Sunday, January 12, 2025

KREIS Morarji Desai School 6th Class Admission For the Year 2025-26

  Wisdom News       Sunday, January 12, 2025
Hedding ; KREIS Morarji Desai School 6th Class Admission For the Year 2025-26...



ಮೊರಾರ್ಜಿ ದೇಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ ಮಾದರಿ / ಆಟಲ್ ಬಿಹಾರಿ ವಾಜಪೇಯಿ / ಶ್ರೀಮತಿ ಇಂದಿರಾ ಗಾಂಧಿ / ಡಾ| ಬಿ.ಆರ್. ಅಂಬೇಡ್ಕರ್ / ಮಾಸ್ತಿ ವೆಂಕಟೇಶ ಅಯ್ಯಂಗಾರ್ / ಸಂಗೊಳ್ಳಿ ರಾಯಣ್ಣ / ಕವಿರನ್ನ / ಗಾಂಧಿತತ್ವ / ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ 2025-26 ನೇ ಸಾಲಿನ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ತಿಳಿಸಿದೆ.
5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿನ ವಸತಿ ಶಾಲೆಗಳಿಗೆ ಪ್ರವೇಶ ಪಡೆಯಲು, ದಿನಾಂಕ: 11-01-2025 ರ ಸಂಜೆ 4:00 ರಿಂದ 25-01-2025 ರಾತ್ರಿ 11.59ರ ವರೆಗೆ ರವರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಮ್ಮ ಊರಿನ ಹತ್ತಿರದ ವಸತಿ ಶಾಲೆ / ಕಾಲೇಜುಗಳ ಮೂಲಕ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ದಿನಾಂಕ: 15-02-2025 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರವೇಶ ಪರೀಕ್ಷೆ ನಡೆಸಲಿದೆ.




ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇವರ ದಿನಾಂಕ 08-01-2025 ರ ಪತ್ರದ ಅನ್ವಯ, 2025-26ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರದೇಶಕ್ಕೆ ಅಗತ್ಯವಾದ ಪ್ರದೇಶ ಪರೀಕ್ಷೆ ಮತ್ತು ಆನ್‌ಲೈನ್‌ ಕೌನ್ಸಿಲಿಂಗ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಲಾಗುವುದು. 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಪೋಷಕರು ತಮ್ಮ ಮಕ್ಕಳನ್ನು 5ನೇ ತರಗತಿಗೆ ವಸತಿ ಶಾಲೆಗಳಿಗೆ ದಾಖಲಿಸಲು, ದಿನಾಂಕ 11-01-2025 ສະ₫ 4.00 cc 25-01-2025 ໙ 11.595 ಆಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ / ಕಾಲೇಜುಗಳ ಮೂಲಕ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ದಿನಾಂಕ 15-02-2025 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರವೇಶ ಪರೀಕ್ಷೆ ನಡೆಸಲಿದೆ.


ಅರ್ಜಿ ಸಲ್ಲಿಸುವ ವಿಧಾನ, ಹಾಗೂ "ಮಾಹಿತಿ ಪುಸ್ತಕ-2025" ವನ್ನು ಪ್ರಾಧಿಕಾರದ ವೆಬ್ ಸೈಟ್ http://kea.kar.nic.in ನಲ್ಲಿ ಮತ್ತು ವಸತಿ ಶಿಕ್ಷಣ ಸಂಸ್ಥೆಗಳ ವೆಬ್‌ಸೈಟ್ http://kreis.kar.nic.in ನಲ್ಲಿ ಪ್ರಚುರ ಪಡಿಸಲಾಗಿದೆ. ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ದಿನಾಂಕ 06-02-2025 ರಿಂದ ಈ ಮೇಲ್ಕಂಡ ವೆಬ್‌ ಸೈಟ್ ಗಳಿಂದ ಆಯಾ ವಸತಿ ಶಾಲೆಯಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು.

ಗಮನಿಸಿ: ಅಭ್ಯರ್ಥಿಯು ಈಗಾಗಲೇ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ SATS ಸಂಖ್ಯೆ. ಇತ್ತೀಚಿನ ಭಾವಚಿತ್ರ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳನ್ನು ಅಥವಾ ಜೆರಾಕ್ಸ್ ಪ್ರತಿಗಳನ್ನು ತೆಗೆದುಕೊಂಡು ಅರ್ಜಿ ಸಲ್ಲಿಸುವ ಸಮಯದಲ್ಲಿ ಸಂಬಂಧಿಸಿದ ವಸತಿ ಶಾಲೆ / ಕಾಲೇಜಿನ ಮುಖ್ಯಸ್ಥರನ್ನು ಸಂಪರ್ಕಿಸಬೇಕು.


logoblog

Thanks for reading KREIS Morarji Desai School 6th Class Admission For the Year 2025-26

Previous
« Prev Post

No comments:

Post a Comment