Tuesday, February 18, 2025

Regarding allowing students appearing for SSLC and second PUC annual examinations to travel in Corporation buses free of charge on examination days....

  Wisdom News       Tuesday, February 18, 2025
HEDDING : Regarding allowing students appearing for SSLC and second PUC annual examinations to travel in Corporation buses free of charge on examination days....

SSLC ಹಾಗೂ ದ್ವಿತೀಯ PUC ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ನಿಗಮದ ಬಸ್ ಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅನುಮತಿಸುವ ಬಗ್ಗೆ....

 ವಿದ್ಯಾರ್ಥಿಗಳಿಗೆ ನಿಗಮದ ಬಸ್ಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅನುಮತಿಸುವ ಬಗ್ಗೆ.

ಉಲ್ಲೇಖ: 1. ಕರಾರಸಾ ನಿಗಮ ರವರ ಸುತ್ತೋಲೆ ಸಂಖ್ಯೆ1823/2025 ದಿ:14.02.2025.

2. ಸೂಕ್ತಾಧಿಕಾರಿಗಳ ಆದೇಶ ದಿನಾಂಕ:18.02.2025,

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ:01.03.2025 ರಿಂದ ಕರ್ನಾಟಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ದಿನಾಂಕ:21.03.2025 ರಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಿರುವ ಕುರಿತು ಮುಖ್ಯ ಸಂಚಾರ ವ್ಯವಸ್ಥಾಪಕರು(ವಾ), ಕರಾರಸಾ ನಿಗಮ ಬೆಂಗಳೂರು ರವರು ಉಲ್ಲೇಖ-1 ರನ್ವಯ ಸುತ್ತೋಲೆಯನ್ನು ಹೊರಡಿಸಿರುತ್ತಾರೆ. ಅದರಂತೆ ಸೂಕ್ತಾಧಿಕಾರಿಗಳಾದ ಮಾನ್ಯ ವ್ಯವಸ್ಥಾಪಕ ನಿರ್ದೇಶಕರು ಉಲ್ಲೇಖ-2 ರನ್ವಯ ಅನುಮೋದನೆ ನೀಡಿರುತ್ತಾರೆ.

ಅದರನ್ವಯ ಕ.ಕ.ರ.ಸಾ ನಿಗಮವು, ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ០៩:01.03.2025 80 20.03.2025 ៨៨៧ का ... ದಿನಾಂಕಗಳಂದು ಅಂದರೆ, ದಿನಾಂಕ:21.03.2025 ರಿಂದ 04.04.2025 ರವರೆಗೆ ಪರೀಕ್ಷೆಗೆ ಹಾಜರಾಗುವ ದ್ವಿತೀಯ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ "ದ್ವಿತೀಯ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷಾ ಪ್ರವೇಶ ಪತ್ರವನ್ನು" ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಸಂಬಂಧ ನಿಗಮದ ಎಲ್ಲಾ ಚಾಲಕರು ಹಾಗೂ ನಿರ್ವಾಹಕರುಗಳಿಗೆ ದ್ವಿತೀಯ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ.

ಮುಂದುವರೆದು ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದರಿ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ನೀಡಲು ಕ್ರಮಕೈಗೊಳ್ಳುವುದು.

ಚಾಲನಾ ಸಿಬ್ಬಂದಿಗಳು ಮೇಲ್ಕಂಡ ನಿರ್ದೇಶನಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸುವುದು. ಈ ವಿಷಯವನ್ನು ಎಲ್ಲಾ ಘಟಕ ಮತ್ತು ಬಸ್ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಿ ಮೇಲ್ಕಂಡ ನಿರ್ದೇಶನಗಳನ್ನು ಜಾರಿಗೆಗೊಳಿಸಲು ಕ್ರಮವಹಿಸುವಂತೆ ಸೂಚಿಸಲಾಗಿದೆ





logoblog

Thanks for reading Regarding allowing students appearing for SSLC and second PUC annual examinations to travel in Corporation buses free of charge on examination days....

Previous
« Prev Post

No comments:

Post a Comment