Friday, March 7, 2025

Important highlights related to the education sector in the budget held on 07/03/2025...

  Wisdom News       Friday, March 7, 2025
Hedding : Important highlights related to the education sector in the budget held on 07/03/2025..



2025-26ನೇ ಸಾಲಿನ ರಾಜ್ಯ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಪ್ರಸ್ತುತ ಶಾಲಾ ಮಕ್ಕಳಿಗೆ ವಾರಕ್ಕೆ 3 ದಿನ ನೀಡಲಾಗುತ್ತಿದ್ದ ರಾಗಿ ಆರೋಗ್ಯ ಮಿಶ್ರಣವನ್ನು ಇನ್ನು ಮುಂದೆ ವಾರಕ್ಕೆ 5 ದಿನ ನೀಡಲಾಗುವುದು. ಟ್ರಸ್ಟ್ ನಡೆಸುವ 100 ಕೋಟಿ ರೂಪಾಯಿಗಳ ಈ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಶೇಕಡಾ 25ರಷ್ಟು ಹಣ ನೀಡಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಶುಕ್ರವಾರ ಮಂಡಿಸಿರುವ ರಾಜ್ಯ ಬಜೆಟ್ 2025-26ರಲ್ಲಿ 500 ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ 2,500 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ.

ಹಲವು ಜಿಲ್ಲೆಗಳಲ್ಲಿ ಸರ್ಕಾರಿ ಶಾಲೆಗಳ ಪರಿಸ್ಥಿತಿ ಶೋಚನೀಯವಾಗಿದೆ ಎಂಬ ಆರೋಪ ಕೇಳಿಬರುತ್ತಲೇ ಇದೆ. ಈ ನಿಟ್ಟಿನಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ ಮುಂದಾಗಿದ್ದು, ಪ್ರಾಥಮಿಕ ಶಾಲಾ ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆಯನ್ನು ನಿವಾರಿಸಲು 53 ಲಕ್ಷ ಮಕ್ಕಳಿಗೆ ವಾರದಲ್ಲಿ ಆರು ದಿನ ಬಾಳೆಹಣ್ಣು ಮತ್ತು ಮೊಟ್ಟೆ ವಿತರಿಸಲಾಗುತ್ತದೆ.

ಪ್ರಸ್ತುತ ಶಾಲಾ ಮಕ್ಕಳಿಗೆ ವಾರಕ್ಕೆ 3 ದಿನ ನೀಡಲಾಗುತ್ತಿದ್ದ ರಾಗಿ ಆರೋಗ್ಯ ಮಿಶ್ರಣವನ್ನು ಇನ್ನು ಮುಂದೆ ವಾರಕ್ಕೆ 5 ದಿನ ನೀಡಲಾಗುವುದು. ಟ್ರಸ್ಟ್ ನಡೆಸುವ 100 ಕೋಟಿ ರೂಪಾಯಿಗಳ ಈ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಶೇಕಡಾ 25ರಷ್ಟು ಹಣ ನೀಡಲಿದೆ.

ಶಾಲೆಗಳ ಮೇಲ್ದರ್ಜೆಗೆ ಬಜೆಟ್ ನಲ್ಲಿ ಹಣ ಮೀಸಲು

ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ಮೇಲ್ದರ್ಜೆಗೆ ಈ ಬಾರಿಯ ಬಜೆಟ್ ನಲ್ಲಿ 725 ಕೋಟಿ ರೂಪಾಯಿ ಮೀಸಲಿಡಲಾಗಿದ್ದು, ಆ ಮೂಲಕ ಹೊಸ ತರಗತಿಗಳು, ಶೌಚಾಲಯಗಳು ಮತ್ತು ದುರಸ್ತಿ ಕಾರ್ಯ ನಡೆಸಲಾಗುತ್ತದೆ. 50 ಕೋಟಿ ರೂಪಾಯಿಗಳಲ್ಲಿ ಅಗತ್ಯ ಪೀಠೋಪಕರಣಗಳ ದುರಸ್ತಿ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷೆ ಕಲಿಕೆ

