HEDDING : KAS Mains Exam KAT Stay Order....
384 ಗೆಜೆಟೆಡ್ ಪ್ರೊಬೆಷನರ್ಸ (KAS) ಹುದ್ದೆಗಳ ನೇಮಕಾತಿಗೆ (2024 ಡಿಸೆಂಬರ್-29 ರಂದು ನಡೆದಿದ್ದ ಪೂರ್ವಭಾವಿ ಮರುಪರೀಕ್ಷೆ) ತಡೆ ನೀಡಿದ KAT.!!
⚫ ಈ ಹಿಂದಿನ ಲೋಪದೋಷಗಳನ್ನು ಸರಿಪಡಿಸದೇ ಮುಖ್ಯ ಪರೀಕ್ಷೆ ನಡೆಸಲು KPSC ಹೇಗೆ ಅಧಿಸೂಚನೆ ಹೊರಡಿಸಿದೆ.? ಎಂದು ಪ್ರಶ್ನಿಸಿದ ಪೀಠವು (KAT) ಇಂತಹ ಸನ್ನಿವೇಶದಲ್ಲಿ ಮುಖ್ಯ ಪರೀಕ್ಷೆಗೆ ಹೊರಡಿಸಿರುವ ಅಧಿಸೂಚನೆಯನ್ನು ಅಮಾನತ್ತಿನಲ್ಲಿರಿಸುವುದೇ ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.!!
ಕರ್ನಾಟಕ ಲೋಕಸೇವಾ ಆಯೋಗ ನಡೆಸುತ್ತಿರುವ 2023-24ನೇ
ಸಾಲಿನ ಗ್ರೂಪ್ ಎ ಮತ್ತು ಬಿ ವೃಂದದ 384 ಹುದ್ದೆಗಳಿಗೆ ಮುಖ್ಯ ಪರೀಕ್ಷೆ ನಡೆಸಲು ಹೊರಡಿಸಿರುವ ಅಧಿಸೂಚನೆಯನ್ನು ಫೆ.25ವರೆಗೆ ಅಮಾನತ್ತಿನಲ್ಲಿಡಲು ಕರ್ನಾಟಕ ಆಡಳಿತಾತ್ಮಕ ನ್ಯಾಯಾಧಿಕರಣ (ಕೆಎಟಿ) ಮಧ್ಯಂತರ ಆದೇಶ ಮಾಡಿದೆ. ನೇಮಕಾತಿ ಪ್ರಕ್ರಿಯೆಯನ್ನು ಪ್ರಶ್ನಿಸಿ ಪವಿತ್ರ ಮತ್ತಿತರ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಂಗ ಸದಸ್ಯರಾದ ಎಸ್.ವೈ.ವಟವಟಿ ಮತ್ತು ಆಡಳಿತ ಸದಸ್ಯೆ ಡಾ.ಅಮಿತಾ ಪ್ರಸಾದ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿ, ಅರ್ಜಿ ವಿಚಾರಣೆಯನ್ನು ಫೆ.25ಕ್ಕೆ ಮುಂದೂಡಿದೆ. ಮೇಲ್ನೋಟಕ್ಕೆ ಪ್ರಶ್ನೆ ಪತ್ರಿಕೆಗಳನ್ನು ಆಂಗ್ಲಭಾಷೆಯಿಂದ ಕನ್ನಡ ಭಾಷೆಗೆ ಅನುವಾದ ಮಾಡುವಾಗ ದೋಷಗಳಾಗಿರುವುದು ಕಂಡು ಬಂದಿದೆ. ಹಿಂದಿನ ಈ ದೋಷಗಳನ್ನು ಸರಿಪಡಿಸದೆ ಹೇಗೆ ಕೆಪಿಎಸ್‌ಸಿ ಮುಖ್ಯ ಪರೀಕ್ಷೆಯನ್ನು ನಡೆಸಲು ಅಧಿಸೂಚನೆ ಹೊರಡಿಸಿದೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಪ್ರಶ್ನಿಸಿದೆ.
No comments:
Post a Comment