Hedding ; Govt to fill vacancies in Government High Schools Actions taken...
ಪತ್ರದಲ್ಲಿ ರಾಜ್ಯದ มีขอFD ದಿನಾಂಕ:13/09/2022ರ ಪ್ರೌಢಶಾಲೆಗಳಲ್ಲಿ ಖಾಲಿಯಿರುವ ವಿವಿಧ ವೃಂದದ ದೈಹಿಕ ಶಿಕ್ಷಣ ಶಿಕ್ಷಕರ 200 ಹುದ್ದೆಗಳು ಸೇರಿ ಒಟ್ಟು 2500 ಶಿಕ್ಷಕರುಗಳ ಹುದ್ದೆಗಳನ್ನು 15000 ಪದವೀಧರ ಪ್ರಾಥಮಿಕ ಶಾಲಾ ನೇಮಕಾತಿಯಲ್ಲಿ ಭರ್ತಿಯಾಗದೇ ಖಾಲಿ ಉಳಿದ ಹುದ್ದೆಗಳಿಗೆ ಹೊಂದಾಣಿಕೆ ಮಾಡಿಕೊಳ್ಳುವ ಷರತ್ತಿಗೆ ಒಳಪಟ್ಟು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರವು ಅನುಮತಿ ನೀಡಿರುತ್ತದೆ.
ಆದರೆ ಸದರಿ 15000 ಹುದ್ದೆಗಳಲ್ಲಿ ಪ್ರೌಢಶಾಲಾ ಶಿಕ್ಷಕರುಗಳ ನೇಮಕಾತಿಗೆ 1648 ಹುದ್ದೆಗಳು ಮಾತ್ರ ಉಳಿದಿರುವ ಪುಯುಕ್ತ ಪ್ರಸ್ತುತ ಸಾಲಿನಲ್ಲಿ ಒಟ್ಟು 2500 ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವ ಪ್ರಸ್ತಾವನೆಯ ಬಗ್ಗೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರ :44(1).../46/2021-22/9-1407683, ಪತ್ರ ದಿನಾಂಕ:22/05/2024ರ ಕಡತವನ್ನು ಆರ್ಥಿಕ ಇಲಾಖೆಗೆ ಕಳುಹಿಸಲಾಗಿದ್ದು, ಸಮಾಲೋಚಿಸಲಾಗುತ್ತಿದೆ. ಆರ್ಥಿಕ ಇಲಾಖೆಯೊಂದಿಗೆ
ಸರ್ಕಾರದ ಆದೇಶ ಸಂಖ್ಯೆ: ಇಪಿ 230 ಪಿಬಿಎಸ್2024 ದಿನಾಂಕ:07.10.2024 ರಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ 07 ಜಿಲ್ಲೆಗಳಲ್ಲಿ ಖಾಲಿಯಿರುವ ಪ್ರೌಢ ಶಾಲಾ ಸಹ ಶಿಕ್ಷಕರ ಒಟ್ಟು ಹುದ್ದೆಗಳಲ್ಲಿ 385 ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಲಾಗಿರುತ್ತದೆ.
ಆದರೆ ಸುತ್ತೋಲೆ ಸಂಖ್ಯೆ:ಸಿಆಸುಇ 388 ಸೆನೆನಿ 2024 ದಿನಾಂಕ:25.11.2024 ರನ್ವಯ ದಿನಾಂಕ:28.10.2024 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಹೊರಡಿಸಬಾರದೆಂದು ಸೂಚಿಸಲಾಗಿದೆ.


No comments:
Post a Comment