ಇಂದು ಕಲಿತು ಹೊರಗೆ ಉದ್ಯೋಗಕ್ಕೆ ಹೋಗುವ ಸಂದರ್ಭದಲ್ಲಿ ಇಂಗ್ಲಿಷ್ ಸಂವಹನದ ಅಗತ್ಯತೆ ಉಂಟಾಗುತ್ತದೆ. ಈ ನಿಟ್ಟಿನಲ್ಲಿ ಶಾಲಾ ಮಟ್ಟದಿಂದಲೇ ಮಕ್ಕಳಲ್ಲಿ ಇಂಗ್ಲಿಷ್ ಕಲಿಕೆಯ ಪರಿಚಯವಾಗಲು 4 ಸಾವಿರ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷೆಗಳನ್ನು ಪರಿಚಯಿಸಲಾಗುತ್ತದೆ. ವಿದ್ಯಾರ್ಥಿಗಳು ಇಂಗ್ಲಿಷ್ ಮತ್ತು ಅವರ ಮಾತೃಭಾಷೆ ಎರಡರಲ್ಲೂ ನಿರರ್ಗಳತೆಯಿಂದ ಮಾತನಾಡಲು ಸಹಾಯ ಮಾಡುವುದು ಇದರ ಉದ್ದೇಶವಾಗಿದೆ.

ಅತಿಥಿ ಉಪನ್ಯಾಸಕರು

ಸರ್ಕಾರಿ ಶಾಲೆಗಳು ಮತ್ತು ಪಿಯು ಕಾಲೇಜುಗಳ ಅತಿಥಿ ಶಿಕ್ಷಕರ ಮಾಸಿಕ ಗೌರವಧನವನ್ನು ಈ ವರ್ಷ 2,000 ರೂ ಹೆಚ್ಚಳ ಮಾಡಲಾಗಿದ್ದು, ಮಧ್ಯಾಹ್ನ ಬಿಸಿಯೂಟ ಕಾರ್ಯಕರ್ತೆಯರ ಗೌರವಧನ ಸಾವಿರ ರೂಪಾಯಿ ಹೆಚ್ಚಳ ಮಾಡಲಾಗಿದೆ.

ಐ ಕೋಡ್ ಲ್ಯಾಬ್

ಪ್ರವರ್ಧಮಾನಕ್ಕೆ ಬರುತ್ತಿರುವ ತಂತ್ರಜ್ಞಾನದೊಂದಿಗೆ ಮುಂದುವರಿಯಲು ಐ-ಕೋಡ್ ಲ್ಯಾಬ್ಸ್ ಸರ್ಕಾರಿ ಶಾಲೆಗಳಲ್ಲಿ ಕೋಡಿಂಗ್ ನ್ನು ಪರಿಚಯಿಸಲಾಗುತ್ತದೆ. 63 ಐಸಿಟಿ-ಆಧಾರಿತ ಶಾಲೆಗಳು ಕೇಂದ್ರಗಳಾಗಿ ಕಾರ್ಯನಿರ್ವಹಿಸಲಿದ್ದು, 756 ಸ್ಪೋಕ್ ಸ್ಕೂಲ್ ಗಳಿಗೆ ಪ್ರಯೋಜನವಾಗಲಿದೆ.

ಬಳ್ಳಾರಿಯಲ್ಲಿರುವ ಸರ್ಕಾರಿ ಶ್ರವಣದೋಷವುಳ್ಳ ಶಾಲೆಯನ್ನು ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಗೆ ಮೇಲ್ದರ್ಜೆಗೇರಿಸಲಾಗುವುದು ಎಂದು ಬಜೆಟ್ ನಲ್ಲಿ ಘೋಷಿಸಲಾಗಿದೆ.


ಶಿಕ್ಷಣ ಕ್ಷೇತ್ರಕ್ಕೆ ಭರ್ಜರಿ ಅನುದಾನ; ಕಲ್ಯಾಣ ಕರ್ನಾಟಕದಲ್ಲಿ 5,267 ಶಿಕ್ಷಕರ ಹುದ್ದೆ ಭರ್ತಿ
500 ಹೊಸ ಕರ್ನಾಟಕ ಪಬ್ಲಿಕ್‌ ಶಾಲೆಗಳ ಪ್ರಾರಂಭ, ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕ ಹಾಗೂ ಬಿಸಿಯೂಟ ತಯಾರಿಸುವ ಸಿಬ್ಬಂದಿ ಗೌರವ ಧನ ಹೆಚ್ಚಳ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಎಂಜಿನಿಯರಿಂಗ್‌ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ಖಾಲಿಯಿರುವ 2,000 ಬೋಧಕ ಹುದ್ದೆಗಳನ್ನು ಭರ್ತಿ, ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಸೇರಿ ಹಲವು ಕೊಡುಗೆಗಳನ್ನು ಶಿಕ್ಷಣ ಕ್ಷೇತ್ರಕ್ಕೆ ಘೋಷಣೆ ಮಾಡಲಾಗಿದೆ.


ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ರಾಜ್ಯ ಬಜೆಟ್‌ (Karnataka Budget 2025)ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ. ಒಟ್ಟು 4,09,549 ಕೋಟಿ ಗಾತ್ರದ ಬಜೆಟ್‌ನಲ್ಲಿ 45,286 ಕೋಟಿ ರೂ.ಗಳನ್ನು ಶಿಕ್ಷಣ ಕ್ಷೇತ್ರಕ್ಕೆ (education sector) ಹಂಚಿಕೆ ಮಾಡಲಾಗಿದೆ. 500 ಹೊಸ ಕರ್ನಾಟಕ ಪಬ್ಲಿಕ್‌ ಶಾಲೆಗಳ ಪ್ರಾರಂಭ, ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕ ಹಾಗೂ ಬಿಸಿಯೂಟ ತಯಾರಿಸುವ ಸಿಬ್ಬಂದಿ ಗೌರವ ಧನ ಹೆಚ್ಚಳ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಎಂಜಿನಿಯರಿಂಗ್‌ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ಖಾಲಿಯಿರುವ 2,000 ಬೋಧಕ ಹುದ್ದೆಗಳನ್ನು ಭರ್ತಿ, ಕಾಲೇಜುಗಳಿಗೆ ಒಟ್ಟಾರೆ 275 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ಕ್ರಮ ಸೇರಿ ಪ್ರಮುಖ ಯೋಜನೆಗಳನ್ನು ಘೋಷಿಸಿದ್ದಾರೆ.

ಪ್ರಾಥಮಿಕ ಶಿಕ್ಷಣ
ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಪ್ರಾರಂಭಿಸಲಾಗಿರುವ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ವಿಸ್ತರಿಸಲು ಉದ್ದೇಶಿಸಿದೆ. ಏಷಿಯನ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಪ್ರಾರಂಭಿಸಲಾಗುವುದು.
ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ ೫೩ ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ಅಜೀಮ್‌ ಪ್ರೇಮ್‌ಜಿ ಫೌಂಡೇಶನ್‌ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ. ಈ ಯೋಜನೆಯನ್ನು 2025-26ನೇ ಸಾಲಿನಲ್ಲಿಯೂ ಮುಂದುವರೆಸಲಾಗುವುದು.
ಶಾಲಾ ಮಕ್ಕಳಿಗೆ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್‌ ವತಿಯಿಂದ ಪ್ರಸ್ತುತ ವಾರದಲ್ಲಿ ಮೂರು ದಿನ ಸಾಯಿ ಶ್ಯೂರ್‌ ರಾಗಿ ಹೆಲ್ತ್‌ ಮಿಕ್ಸ್‌ ಪುಡಿಯನ್ನು ಬಿಸಿ ಹಾಲಿನೊಂದಿಗೆ ಮಿಶ್ರಣ ಮಾಡಿ ವಿತರಿಸಲಾಗುತ್ತಿದೆ. ಈ ಕಾರ್ಯಕ್ರಮವನ್ನು ವಾರದ ಐದು ದಿನಗಳಿಗೆ ವಿಸ್ತರಿಸಲಾಗುವುದು. ಒಟ್ಟಾರೆ 100 ಕೋಟಿ ರೂ. ವೆಚ್ಚದ ಈ ಯೋಜನೆಯ ಶೇ.25 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರದಿಂದ ಭರಿಸಲಾಗುವುದು.
ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ 2,000 ರೂ. ಹೆಚ್ಚಿಸಲಾಗುವುದು.


ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1,000 ರೂ. ಹೆಚ್ಚಿಸಲಾಗುವುದು.

