ್ನು ಕಲ್ಪಿಸಲಾಗಿರುತ್ತದೆ.

ಮೇಲೆ ಕ್ರಮ ಸಂಖ್ಯೆ (3) ಮತ್ತು (4)ರಲ್ಲಿ ಓದಲಾದ ಆದೇಶಗಳಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಮಂಜೂರು ಮಾಡಿರುವ ಭಾರತ ಸರ್ಕಾರದ ಆದೇಶಗಳನ್ನು ರಾಜ್ಯ ಸರ್ಕಾರವು ಪರಿಗಣಿಸಿರುತ್ತದೆ. ಅದರಂತೆ, ಈ ಕೆಳಕಂಡ ಆದೇಶಗಳನ್ನು ಹೊರಡಿಸಿದೆ.


2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ರಾಜ್ಯ ಸರ್ಕಾರಿ ನೌಕರರುಗಳಿಗೆ ನೀಡಲಾಗುತ್ತಿರುವ ತುಟ್ಟಿ ಭತ್ಯೆಯ ದರಗಳನ್ನು 1ನೇ ಜುಲೈ 2024 ರಿಂದ ಜಾರಿಗೆ ಬರುವಂತೆ ಪ್ರಸ್ತುತ ಮೂಲ ವೇತನದ 8.50% ರಿಂದ 10.75% ಕ್ಕೆ ಪರಿಷ್ಕರಿಸಿ ಹೆಚ್ಚಳ ಮಾಡಲು ಸರ್ಕಾರವು
ಹರ್ಷಿಸುತ್ತದೆ. ಆದರೆ, ಪರಿಷ್ಕೃತ ತುಟ್ಟಿ ಭತ್ಯೆಯ ದರಗಳ ಆರ್ಥಿಕ ಲಾಭವು ದಿನಾಂಕ: 01.08.2024 ರಿಂದ ಲಭ್ಯವಾಗುತ್ತದೆ.

2. ತುಟ್ಟಿ ಭತ್ಯೆಯ ಉದ್ದೇಶಕ್ಕಾಗಿ "ಮೂಲ ವೇತನ" ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ,

(ಅ) 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ,

(৫) 2024ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು 7ನೇ ನಿಯಮದ (3)ನೇ ಉಪನಿಯಮದ ಮೇರೆಗೆ ಅವನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ ವೈಯಕ್ತಿಕ ವೇತನ,

(ಇ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ,
ಅವುಗಳು ಸೇರುತ್ತವೆ.

ರಾಜ್ಯ

*

3. ತುಟ್ಟಿ ಭತ್ಯೆಯ ಮಂಜೂರಾತಿಯ ಉದ್ದೇಶಕ್ಕಾಗಿ ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ.

4. ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಸಹ 1ನೇ ಜುಲೈ 2024 ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನದ ಪ್ರಸಕ್ತ 8.50% ರಿಂದ 10.75% ಗೆ ಹೆಚ್ಚಿಸಿ ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ. ಆದರೆ, ಪರಿಷ್ಕೃತ ತುಟ್ಟಿ ಭತ್ಯೆಯ ದರಗಳ ಆರ್ಥಿಕ ಲಾಭವು ದಿನಾಂಕ: 01.08.2024 ರಿಂದ ಲಭ್ಯವಾಗುತ್ತದೆ.

5. ತುಟ್ಟಿ ಭತ್ಯೆಯ ಮಂಜೂರಾತಿಯ ಉದ್ದೇಶಕ್ಕಾಗಿ ಕ.ನಾ.ಸೇ.(ಪ.ವೇ.) ನಿಯಮಗಳು, 2024ರ ನಿಯಮ 3ರಲ್ಲಿ ಸೂಚಿಸಿರುವ ಮತ್ತು ಸದರಿ ನಿಯಮದಡಿ ಹೊರಡಿಸಿರುವ ಆದೇಶಗಳಲ್ಲಿ


ಸೂಚಿಸಿರುವ ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನವನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ.

6. ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ನೌಕರರುಗಳಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ.

7. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ. ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ.

8. ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ಮತ್ತು ಎನ್‌ಜೆಪಿಸಿ ವೇತನ ಶ್ರೇಣಿಗಳ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗವುದು.

9. ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿಭತ್ಯೆಯನ್ನು ನಗದಾಗಿ ಪಾವತಿ ಮಾಡುವುದು.

10. ತುಟ್ಟಿ ಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು ಐವತ್ತು ಪೈಸೆಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು.

11. ಈ ಆದೇಶಗಳನ್ವಯ ಪಾವತಿ ಮಾಡಬೇಕಾಗಿರುವ ತುಟ್ಟಿಭತ್ಯೆ ಬಾಕಿ ಮೊತ್ತವನ್ನು, 2024ರ ಡಿಸೆಂಬರ್ ಮಾಹೆಯ ವೇತನ ಬಟವಾಡೆಗೂ ಮೊದಲು ಪಾವತಿ ಮಾಡತಕ್ಕದ್ದಲ್ಲ.

12. ತುಟ್ಟಿ ಭತ್ಯೆಯನ್ನು ಸಂಭಾವನೆಯ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನ ಎಂದು ಪರಿಗಣಿಸಲಾಗುವುದಿಲ್ಲ




🟡⚪🟣🟤🔵⚫🔴🟠🟢⬜🟥🟪🟦🟩🟨🟧🟫🟧🟥⬜🟪🟦🟩🟨🟧🟫🟨🟥⬜🟩🟦🟪🟨🟧🟫🟨🟦🟪🟩⬜🟥🟨🟩🟧🟫🟫🟥🟥⬜🟩🟨🟩🟩🟦🟦🟪🟨🟨🟨🟥🟥🟥🟨🟦🟦🟦🟧🟧🟫🟫🟦🟦🟨🟦🟦🟪🟩🟩🟥🟥

logoblog

Thanks for reading Tutti allowance of state government employees increased from 8.50% to 10.75% (2.25%)...

Previous
« Prev Post

No comments:

Post a Comment