Wednesday, January 22, 2025

Admission for 6th class of 2025 academic year in Ekalavya Residential Schools of the Scheduled Castes Welfare Department

  Wisdom News       Wednesday, January 22, 2025
Hedding ; Admission for 6th class of 2025 academic year in Ekalavya Residential Schools of the Scheduled Castes Welfare Department...



ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಏಕಲವ್ಯ ವಸತಿ ಶಾಲೆಗಳಲ್ಲಿ 2025ನೇ ಶೈಕ್ಷಣಿಕ ಸಾಲಿನ 6ನೇ ತರಗತಿಗೆ ಪ್ರವೇಶಾತಿ ಆದೇಶ.



ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಏಕಲವ್ಯ ವಸತಿ ಶಾಲೆಗಳಲ್ಲಿ 2025ನೇ ಶೈಕ್ಷಣಿಕ ಸಾಲಿನ 6ನೇ ತರಗತಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ.

2025-26ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಆನ್‌ಲೈನ್ ಕೌನ್ಸಿಲಿಂಗ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸುವ ಬಗ್ಗೆ ಅಧಿಸೂಚನೆ ನೀಡಲಾಗಿದೆ.

ಪ್ರಸ್ತುತ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರು ದಿನಾಂಕ 20-01-2025 ರ ಪತ್ರದಲ್ಲಿ ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳಿಗೆ ರಾಜ್ಯದಲ್ಲಿರುವ 12 ಏಕಲವ್ಯ ಮಾದರಿ ವಸತಿ ಶಾಲೆಗಳಿಗೂ ಸಹ 6ನೇ ತರಗತಿಗೆ ವಸತಿ ಶಾಲೆಗಳಿಗೆ ಅರ್ಜಿ ಆಹ್ವಾನಿಸಿ, ಪ್ರವೇಶ ಪರೀಕ್ಷೆ ನಡೆಸಿ ಸೀಟು ಹಂಚಿಕೆಯನ್ನು ಮಾಡಲು ಕೋರಿರುತ್ತಾರೆ.

ಈ ಹಿನ್ನಲೆಯಲ್ಲಿ ಅರ್ಹ ಅಭ್ಯರ್ಥಿಗಳು ರಾಜ್ಯದಲ್ಲಿರುವ 12 ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ ಆಸಕ್ತಿ ಇದ್ದಲ್ಲಿ ಆನ್‌ಲೈನ್ ಮೂಲಕ ಅರ್ಜಿಯನ್ನು 25-01-2025 ರಾತ್ರಿ 11.59ರ ವರೆಗೆ ವಸತಿ ಶಾಲೆ / ಕಾಲೇಜುಗಳ ಮೂಲಕ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ ಹಾಗು ಈ ಕೆಳಗಿನ ವೇಳಾಪಟ್ಟಿಯಂತೆ ದಿನಾಂಕ 15-02-2025 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಪ್ರವೇಶ ಪರೀಕ್ಷೆಗೆ ಹಾಜರಾಗಬಹುದಾಗಿದೆ.


ಅರ್ಜಿ ಸಲ್ಲಿಸುವ ವಿಧಾನ, ಹಾಗೂ "ಮಾಹಿತಿ ಪುಸ್ತಕ-2025" ವನ್ನು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವೆಬ್‌ಸೈಟ್ ನಲ್ಲಿ ಪ್ರಚುರ ಪಡಿಸಲಾಗಿದೆ. ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ದಿನಾಂಕ 06-02-2025 ರಿಂದ ಈ ಮೇಲ್ಕಂಡ ವೆಬ್‌ಸೈಟ್ ಗಳಿಂದ ಆಯಾ ವಸತಿ ಶಾಲೆಯಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು.

ಗಮನಿಸಿ: ಅಭ್ಯರ್ಥಿಯು ಈಗಾಗಲೇ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ SATS ಸಂಖ್ಯೆ, ಇತ್ತೀಚಿನ ಭಾವಚಿತ್ರ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳನ್ನು ಅಥವಾ ಜೆರಾಕ್ಸ್ ಪ್ರತಿಗಳನ್ನು ತೆಗೆದುಕೊಂಡು ಅರ್ಜಿ ಸಲ್ಲಿಸುವ ಸಮಯದಲ್ಲಿ ಸಂಬಂಧಿಸಿದ ವಸತಿ ಶಾಲೆ / ಕಾಲೇಜಿನ ಮುಖ್ಯಸ್ಥರನ್ನು ಸಂಪರ್ಕಿಸಬೇಕು.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ ಆಯ್ಕೆಯ ಆದ್ಯತಾ ಕ್ರಮದಲ್ಲಿ ನಮೂದಿಸುವ ಕುರಿತು: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಯಾವ ಶಾಲೆಗಳಲ್ಲಿ ದಾಖಲಾತಿ ಬಯಸುತ್ತಾರೋ, ಅಂತಹ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಿಕೊಳ್ಳಬೇಕು. ಆದ್ಯತಾ ಕ್ರಮದಲ್ಲಿ ದಾಖಲಿಸುವ ಶಾಲೆಗಳನ್ನು ಮಾತ್ರ ಹಂಚಿಕೆಗೆ ಪರಿಗಣಿಸಲಾಗುವುದು. ಅಭ್ಯರ್ಥಿಗಳು ತಮ್ಮ ಸೀಟು ಹಂಚಿಕೆ ಅವಕಾಶವನ್ನು ಹೆಚ್ಚಿಸಿಕೊಳ್ಳಲು ತಮ್ಮ ಜಿಲ್ಲೆಯಲ್ಲಿರುವ KREIS / ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಎಲ್ಲಾ ವಸತಿ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ನಮೂದಿಸತಕ್ಕದು. ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಮೆರಿಟ್, ಮೀಸಲಾತಿ ಹಾಗೂ ಅಭ್ಯರ್ಥಿಗಳು ಪ್ರವೇಶಾತಿಗಾಗಿ ನಮೂದಿಸಿರುವ ಶಾಲೆಗಳ ಆದ್ಯತಾ ಕ್ರಮದ ಆಧಾರದ ಮೇಲೆ Computerized Auto Selection ಮೂಲಕ ಸೀಟು ಹಂಚಿಕೆಯನ್ನು ಮಾಡಲಾಗುವುದು.



logoblog

Thanks for reading Admission for 6th class of 2025 academic year in Ekalavya Residential Schools of the Scheduled Castes Welfare Department

Previous
« Prev Post

No comments:

Post a Comment