ರಾಜ್ಯದ ಅರ್ಹ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು.
LKG ಯಿಂದ ದ್ವಿತೀಯ ಪಿ.ಯು.ಸಿ ವರೆಗಿನ ಎಲ್ಲಾ ತರಗತಿಗಳ ವಿದ್ಯಾರ್ಥಿಗಳು, ಆಯಾ ತರಗತಿಗೆ ತಕ್ಕಂತೆ ಕಲಿಕೆಯ ಮಟ್ಟವನ್ನು ಹೊಂದುವ ನಿಟ್ಟಿನಲ್ಲಿ ಮೂರು ವರ್ಷಗಳ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು. ಈ ಮೂಲಕ SSLC ಮತ್ತು PUC ಪರೀಕ್ಷೆಗಳ ಫಲಿತಾಂಶದಲ್ಲಿ ಸುಧಾರಣೆ ತರಲಾಗುವುದು. ಇದಕ್ಕಾಗಿ, ಈ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳಲಾಗುವುದು:
i) ಪ್ರಸ್ತುತ 2,619 ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು,

ಒಟ್ಟು 90,195 ವಿದ್ಯಾರ್ಥಿಗಳು ದಾಖಲಾಗಿರುತ್ತಾರೆ.

ಈ ಯೋಜನೆಯನ್ನು 70 ಕೋಟಿ ರೂ. ವೆಚ್ಚದಲ್ಲಿ ಒಟ್ಟಾರೆ 5,000 ಶಾಲೆಗಳಿಗೆ ವಿಸ್ತರಿಸಲಾಗುವುದು.

ii) ʻಕಲಿಕಾ ಚಿಲುಮೆʼ ಕಾರ್ಯಕ್ರಮದಡಿ ಒಂದರಿಂದ ಐದನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸಂತಸದಾಯಕ ಕಲಿಕಾ ಅನುಭವ ಒದಗಿಸುವುದು.

iii) ʻಗಣಿತ ಗಣಕʼ ಕಾರ್ಯಕ್ರಮದಡಿ 3 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಫೋನ್‌ ಮೂಲಕ ವೈಯಕ್ತಿಕ ಬೋಧನೆಯೊಂದಿಗೆ ಬುನಾದಿ ಗಣಿತ ಕೌಶಲ್ಯವನ್ನು ಅಭಿವೃದ್ಧಿಪಡಿಸಿ ರಾಜ್ಯಾದ್ಯಂತ ವಿಸ್ತರಿಸುವುದು.

iv) ʻಓದು ಕರ್ನಾಟಕʼ ಯೋಜನೆಯಡಿ 4 ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ ಬುನಾದಿ ಸಾಕ್ಷರತೆ ಹಾಗೂ ಸಂಖ್ಯಾಜ್ಞಾನದ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವುದು.

v) ಸರ್ಕಾರಿ ಶಾಲೆಗಳಲ್ಲಿ ಅತೀ ಕಡಿಮೆ ಕಲಿಕಾ ಸ್ತರದಲ್ಲಿರುವ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹೆಚ್ಚಿಸುವ ʻಮರುಸಿಂಚನʼ ಕಾರ್ಯಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸುವುದು.

vi) ಕನ್ನಡ ಮತ್ತು ಆಂಗ್ಲ ಭಾಷೆಯನ್ನು ಆತ್ಮವಿಶ್ವಾಸದಿಂದ ಓದಲು ಹಾಗೂ ಗಣಿತದ ಆರಂಭಿಕ ಸಾಮರ್ಥ್ಯಗಳನ್ನು ಗಳಿಸಲು Ek-Step ಸಂಸ್ಥೆಯ ಸಹಯೋಗದೊಂದಿಗೆ AI ಆಧಾರಿತ ʻಕಲಿಕಾದೀಪʼ ಕಾರ್ಯಕ್ರಮವನ್ನು 2,000 ಶಾಲೆಗಳಿಗೆ ವಿಸ್ತರಿಸುವುದು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಕ್ಷರ ಆವಿಷ್ಕಾರ ಯೋಜನೆ ಅಡಿ 2೦೦ ಕೋಟಿ ರೂ. ವೆಚ್ಚದಲ್ಲಿ ಆಯ್ದ 50 ಶಾಲೆಗಳನ್ನು ಸುಸಜ್ಜಿತ ಕೆ.ಪಿ.ಎಸ್.‌ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಮುಂದುವರೆದು, ಇಲಾಖೆಯಲ್ಲಿ ಇನ್ನೂ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತರ್ಕಬದ್ಧಗೊಳಿಸಿ 5,000 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುವುದು.
ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ಭಾರತ್ ಸ್ಕೌಟ್ಸ್‌ ಮತ್ತು ಗೈಡ್ಸ್‌ ಅಂತಾರಾಷ್ಟ್ರೀಯ ಯುವಕರ ತರಬೇತಿ ಕೇಂದ್ರದ ಅಭಿವೃದ್ಧಿಗಾಗಿ ಎರಡು ಕೋಟಿ ರೂ. ಒದಗಿಸಲಾಗುವುದು.


