Saturday, February 22, 2025

Regarding organizing the District Level Sports Meet to State Government Employees for the year 2024-25

  Wisdom News       Saturday, February 22, 2025
Hedding: Regarding organizing the District Level Sports Meet to State Government Employees for the year 2024-25



ಇಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, 2024-25ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಉಲ್ಲೇಖ (1)ರ ಸರ್ಕಾರಿ ಆದೇಶದಲ್ಲಿ 2023-24 ಹಾಗೂ 2024-25ನೇ ಸಾಲಿನ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಸರ್ಕಾರದಿಂದ ಬಿಡುಗಡೆಯಾದ ರೂ.200.00 ಲಕ್ಷಗಳನ್ನು ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಈಗಾಗಲೇ ಬಿಡುಗಡೆ ಮಾಡಲಾಗಿರುತ್ತದೆ' ಹಾಗೊ ದಿನಾಂಕ 7-08-2025 ರಿಂದ 9-08-2025 ರವರೆಗೂ 2023-24 ಹಾಗೂ 2024- 25 ನೇ ಸಾಲಿನ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಬೆಂಗಳೂರಿನಲ್ಲಿ ಜರುಗಿರುತ್ತದೆ ಎಂದಿದ್ದಾರೆ.


ಈ ಹಿನ್ನೆಲೆಯಲ್ಲಿ ದಿನಾಂಕ: 03-02-2025ರಂದು ಮಾನ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ 2024-25ನೇ ಸಾಲಿನ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಜಿಲ್ಲಾ ಮಟ್ಟದಲ್ಲಿ ಆಯೋಜಿಸುವ ಸಂಬಂಧ ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಹಾಗೂ ಸಂಘದ ಪದಾಧಿಕಾರಿಗಳೊಂದಿಗೆ ಸಭೆಯನ್ನು ನಡೆಸಲಾಗಿದ್ದು ಜಿಲ್ಲಾ ಮಟ್ಟದಲ್ಲಿ ಸರ್ಕಾರಿ ನೌಕರರ ಕ್ರೀಡಾಕೂಟಗಳನ್ನು ಸಂಘಟಿಸುವಂತೆ ಮನವಿ ಮಾಡಿರುತ್ತಾರೆ ಎಂದು ತಿಳಿಸಿದ್ದಾರೆ.

2024-25 ನೇ ಸಾಲಿನಲ್ಲಿ ಜಿಲ್ಲಾ ಪಂಚಾಯತ್ ವಲಯದಲ್ಲಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಕೆಲವು ಜಿಲ್ಲೆಗಳಲ್ಲಿ ಅನುದಾನವನ್ನು ಮೀಸಲಿಟ್ಟಿರುವುದನ್ನು ಕೆಲವು ಸಹಾಯಕ ನಿರ್ದೇಶಕರು ಆಯುಕ್ತಾಲಯದ ಗಮನಕ್ಕೆ ತಂದಿರುತ್ತಾರೆ ಎಂದು ಹೇಳಿದ್ದಾರೆ.

ಈ ಹಿನ್ನಲೆಯಲ್ಲಿ ಎಲ್ಲಾ ಜಿಲ್ಲೆಗಳ ಉಪ/ಸಹಾಯಕ ನಿರ್ದೇಶಕರುಗಳು ಜಿಲ್ಲಾ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಸಂಬಂಧಪಟ್ಟ ಜಿಲ್ಲೆಗಳ ಪಂಚಾಯತ್‌ನ ಜಿಲ್ಲಾ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸದರಿ ವಿಷಯದ ಕುರಿತು ಚರ್ಚಿಸಿ, ಅನುದಾನವು ವ್ಯಪಗತವಾಗದಂತೆ 2025ನೇ ಮಾರ್ಚ್ ಅಂತ್ಯದೊಳಗೆ ಎಲ್ಲಾ ಜಿಲ್ಲೆಗಳಲ್ಲಿ ಅನುಬಂಧ-01 ರಲ್ಲಿ ತಿಳಿಸಿರುವಂತೆ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ನಿಯಮಾವಳಿಗಳನ್ವಯ ಆಯೋಜಿಸಲು ಈ ಮೂಲಕ ಸೂಚಿಸಿದ್ದಾರೆ.

logoblog

Thanks for reading Regarding organizing the District Level Sports Meet to State Government Employees for the year 2024-25

Previous
« Prev Post

No comments:

Post a Comment