Tuesday, March 4, 2025

Regarding the change in the school times of Urdu primary and high schools in the state during the month of Ramadan

  Wisdom News       Tuesday, March 4, 2025
HEDDING : Regarding the change in the school times of Urdu primary and high schools in the state during the month of Ramadan


ರಂಜಾನ್‌ ಮಾಹೆಯಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಾಲಾ ಅವಧಿ ಬದಲಾವಣೆ ಮಾಡುವ ಬಗ್ಗೆ ಸರ್ಕಾರದ ಸುತ್ತೋಲೆ.



ಈ ಕುರಿತಂತೆ ಉರ್ದು ಮತ್ತು ಇತರೆ ಅಲ್ಪ ಸಂಖ್ಯಾತರ ಭಾಷಾ ಶಾಲೆಗಳ ನಿರ್ದೇಶನಾಲಯದಿಂದ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ನಿರ್ದೇಶನವಿರುತ್ತದೆ.

ಅದರಂತೆ ಶಾಲೆಗಳ ದೈನಂದಿನ ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆಗೆ ಸಲಹಾತ್ಮಕ ವೇಳಾ ಪಟ್ಟಿಯಲ್ಲಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.20ರವರೆಗೆ ಶಾಲಾ ಅವಧಿ ನಿಗದಿಪಡಿಸಲಾಗಿರುತ್ತದೆ ಎಂದಿದೆ.

ಉಲ್ಲೇಖಿತ-2ರ ಸರ್ಕಾರದ ಪತ್ರದಲ್ಲಿ ರಂಜಾನ್ ಮಾಸದ ಪ್ರಯುಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ, ಹಿರಿಯ ಮತ್ತು ಪ್ರೌಢಶಾಲೆಗಳನ್ನು ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 12.45 ರವರೆಗೆ ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಿಂದ ಒಂದು ತಿಂಗಳವರೆಗೆ ಮಾತ್ರ ನಡೆಸಲು ಈ ಹಿಂದೆ ದಿನಾಂಕ: 31.10.2002 ರಲ್ಲಿ ಹೊರಡಿಸಲಾಗಿದ್ದ ಸ್ಟ್ಯಾಂಡಿಂಗ್ ಆರ್ಡರ್ (Standing Order) ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮವಹಿಸುವಂತೆ ಸೂಚಿಸಲಾಗಿರುತ್ತದೆ ಎಂದು ಹೇಳಿದೆ.

ಆದೇಶ:

1) 2024-25ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಉರ್ದು ಮಾಧ್ಯಮದ ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆಗಳು ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಿಂದ ದಿನಾಂಕ:31.03.2025ರವರೆಗೆ ಮಾತ್ರ ಶಾಲಾ ಅವಧಿಯ ವೇಳಾಪಟ್ಟಿಯ ಬದಲಾವಣೆಯ ವಿವರಗಳು ಈ ಕೆಳಗಿನ ಪಿಡಿಎಫ್ ಅಲ್ಲಿ ಇವೆ.


logoblog

Thanks for reading Regarding the change in the school times of Urdu primary and high schools in the state during the month of Ramadan

Previous
« Prev Post

No comments:

Post a Comment