ಉನ್ನತ ಶಿಕ್ಷಣ

ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂ‍ಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ (Centre of Excellence) ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ವಿಶ್ವಬ್ಯಾಂಕ್‌ ನೆರವಿನೊಂದಿಗೆ 2,500 ಕೋಟಿ ರೂ. ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.
ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ|| ಮನಮೋಹನ್‌ ಸಿಂಗ್‌ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು. ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆರ್‌.ಸಿ. ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು.
ಮಹಿಳಾ ಉನ್ನತ ಶಿಕ್ಷಣದ ಬಲವರ್ಧನೆಗಾಗಿ 31 ಮಹಿಳಾ ಕಾಲೇಜುಗಳನ್ನು ಹಿಂದಿನ ವರ್ಷದಲ್ಲಿ ಉನ್ನತೀಕರಿಸಲು ಕ್ರಮ ಕೈಗೊಂಡಿದ್ದು, ಉಳಿದ 26 ಕಾಲೇಜುಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 26 ಕೋಟಿ ರೂ. ಒದಗಿಸಲಾಗುವುದು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್‌ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ಖಾಲಿಯಿರುವ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುವುದು.
ರಾಜ್ಯದ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು, ಪಾಲಿಟೆಕ್ನಿಕ್‌ ಸಂಸ್ಥೆಗಳು ಹಾಗೂ ಪದವಿ ಕಾಲೇಜುಗಳಿಗೆ ಒಟ್ಟಾರೆ 275 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು.
ಹೊಸದಾಗಿ ಪ್ರಾರಂಭಿಸಲಾದ ಪಾಲಿಟೆಕ್ನಿಕ್‌ ಹಾಗೂ ಇಂಜಿನಿಯರಿಂಗ್‌ ಕಾಲೇಜುಗಳಿಗೆ 10 ಕೋಟಿ ರೂ. ವೆಚ್ಚದಲ್ಲಿ ಪೀಠೋಪಕರಣಗಳು, ಉಪಕರಣಗಳು, ಕಂಪ್ಯೂಟರ್‌ಗಳು ಹಾಗೂ ಪುಸ್ತಕಗಳನ್ನು ಒದಗಿಸಲಾಗುವುದು.
ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರಿಗೆ ಇಂಗ್ಲೆಂಡ್‌ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ Chevening Karnataka Masters Fellowship ನೆರವಿನೊಂದಿಗೆ ಒಂದು ವರ್ಷದ ಸ್ನಾತಕೋತ್ತರ ಪದವಿ ಪಡೆಯುವ ಯೋಜನೆ ರೂಪಿಸಲಾಗಿದೆ.
ರಾಜ್ಯದ 16 ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನದಿಂದ ಉದ್ಯೋಗಾರ್ಹತೆಯನ್ನು ಹೆಚ್ಚಿಸಲು ವೃತ್ತಿಪರ ವಿಷಯ ತಜ್ಞರನ್ನು ʻProfessor of Practiceʼ ರನ್ನಾಗಿ ನೇಮಿಸಲು ಉದ್ದೇಶಿಸಲಾಗಿದೆ.
ಉನ್ನತ ಶಿಕ್ಷಣ ಸಂಸ್ಥೆಗಳ ಸಮಗ್ರ ನಿರ್ವಹಣೆಗಾಗಿ ಜಾರಿಮಾಡಿರುವ UUCMS ತಂತ್ರಾಂಶವನ್ನು ಇನ್ನೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಒಟ್ಟಾರೆ 30 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಿಸಲಾಗುವುದು.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜನ್ನು 150 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.

