Subject : Order to distribute eggs or banana only and not to distribute chick sweets.
.
ಇದರಲ್ಲಿನ ಸಕ್ಕರೆ ಅಂಶ ಕೂಡ ಅಧಿಕವಾಗಿದ್ದು, ಚಿಕ್ಕಿಯನ್ನು ಸರಿಯಾಗಿ ಸಂಗ್ರಹಿಸದಿದ್ದಲ್ಲಿ ಕಲುಷಿತವಾಗಿ ಮಕ್ಕಳ ಆರೋಗ್ಯಕ್ಕೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳಿರುವುದರಿಂದ ಚಿಕ್ಕಿ ವಿತರಣೆಯನ್ನು ಸ್ಥಗಿತಗೊಳಿಸಿ. ಮೊಟ್ಟೆ ಅಥವಾ ಬಾಳೆಹಣ್ಣು ಮಾತ್ರ ವಿತರಿಸುವ ಕುರಿತು ಕ್ರಮವಹಿಸಲು ಕೋರಿರುತ್ತಾರೆ.
ಮೇಲೆ ಓದಲಾದ ಕ್ರಮಾಂಕ (5)ರ ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಧಾರವಾಡ, ಇವರ ಪತ್ರದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆ ಬದಲಾಗಿ ಶಾಲೆಗಳಲ್ಲಿ ವಿತರಣೆ ಮಾಡಲಾಗುತ್ತಿರುವ ಚಿಕ್ಕಿಯು ನಿಗದಿತ ಪ್ರಮಾಣದಲ್ಲಿ ಇಲ್ಲದಿರುವುದು, ಸಮರ್ಪಕವಾಗಿ ಸಂಗ್ರಹಿಸದೇ ಇರುವುದು ಹಾಗೂ ಅವಧಿ ಮೀರಿದ ಚಿಕ್ಕಿಗಳನ್ನು ಸಂಗ್ರಹಿಸಿ ವಿದ್ಯಾರ್ಥಿಗಳಿಗೆ ವಿತರಿಸುತ್ತಿರುವುದು ಕಂಡು ಬಂದಿರುವುದರಿಂದ ಹಾಗೂ ಅಂತಹ ಚಿಕ್ಕಿಗಳನ್ನು ಸೇವಿಸಿದಲ್ಲಿ ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಚಿಕ್ಕಿ ವಿತರಣೆಯನ್ನು ಸ್ಥಗಿತಗೊಳಿಸಿ ಮೊಟ್ಟೆ ಅಥವಾ ಬಾಳೆಹಣ್ಣುಗಳನ್ನು ಮಾತ್ರ ವಿತರಿಸುವ ಕುರಿತು ಕ್ರಮವಹಿಸಲು ಕೋರಿರುತ್ತಾರೆ.
ಈ ಪ್ರಸ್ತಾವನೆಯಲ್ಲಿ ವಿವರಿಸಲಾದ ಮೇಲ್ಕಂಡ ಅಂಶಗಳನ್ನು ಸರ್ಕಾರವು ಕೂಲಂಕಷವಾಗಿ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದೆ.
ಸರ್ಕಾರದ ಆದೇಶ ಸಂಖ್ಯೆ: ಇಪಿ 99 ಎಂಎಂಎಸ್ 2024,
, 2:17.02.2025.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸಲು ಅನುಮತಿ ನೀಡಿ ಆದೇಶಿಸಿದೆ.
ದಿನೇಶ್ ಎಚ್.ಡಿ.ಕೋಟೆ
ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರು. ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸುವ ಕುರಿತು ಪ್ರತ್ಯೇಕವಾದ ಮಾರ್ಗಸೂಚಿಯನ್ನು ಹೊರಡಿಸತಕ್ಕದ್ದು.
ಈ ಆದೇಶವನ್ನು ಸರ್ಕಾರದ ಆದೇಶ ಸಂಖ್ಯೆ: ಎಫ್‌ಡಿ 07 ಟಿ.ಎಫ್.ಪಿ 2024. ದಿನಾಂಕ: 03.01.2025 ರಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರಿಗೆ ಪ್ರತ್ಯಾಯೋಜಿಸಿರುವ ಅಧಿಕಾರದನ್ವಯ ಹೊರಡಿಸಿದೆ.
No comments:
Post a Comment