Saturday, January 18, 2025

Karnataka Civil Services (Computer Literacy Test) (Amendment) Rules 2025

  Wisdom News       Saturday, January 18, 2025
Hedding ; Karnataka Civil Services (Computer Literacy Test) (Amendment) Rules 2025...



ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ (14) 8ನೇ ಪ್ರಕರಣದೊಂದಿಗೆ ಓದಲಾದಂತೆ, 3ನೇ ಪ್ರಕರಣದ (1)ನೇ ಉಪ-ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ರಚಿಸಿರುವ ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ಕ್ಕೆ ತಿದ್ದುಪಡಿ ಮಾಡುವ ಸಲುವಾಗಿ ಈ ಕೆಳಗಿನ ನಿಯಮಗಳ ಕರಡನ್ನು, ಸದರಿ ಅಧಿನಿಯಮದ 3ನೇ ಪ್ರಕರಣದ (2)ನೇ ಉಪ ಪ್ರಕರಣದ (ಎ) ಖಂಡದ ಮೂಲಕ ಅಗತ್ಯಪಡಿಸಲಾದಂತೆ ಇದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ, ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಹದಿನೈದು ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ಸೂಚಿಸಲಾಗಿದೆ.

ಸದರಿ ಕರಡು ನಿಯಮಗಳಿಗೆ ಸಂಬಂಧಪಟ್ಟಂತೆ ಮೇಲೆ ಗೊತ್ತುಪಡಿಸಿದ ಅವಧಿ ಕೊನೆಗೊಳ್ಳುವ ಮುಂಚೆ ಯಾರೇ ವ್ಯಕ್ತಿಯಿಂದ ರಾಜ್ಯ ಸರ್ಕಾರವು ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆ ಅಥವಾ ಸಲಹೆಯನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ. ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ವಿಧಾನಸೌಧ, ಬೆಂಗಳೂರು-560001 ಇವರಿಗೆ ಸಲ್ಲಿಸತಕ್ಕದ್ದು

ಸರ್ಕಾರಿ ನೌಕರರ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯ ತಿದ್ದುಪಡಿ ನಿಯಮಗಳು ಏನಿದೆ ಎಂದು ತಿಳಿಯಲು ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ.


logoblog

Thanks for reading Karnataka Civil Services (Computer Literacy Test) (Amendment) Rules 2025

Previous
« Prev Post

No comments:

Post a Comment