ಅಜೀಂ ಪ್ರೇಮ್‌ಜೀ ಫೌಂಡೇಶನ್‌ರವರ ಸಹಯೋಗದೊಂದಿಗೆ ಕಾಲೇಜು ಶಿಕ್ಷಣ ಇಲಾಖೆಯ ಎಲ್ಲಾ ಬೋಧಕರಿಗೆ ಬೋಧನೆ ಮತ್ತು ಕಲಿಕೆಯನ್ನು ಉತ್ತಮಪಡಿಸಲು ಮುಂದಿನ ಮೂರು ವರ್ಷದೊಳಗೆ ಪುನರ್‌ ಮನನ ತರಬೇತಿ ನೀಡಲಾಗುವುದು.
ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾರುಕಟ್ಟೆ ಆಧಾರಿತ ಕೌಶಲ್ಯ ತರಬೇತಿಗಳನ್ನು ಒದಗಿಸಿ ಉದ್ಯೋಗಕ್ಕೆ ಸಜ್ಜುಗೊಳಿಸಲು ಕೈಗಾರಿಕೆಗಳ ಸಹಭಾಗಿತ್ವದಲ್ಲಿ Internship Program ಹಾಗೂ ವಿಶೇಷ ಕಾರ್ಪೋರೇಟ್‌ ತರಬೇತಿ ಯೋಜನೆಗಳನ್ನು ರೂಪಿಸಲಾಗುವುದು.
KKRDB ವತಿಯಿಂದ 23,000 ವಿದ್ಯಾರ್ಥಿಗಳಿಗೆ ವಿಶೇಷ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು.
ಪ್ರೊ. ನಂಜುಂಡ ಸ್ವಾಮಿ ಸಂಶೋಧನಾ ಪೀಠವನ್ನು ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾರಂಭಿಸಲಾಗುವುದು.






ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಒಟ್ಟಾರೆ 30 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಿಸಲಾಗುವುದು.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜನ್ನು 150 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.
ಅಜೀಂ ಪ್ರೇಮ್‌ಜೀ ಫೌಂಡೇಶನ್‌ರವರ ಸಹಯೋಗದೊಂದಿಗೆ ಕಾಲೇಜು ಶಿಕ್ಷಣ ಇಲಾಖೆಯ ಎಲ್ಲಾ ಬೋಧಕರಿಗೆ ಬೋಧನೆ ಮತ್ತು ಕಲಿಕೆಯನ್ನು ಉತ್ತಮಪಡಿಸಲು ಮುಂದಿನ ಮೂರು ವರ್ಷದೊಳಗೆ ಪುನರ್‌ ಮನನ ತರಬೇತಿ ನೀಡಲಾಗುವುದು.
ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾರುಕಟ್ಟೆ ಆಧಾರಿತ ಕೌಶಲ್ಯ ತರಬೇತಿಗಳನ್ನು ಒದಗಿಸಿ ಉದ್ಯೋಗಕ್ಕೆ ಸಜ್ಜುಗೊಳಿಸಲು ಕೈಗಾರಿಕೆಗಳ ಸಹಭಾಗಿತ್ವದಲ್ಲಿ Internship Program ಹಾಗೂ ವಿಶೇಷ ಕಾರ್ಪೋರೇಟ್‌ ತರಬೇತಿ ಯೋಜನೆಗಳನ್ನು ರೂಪಿಸಲಾಗುವುದು.
KKRDB ವತಿಯಿಂದ 23,000 ವಿದ್ಯಾರ್ಥಿಗಳಿಗೆ ವಿಶೇಷ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು.
ಪ್ರೊ. ನಂಜುಂಡ ಸ್ವಾಮಿ ಸಂಶೋಧನಾ ಪೀಠವನ್ನು ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾರಂಭಿಸಲಾಗುವುದು.




.




logoblog

Thanks for reading Important highlights related to the education sector in the budget held on 07/03/2025...

Previous
« Prev Post

No comments:

Post a Comment